ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಚುನಾವಣೆಯಲ್ಲಿ 'ನೋಟಾ'ಕ್ಕೆ ಅವಕಾಶವಿಲ್ಲ

|
Google Oneindia Kannada News

ಬೆಂಗಳೂರು, ಆಗಸ್ಟ್ 20 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನೋಟಾ ಬಳಸುವ ಅವಕಾಶವನ್ನು ಮತದಾರರಿಗೆ ಒದಗಿಸುವಂತೆ ಆದೇಶ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇದರಿಂದಾಗಿ ಬಿಬಿಎಂಪಿ ಚುನಾವಣೆಯಲ್ಲಿ ನೋಟಾ ಬಳಸುವಂತಿಲ್ಲ.

ಬೆಂಗಳೂರಿನ ವಕೀಲ ಅಮೃತೇಶ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಎಸ್‌.ಕೆ.ಮುಖರ್ಜಿ ಮತ್ತು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರ ವಿಭಾಗೀಯ ಪೀಠ ಬುಧವಾರ ವಜಾಗೊಳಿಸಿದೆ. ಬಿಬಿಎಂಪಿ ಚುನಾವಣೆಗೆ ಮೂರು ದಿನಗಳು ಬಾಕಿ ಉಳಿದಿರುವ ಹಿನ್ನಲೆಯಲ್ಲಿ ಅರ್ಜಿಯನ್ನು ವಜಾಗೊಳಿಸಲಾಗಿದೆ. [ಚುನಾವಣೆಯಲ್ಲಿ ನೋಟಾ ಏಕಿಲ್ಲ?]

nota

ಆ.22ರಂದು ಚುನಾವಣೆ ದಿನಾಂಕ ನಿಗದಿಯಾಗಿದೆ ಈ ಸಂದರ್ಭದಲ್ಲಿ ನೋಟಾ ಅವಳಡಿಕೆ ಸಾಧ್ಯವಿಲ್ಲ. ಆದ್ದರಿಂದ ಅರ್ಜಿಯನ್ನು ವಜಾಗೊಳಿಸಲಾಗುತ್ತಿದೆ ಎಂದು ಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಇದರಿಂದ ಬಿಬಿಎಂಪಿ ಚುನಾವಣೆಯಲ್ಲಿ ನೋಟಾ ಮತದಾನ ಮಾಡುವಂತಿಲ್ಲ. [ಬಿಬಿಎಂಪಿ ಚುನಾವಣೆ, ಪ್ರಚಾರದ ಚಿತ್ರಗಳು]

ಸುಪ್ರೀಂಕೋರ್ಟ್ ಚುನಾವಣೆಯಲ್ಲಿ ನೋಟಾ (NOTA- None Of The Above) ಅವಕಾಶ ನೀಡಬೇಕು ಎಂದು ತೀರ್ಪು ನೀಡಿತ್ತು. ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಪೈಕಿ ಯಾರೂ ಸಮರ್ಥ ಅಭ್ಯರ್ಥಿ ಇಲ್ಲ ಎಂದು ಕಂಡು ಬಂದಲ್ಲಿ ನಕಾರಾತ್ಮಕ ಮತದಾನ ಮಾಡುವ ಅವಕಾಶವನ್ನು ಮೊಟ್ಟ ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಕಲ್ಪಿಸಲಾಗಿತ್ತು.

ಆದರೆ, ಬಿಬಿಎಂಪಿ ಚುನಾವಣೆಯಲ್ಲಿ ನೋಟಾ ಬಳಕೆಗೆ ಅವಕಾಶ ನೀಡಿರಲಿಲ್ಲ. ಆದ್ದರಿಂದ ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲಾಗಿತ್ತು. ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಮತದಾನ ಮಾಡದೇ ಮನೆಯಲ್ಲಿ ಕೂರುವುದಕ್ಕಿಂತ ನೋಟಾ ಉತ್ತಮವಾದ ಅವಕಾಶವಾಗಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

English summary
Karnataka High Court dismissed a petition seeking introduction of NOTA (None of the Above) option in the Bruhat Bengaluru Mahanagara Palike (BBMP) election 2015.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X