ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೃಹ ಇಲಾಖೆಗೆ ಸಲಹೆಗಾರರು ಬೇಕಿಲ್ಲ: ಕುಮಾರಸ್ವಾಮಿ

By Manjunatha
|
Google Oneindia Kannada News

ಬೆಂಗಳೂರು, ಮೇ 31: ರಾಜ್ಯದಲ್ಲಿ ಅತ್ಯುತ್ತಮ ಪೊಲೀಸ್ ಅಧಿಕಾರಿಗಳು ಈಗಾಗಲೇ ಇದ್ದಾರೆ ಹಾಗಾಗಿ ಗೃಹ ಇಲಾಖೆಗೆ ಸಲಹೆಗಾರರ ಅಗತ್ಯ ಇಲ್ಲವೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಈಗ ಇರುವ ಉತ್ತಮ ಅಧಿಕಾರಿಗಳೇ ಸಾಕು ಗೃಹ ಇಲಾಖೆಗೆ ಪ್ರತ್ಯೇಕ ಸಲಹೆಗಾರರನ್ನು ನೇಮಕ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.

ಬೆಂಗಳೂರಿನಲ್ಲಿ ಅಮೆರಿಕಾ ರಾಯಭಾರಿ ಕಚೇರಿ ಆರಂಭಿಸಿ: ಸಿಎಂ ಮನವಿ ಬೆಂಗಳೂರಿನಲ್ಲಿ ಅಮೆರಿಕಾ ರಾಯಭಾರಿ ಕಚೇರಿ ಆರಂಭಿಸಿ: ಸಿಎಂ ಮನವಿ

ಕಳೆದ ಸರ್ಕಾರದಲ್ಲಿ ಗೃಹ ಇಲಾಖೆಯ ಸಲಹೆಗಾರರಾಗಿ ಕಾರ್ಯ ನಿರ್ವಹಿಸಿದ್ದ ಕೆಂಪಯ್ಯ ಅವರಿಂದ ಸಾಕಷ್ಟು ವಿವಾದಗಳು ಸೃಷ್ಠಿಯಾಗಿದ್ದವು. ಅವರನ್ನು 'ಹಿಟ್ ಮ್ಯಾನ್' ಎಂದೇ ಪ್ರತಿಪಕ್ಷಗಳು ಕರೆಯುತ್ತಿದ್ದವು.

No need of adviser for Home ministry: Kumaraswamy

ಪೊಲೀಸ್ ಅಧಿಕಾರಿಗಳಿಗೆ ಕೆಂಪಯ್ಯ ಕಿರುಕುಳ ನೀಡುತ್ತಿದ್ದಾರೆ. ಗೃಹ ಇಲಾಖೆಯಲ್ಲಿ ಅವರ ಆದೇಶಗಳೇ ನಡೆಯುತ್ತಿವೆ ಎಂಬೆಲ್ಲಾ ಆರೋಪಗಳು ಇದ್ದವು. ಹೀಗಾಗಿ ಕುಮಾರಸ್ವಾಮಿ ಅವರು ಈ ಬಾರಿ ಯಾರನ್ನೂ ಸಲಹೆಗಾರರನ್ನಾಗಿ ನೇಮಿಸಿಕೊಂಡಿಲ್ಲ.

English summary
CM Kumaraswamy said 'We have very good police officers in Karnataka so government no need adviser for home ministry.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X