ತಿಂಗಳ ಕಾಲ ರಾಜ್ಯೋತ್ಸವಕ್ಕೆ ಬೆಂಗಳೂರು ಪೊಲೀಸ್ ಬ್ರೇಕ್
ಬೆಂಗಳೂರು, ಅಕ್ಟೋಬರ್. 30: ನವೆಂಬರ್ ತಿಂಗಳು ಸಂಪೂರ್ಣ ನಡೆಯುತ್ತಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಈ ವರ್ಷ ಕೇವಲ ಒಂದು ವಾರ ಕಾಲ ನಡೆಯಲಿದೆ. ಸಾರ್ವಜನಿಕ ಕಾರ್ಯಕ್ರಮ ಆಯೋಜನೆ ವಾರಕ್ಕೆ ಸೀಮಿತ ಮಾಡಬೇಕು ಎಂದು ಬೆಂಗಳೂರು ನಗರ ಪೊಲೀಸರು ಆದೇಶ ಹೊರಡಿಸಿದ್ದಾರೆ.
ರಸ್ತೆಗಳ ಮಧ್ಯೆ ದೊಡ್ಡ ವೇದಿಕೆ ನಿರ್ವಿುಸುವುದರಿಂದ ವಾಹನ ಸಂಚಾರಕ್ಕೆ ಆಡಚಣೆಯಾಗುತ್ತದೆ. ಅಲ್ಲದೆ ಆರ್ಕೆಸ್ಟ್ರಾ ಸೇರಿ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಯಿಂದ ನಾಗರಿಕ ಜೀವನಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ವಾರದ ನಂತರ ಅಗತ್ಯವಿದ್ದರೆ ಆಟದ ಮೈದಾನಗಳಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿಕೊಳ್ಳಬಹುದು ಎಂದು ಪೊಲೀಸರು ತಿಳಿಸಿದ್ದಾರೆ.[ಪ್ರತಿಯೊಬ್ಬ ಕನ್ನಡಿಗನು ನೋಡಲೇಬೇಕಾದ ಮದುವೆಯ ಕರೆಯೋಲೆ]

ಕನ್ನಡ ಪರ ಸಂಘಟನೆಗಳ ಆಕ್ರೋಶ
ಪೊಲೀಸರ ಆದೇಶಕ್ಕೆ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಆದೇಶ ಹಿಂದಕ್ಕೆ ಪಡೆಯದಿದ್ದರೆ ಪ್ರತಿಭಟನೆ ಮಾರ್ಗ ಹಿಡಿಯಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. [ಮಲೇಶಿಯಾದಲ್ಲಿ ಕನ್ನಡ ಡಿಂಡಿಮ]
ಸಾರ್ವಜನಿಕ ಹಿತಾಸಕ್ತಿ ಹಾಗೂ ಭದ್ರತೆ ದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅವಧಿ ಮುಗಿದ ಬಳಿಕ ಕಾರ್ಯಕ್ರಮ ನಡೆಸಲು ಅನುಮತಿ ನೀಡುವುದಿಲ್ಲ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಅಂಥವರ ವಿರುದ್ಧ ಕಾನೂನಿನ ಅನ್ವಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪೊಲೀಸ್ ಆಯುಕ್ತ ಎನ್.ಎಸ್. ಮೇಘರಿಖ್ ತಿಳಿಸಿದ್ದಾರೆ.
ಸರ್ಕಾರದ ಕ್ರಮವನ್ನು ಸಾಹಿತಿಗಳು ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಖಂಡಿಸಿದ್ದು ಆದೇಶವನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯ ಮಾಡಿವೆ.












Click it and Unblock the Notifications