ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶೇ.90 ರಷ್ಟು ರೋಗಿಗಳಿಗೆ ಆಸ್ಪತ್ರೆ ಅಗತ್ಯವಿಲ್ಲ: ಸುಧಾಕರ್

|
Google Oneindia Kannada News

ಬೆಂಗಳೂರು, ಏಪ್ರಿಲ್ 21: ರಾಜ್ಯದ ಕೋವಿಡ್ ಸ್ಥಿತಿಗತಿ ಹಾಗೂ ರಾಜ್ಯ ಸರ್ಕಾರದಿಂದ ಕೈಗೊಂಡ ಕ್ರಮಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವಿವರ ನೀಡಿದರು.

ಕೊರೊನಾ ಪಾಸಿಟಿವ್ ಬಂದ ಕೂಡಲೇ ಆಸ್ಪತ್ರೆಗೆ ದಾಖಲಾಗುವ ಮಟ್ಟಿಗೆ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಶೇ.90 ರಷ್ಟು ರೋಗಿಗಳಿಗೆ ಆಸ್ಪತ್ರೆ ಅಗತ್ಯವಿಲ್ಲ. ಮನೆಯಲ್ಲೇ ಇದ್ದು ಚಿಕಿತ್ಸೆ ಮಾಡಿಕೊಳ್ಳಬಹುದು. ನಮ್ಮ ವೈದ್ಯರು ಮನೆಗೆ ಭೇಟಿ ನೀಡುವ, ರೋಗಿಗಳ ಆರೋಗ್ಯದ ಮೇಲೆ ನಿಗಾ ಇರಿಸುವ ಕೆಲಸ ಮಾಡುತ್ತಾರೆ. ಯಾವುದನ್ನು ಮಾಡಬೇಕು ಹಾಗೂ ಮಾಡಬಾರದು ಎಂಬ ಬಗ್ಗೆ ಹೆಚ್ಚು ಪ್ರಚಾರ ಮಾಡಲಾಗುವುದು ಎಂದರು.

ಕೊವಿಡ್ 19 ಸೋಂಕಿತರಿಗೆ ಬೆಡ್, ಆಕ್ಸಿಜನ್ ರೆಮ್‌ಡೆಸಿವಿರ್ ಎಲ್ಲಿ ಸಿಗುತ್ತೆ? ಕೊವಿಡ್ 19 ಸೋಂಕಿತರಿಗೆ ಬೆಡ್, ಆಕ್ಸಿಜನ್ ರೆಮ್‌ಡೆಸಿವಿರ್ ಎಲ್ಲಿ ಸಿಗುತ್ತೆ?

ಆಕ್ಸಿಜನ್ ಪೂರೈಕೆ, ರೆಮ್‌ಡೆಸಿವಿರ್ ಲಸಿಕೆ ಕೊರತೆ ಎದುರಾದರೆ ತಕ್ಷಣವೇ ಈ ಸಂಖ್ಯೆಗೆ ಕರೆ ಮಾಡಿ 8951755722- ದಿನದ 24/ 7 ಗಂಟೆ ಕಾರ್ಯ ನಿರ್ವಹಿಸುವ ಹೊಸ ಕಾಲ್ ಸೆಂಟರ್ ಸಂಖ್ಯೆ ಇದಾಗಿದೆ. ರಾಜ್ಯಕ್ಕೆ ಪ್ರತಿ ದಿನ 1,500 ಮೆಟ್ರಿಕ್ ಟನ್ ಆಕ್ಸಿಜನ್ ನಿಗದಿಪಡಿಸಿ ಪೂರೈಸುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೋರಿದ್ದಾರೆ. ನಾನು ಕೂಡ ಈ ಬಗ್ಗೆ ಕೇಂದ್ರಕ್ಕೆ ಮನವಿ ಮಾಡಿದ್ದು, ಕೇಂದ್ರ ಸರ್ಕಾರ ಇದಕ್ಕೆ ಸ್ಪಂದಿಸಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

 ದಿನಕ್ಕೆ 300 ಟನ್ ಆಕ್ಸಿಜನ್ ನಿಗದಿಪಡಿಸಲಾಗಿದೆ

ದಿನಕ್ಕೆ 300 ಟನ್ ಆಕ್ಸಿಜನ್ ನಿಗದಿಪಡಿಸಲಾಗಿದೆ

ರಾಜ್ಯಕ್ಕೆ ದಿನಕ್ಕೆ 300 ಟನ್ ಆಕ್ಸಿಜನ್ ನಿಗದಿಪಡಿಸಲಾಗಿದೆ. ಕೊರೊನಾ ಪ್ರಕರಣ ಹೆಚ್ಚುತ್ತಿರುವುದರಿಂದ ಈ ತಿಂಗಳ ಕೊನೆಗೆ 500-600 ಟನ್ ಆಕ್ಸಿಜನ್ ಬೇಕಾಗುತ್ತದೆ. ಮುಂದಿನ ತಿಂಗಳ ಕೊನೆಗೆ 1,500 ಟನ್ ಆಕ್ಸಿಜನ್ ಬೇಕಾಗುತ್ತದೆ. ಇಷ್ಟು ಪ್ರಮಾಣದ ಆಕ್ಸಿಜನ್ ನೀಡಬೇಕೆಂದು ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ನಾನು ಕೂಡ ಕೇಂದ್ರಕ್ಕೆ ಕೋರಿದ್ದೇನೆ ಎಂದು ತಿಳಿಸಿದರು.

 ವೆಂಟಿಲೇಟರ್ ದೊರೆಯುವಂತೆ ಮಾಡಬೇಕಿದೆ

ವೆಂಟಿಲೇಟರ್ ದೊರೆಯುವಂತೆ ಮಾಡಬೇಕಿದೆ

ಕಡಿಮೆ ರೋಗ ಲಕ್ಷಣವಿದ್ದರೆ ಹೋಟೆಲ್‌ಗಳಲ್ಲಿ ರೂಪಿಸಿದ ಪರ್ಯಾಯ ಆಸ್ಪತ್ರೆಗೆ ಸೇರಬಹುದು. ಸಣ್ಣ ಲಕ್ಷಣವಿರುವವರು ಆಸ್ಪತ್ರೆಗೆ ದಾಖಲಾದರೆ, ಚಿಕಿತ್ಸೆ ಅಗತ್ಯವಿರುವ ರೋಗಿಯ ಹಾಸಿಗೆ ಕಿತ್ತುಕೊಂಡಂತಾಗುತ್ತದೆ. ಅಂತಹ ತೀವ್ರ ರೋಗಿಗಳಿಗೆ ಆಕ್ಸಿಜನ್, ವೆಂಟಿಲೇಟರ್ ದೊರೆಯುವಂತೆ ಮಾಡಬೇಕಿದೆ. ವೈದ್ಯರು ರೋಗಿಯನ್ನು ಪರೀಕ್ಷಿಸಿ ಅಗತ್ಯವಿದ್ದರೆ ಮಾತ್ರ ದಾಖಲಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಕೊವಿಡ್ 19 ಸಂಬಂಧಿಸಿದ ಹೊಸ ಸಹಾಯವಾಣಿ ಪ್ರಕಟಕೊವಿಡ್ 19 ಸಂಬಂಧಿಸಿದ ಹೊಸ ಸಹಾಯವಾಣಿ ಪ್ರಕಟ

 ವೆಬ್ ಪೋರ್ಟಲ್‌ನಲ್ಲೇ ಮಾಹಿತಿ ಲಭ್ಯ

ವೆಬ್ ಪೋರ್ಟಲ್‌ನಲ್ಲೇ ಮಾಹಿತಿ ಲಭ್ಯ

ಬೆಂಗಳೂರಿನಲ್ಲಿ ಖಾಸಗಿ ಮೆಡಿಕಲ್ ಕಾಲೇಜುಗಳು 4 ಸಾವಿರ ಹಾಸಿಗೆ ಕೋವಿಡ್‌ಗೆ ನೀಡಿವೆ. ಸರ್ಕಾರಿ ಮೆಡಿಕಲ್ ಕಾಲೇಜುಗಳು 1 ಸಾವಿರ ಹಾಸಿಗೆ, ಸರ್ಕಾರಿ ಆಸ್ಪತ್ರೆಗಳು 1,409 ಹಾಗೂ ಖಾಸಗಿ ಆಸ್ಪತ್ರೆಗಳು 7,442 ಹಾಸಿಗೆಯನ್ನು ಕೋವಿಡ್‌ಗೆ ಮೀಸಲಿಟ್ಟಿವೆ. ಈ ಕುರಿತು ವೆಬ್ ಪೋರ್ಟಲ್‌ನಲ್ಲೇ ಮಾಹಿತಿ ಲಭ್ಯವಿದೆ. ಈ ವ್ಯವಸ್ಥೆಯನ್ನು ರಾಜ್ಯದ ಮಟ್ಟದಲ್ಲಿ ಜಾರಿ ಮಾಡಲಾಗುತ್ತಿದೆ ಎಂದರು.

 ಸಾವಿನ ಪ್ರಮಾಣದ ಬಗ್ಗೆ ಆತಂಕ ಬೇಡ

ಸಾವಿನ ಪ್ರಮಾಣದ ಬಗ್ಗೆ ಆತಂಕ ಬೇಡ

ಯುವಜನರು ತಮ್ಮ ಕುಟುಂಬದ ಹಿರಿಯರಿಗೆ ಲಸಿಕೆ ನೀಡಿ ಜವಾಬ್ದಾರಿ ಮೆರೆಯಬೇಕು. ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಿರಿ. ದೇಶದಲ್ಲಿ 12.7 ಕೋಟಿ ಲಸಿಕೆ ಡೋಸ್ ನೀಡಲಾಗಿದೆ. ಈ ಪೈಕಿ 99.96% ಜನರಿಗೆ ಕೊರೊನಾ ಸೋಂಕು ಬಂದಿಲ್ಲ. ವೆಂಟಿಲೇಟರ್‌ಗಳನ್ನು ಖಾಸಗಿ ಮೆಡಿಕಲ್ ಕಾಲೇಜು, ಆಸ್ಪತ್ರೆಗಳಿಗೆ ನೀಡಲಾಗಿದೆ.

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ಸಿಜನ್ ಸಿಲಿಂಡರ್, ಬೆಡ್, ಪ್ಲಾಸ್ಮಾ ದಾನಿಗಳು, ಜೀವ ರಕ್ಷಕ ಔಷಧಗಳ ಬೇಡಿಕೆ ಹೆಚ್ಚಾಗಿದೆ.ಬೇಡಿಕೆ ಹೆಚ್ಚಾಗಿರುವುದರಿಂದ ಕೊರೊನಾ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ವೈದ್ಯಕೀಯ ಆಮ್ಲಜನಕ ಪೂರೈಕೆಗೆ ವಾರ್ ರೂಮ್ ರಚಿಸಲಾಗಿದೆ.

ಕೋವಿಡ್ 19ಕ್ಕೆ ಚಿಕಿತ್ಸೆ ಪ್ಲಾಸ್ಮಾ ಹುಡುಕಾಟ ಇಲ್ಲಿವೆ Helplinesಕೋವಿಡ್ 19ಕ್ಕೆ ಚಿಕಿತ್ಸೆ ಪ್ಲಾಸ್ಮಾ ಹುಡುಕಾಟ ಇಲ್ಲಿವೆ Helplines

Recommended Video

ಬೆಂಗಳೂರಿನ ಆಸ್ಪತ್ರೆಗಳಲ್ಲಿ Corona ಸೋಂಕಿತರಿಗೆ ವ್ಯವಸ್ಥೆ ಹೇಗಿದೆ? | Oneindia Kannada

English summary
No need for everyone to get hospitalized, Information on bed availability in web portal said Minister Dr.K.Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X