ನೆರೆ ಪ್ರದೇಶಗಳಿಗೆ ನೀಡಲು ಹಣದ ಕೊರತೆ ಇಲ್ಲ: ಆರ್.ಅಶೋಕ್
ಬೆಂಗಳೂರು, ಸೆಪ್ಟೆಂಬರ್ 05: ನೆರೆ ಪ್ರದೇಶಗಳ ನಿರ್ವಹಣೆಗೆ ಸರ್ಕಾರದ ಬಳಿ ಹಣ ಇದೆ ಈ ಬಗ್ಗೆ ಗೊಂದಲ ಬೇಡ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ತಮ್ಮ ಕಚೇರಿಗೆ ಪೂಜೆ ಮಾಡಿದ ಅವರು, ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಬೆಳಗಾವಿಗೆ ಈಗಾಗಲೇ 30 ಕೋಟಿ ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಗೂ ಹಣ ಬಿಡುಗಡೆ ಮಾಡಲಾಗಿದೆ ಎಂದರು.
ನಮ್ಮ ಇಲಾಖೆ ವತಿಯಿಂದ ತಡೆರಹಿತವಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದು, ನೆರೆ ಪೀಡಿತ ಪ್ರದೇಶಗಳ ಜನರಿಗೆ ಶೀಘ್ರವೇ ಪೂರ್ಣ ಪರಿಹಾರ ಒದಗಿಸಲಾಗುವುದು ಎಂದರು.

ಮಹಾರಾಷ್ಟ್ರದಲ್ಲಿ ಮತ್ತೆ ಮಳೆ ಆಗುತ್ತಿದ್ದು, ಡ್ಯಾಂನಿಂದ ನದಿ ನೀರು ಬಿಡುಗಡೆ ಮಾಡುವ ಸೂಚನೆ ದೊರೆತಿರುವ ಕಾರಣ, ನದಿ ತೀರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ ನೀಡಿದ್ದೇವೆ ಎಂದು ಅವರು ಹೇಳಿದರು.
ನಾಳೆ (ಸೆಪ್ಟೆಂಬರ್ 05) ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ನೆರೆ ಪರಿಹಾರ ಬಿಡುಗಡೆ ಮಾಡುವಂತೆ ಅವರಿಗೆ ಮತ್ತೊಮ್ಮೆ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.
ಡಿ.ಕೆ.ಶಿವಕುಮಾರ್ ಅವರನ್ನು ಇ.ಡಿ ಬಂಧಿಸಿರುವುದರ ಹಿಂದೆ ರಾಜಕೀಯ ದ್ವೇಷ ಇದೆ ಎಂಬುದು ಸುಳ್ಳು, ಹಿಂದೆ ಯಡಿಯೂರಪ್ಪ ಅವರನ್ನು ಬಂಧಿಸಿದ್ದಾಗ ಸಂತೋಶ ಪಟ್ಟಿದ್ದವರು ಈಗ ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.












Click it and Unblock the Notifications