ಹೊಸ ವರ್ಷಾಚರಣೆ: ಬೆಂಗಳೂರಿನ ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಅವಕಾಶವಿಲ್ಲ
ಬೆಂಗಳೂರು, ಡಿಸೆಂಬರ್ 12: ಇನ್ನೇನು ಹೊಸ ವರ್ಷ ಸನ್ನಿಹಿತವಾಗುತ್ತಿದ್ದು, ಪ್ರತಿ ವರ್ಷವೂ ಒಂದಲ್ಲಾ ಒಂದು ಸುದ್ದಿ ಮಾಡುತ್ತಿದ್ದ ಬೆಂಗಳೂರು ಈ ಬಾರಿ ಮೌನವಾಗಿರಲಿದೆ.
ಹೌದು ಕೊರೊನಾ ಸೋಂಕಿನಿಂದಾಗಿ ಬೆಂಗಳೂರಿನ ಎಂಜಿ ರಸ್ತೆ, ಬ್ರಿಗೆಡ್ ರಸ್ತೆಯಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಲಿದೆ.
ಜನವರಿ ಹಾಗೂ ಫೆಬ್ರವರಿಯಲ್ಲಿ ರಾಜ್ಯದಲ್ಲಿ ಕೊರೊನಾದ ಎರಡನೇ ಅಲೆ ಆರಂಭವಾಗಲಿದೆ ಎಂದು ತಜ್ಞರು ಹೇಳಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲಾಗುತ್ತದೆ.

ಡಿಸೆಂಬರ್ 31ರ ರಾತ್ರಿ ರಾಜ್ಯಾದ್ಯಂತ ಎಲ್ಲೂ ಸಂಭ್ರಮಾಚರಣೆ ಮಾಡುವಂತಿಲ್ಲ, ಡಿಸೆಂಬರ್ 20 ರಿಂದ ಜನವರಿ 2ರವರೆಗೆ ಕಠಿಣ ನಿಯಮ ಜಾರಿಗೆ ಬರುವ ಸಾಧ್ಯತೆಗಳಿವೆ.
ಧಾರ್ಮಿಕ ಸಭೆ ಸಮಾರಂಭಗಳಲ್ಲಿ 200 ಜನರಿಗೆ ಮಾತ್ರ ಅವಕಾಶ ನೀಡಬಹುದು, ಹೋಟೆಲ್, ಪಬ್, ಬಾರ್, ನೈಟ್ ಕ್ಲಬ್‌ಗಳಲ್ಲಿ ಈಗಿರುವಂತೆ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ, ಹಾಗೆಯೇ ಮನರಂಜನಾ ಕಾರ್ಯಕ್ರಮಗಳು ಬ್ಯಾನ್ ಆಗಲಿವೆ ಎಂದು ಹೇಳಲಾಗಿದೆ.
ಇಂದು ನಡೆದ ಕೊರೊನಾ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಕೊರೊನಾ ಎರಡನೇ ಅಲೆ ಬಗ್ಗೆ ಚರ್ಚೆ ಮಾಡಲಾಗಿದೆ. ಸಭೆ ಸಮಾರಂಭಗಳಿಗೆ ನಿರ್ಬಂಧ ವಿಧಿಸುವುದು, ಹೊಸ ವರ್ಷಕ್ಕೆ ಕಠಿಣ ಕ್ರಮ ಜಾರಿಗೆ ತಜ್ಞರು ಕೊಟ್ಟಿರುವ ವರದಿಯನ್ನು ಅನುಷ್ಠಾನ ಮಾಡುವುದು ಸೇರಿದಂತೆ ಹಲವು ನಿರ್ಧಾರ ತೆಗೆದುಕೊಳ್ಳಲಾಗಿದೆ.
2020 ಕೋವಿಡ್‌ನಿಂದಾಗಿ ಎಲ್ಲರಿಗೂ ಶೋಕಾಚರಣೆಯಂತಾಗಿದೆ. ಕೋವಿಡ್‌ಗೆ ತುತ್ತಾಗಿ ಹಲವರು ಸಾವಿಗೀಡಾಗಿದ್ದಾರೆ. ಹಾಗಾಗಿ ಈ ಬಾರಿಯ ಹೊಸ ವರ್ಷ ಆಚರಿಸುವ ಅಗತ್ಯ ಏನಿದೆ ಎಂದು ಪ್ರಶ್ನಿಸಿದರು.
ಕೊರೊನಾ ಎರಡನೇ ಅಲೆ ಬರುವ ಹಿನ್ನೆಲೆಯಲ್ಲಿ ತಪಾಸಣೆ ಹೆಚ್ಚು ಮಾಡುವಂತೆ 10 ಜಿಲ್ಲೆಗಳಿಗೆ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲೆಗೆ ಗುರಿ ನೀಡಲಾಗಿದ್ದು,ಅದನ್ನು ಕಡ್ಡಾಯವಾಗಿ ತಲುಪಬೇಕು. ಅಷ್ಟೇ ಅಲ್ಲದೆ, ಎರಡು ತಿಂಗಳು ಸಾಮಾಜಿಕ ಕಾರ್ಯಕ್ರಮ, ಮದುವೆ ಕಾರ್ಯಕ್ರಮಕ್ಕೆ ನಿರ್ಬಂಧ ಹೇರಲಾಗುತ್ತದೆ ಎಂದು ಸಚಿವ ಡಾ. ಕೆ ಸುಧಾಕರ್ ತಿಳಿಸಿದರು.












Click it and Unblock the Notifications