ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಾವಗಡ ಸೋಲಾರ್ ಪಾರ್ಕ್: ಚರಿತ್ರೆ ಬದಲಿಸಲು ಸಾಧ್ಯವಿಲ್ಲ ಎಂದ ಡಿಕೆಶಿ

|
Google Oneindia Kannada News

ಬೆಂಗಳೂರು, ನವೆಂಬರ್ 5: ಪಾವಗಡ ಸೋಲಾರ್ ಪಾರ್ಕ್ ಯೋಜನೆಯಲ್ಲಿನ ರೈತಪರ ನೀತಿಯನ್ನು ಕೇಂದ್ರ ಸರ್ಕಾರ ಮೆಚ್ಚಿ ಪ್ರಶಸ್ತಿ ನೀಡಿದೆ. ಇದನ್ನು ಕರ್ನಾಟಕ ಮಾಡೆಲ್ ಎಂದೂ ಬಣ್ಣಿಸಿ, ಇತರ ರಾಜ್ಯಗಳಿಗೂ ಇದನ್ನು ಅನುಸರಿಸುವಂತೆ ಹೇಳಿತ್ತು. ಈಗ ರಾಜ್ಯ ಸರ್ಕಾರ ಈ ಯೋಜನೆ ಬಗ್ಗೆ ಯಾವುದೇ ತನಿಖೆ ನಡೆಸಿದರೂ ನಾನು ಸ್ವಾಗತಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಸೋಲಾರ್ ಪಾರ್ಕ್ ಯೋಜನೆಯಲ್ಲಿ ಅಕ್ರಮ ನಡೆದಿದೆ, ಇದರ ತನಿಖೆ ಮಾಡುತ್ತೇವೆ ಎನ್ನುವ ರಾಜ್ಯ ಸರ್ಕಾರವು ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಈ ಯೋಜನೆ ಪ್ರಸ್ತಾಪಿಸಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿ ಕೆ ಶಿವಕುಮಾರ್, ಚರಿತ್ರೆಯನ್ನು ಯಾರೂ ಬದಲಿಸಲು ಸಾಧ್ಯವಿಲ್ಲ. ನಾನು ಯಾವ ಯೋಜನೆ ಮಾಡಿದ್ದೇನೆ, ಎಷ್ಟು ಪಾರದರ್ಶಕವಾಗಿ ಮಾಡಿದ್ದೇನೆ ಎಂದು ಕೇಂದ್ರ ಸರ್ಕಾರಕ್ಕೆ ತಿಳಿದಿದೆ. ಸೋಲಾರ್ ಪಾರ್ಕ್ ಯೋಜನೆಯಲ್ಲಿ ಬಳಕೆಯಾದ ಜಮೀನು ರೈತರ ಬಳಿಯೇ ಉಳಿದುಕೊಂಡು, ರೈತರೇ 20 ಮೆಗವ್ಯಾಟ್ ವಿದ್ಯುತ್ ಉತ್ಪಾದಿಸುವಂತಾಗಿದೆ.

ಈ ಯೋಜನೆ ಬಗ್ಗೆ ಈಗಿನ ಸಚಿವರು ಹಾಗೂ ಮಂತ್ರಿಗಳಿಗೆ ಎಷ್ಟು ಗೊತ್ತಿದೆಯೋ, ಇಲ್ಲವೋ ತಿಳಿದಿಲ್ಲ. ಅವರು ದಾಖಲೆಗಳನ್ನು ತೆಗೆದು ನೋಡಲಿ. ರಾಷ್ಟ್ರೀಯ ಮಟ್ಟದ ಇಂಧನ ಸಭೆಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್, ಇತರ ಸಚಿವರು ಹಾಗೂ ಪ್ರಧಾನಿಗಳು ನನಗೆ ಪ್ರಶಸ್ತಿ ನೀಡಿದ್ದಾರೆ. ಈ ಯೋಜನೆಯಲ್ಲಿ ರೈತರ ಪರ ತೆಗೆದುಕೊಳ್ಳಲಾದ ನೀತಿಯನ್ನು ಕರ್ನಾಟಕದ ಮಾಡೆಲ್ ಎಂದು ಕರೆದು ಎಲ್ಲಾ ರಾಜ್ಯಗಳು ಇದನ್ನು ಪಾಲಿಸುವಂತೆ ಪತ್ರ ಬರೆಯಲಾಗಿತ್ತು. ಈ ದಾಖಲೆ ನನ್ನ ಬಳಿಯೇ ಇದೆ.

No one can change history, whatever probe the state govt conducts is welcome sasy DK Sivakumar

ಈ ಯೋಜನೆಗೆ 6 ತಿಂಗಳ ಮುಂಚಿತವಾಗಿ ಜಾಹೀರಾತು ನೀಡಿ ಟೆಂಡರ್ ಕರೆಯಲಾಗಿತ್ತು. ಇದೆಲ್ಲವನ್ನೂ ರಾಜ್ಯದ ಅಧಿಕಾರಿಗಳು ಮಾಡಿದ್ದರು. ಈಗಿನ ಇಲಾಖೆ ಕಾರ್ಯದರ್ಶಿಗಳು, ಸರ್ಕಾರ ಯಾರನ್ನೂ ಕೆಆರ್ ಸಿ ಮುಖ್ಯಸ್ಥರನ್ನಾಗಿ ಮಾಡಿದೆಯೋ ಅವರೂ ಈ ಯೋಜನೆ ಭಾಗವಾಗಿದ್ದರು. ಅವರನ್ನೇ ಈ ಯೋಜನೆ ಬಗ್ಗೆ ಕೇಳಲಿ, ತನಿಖೆ ಮಾಡಲಿ. ಈ ಯೋಜನೆಯಲ್ಲಿ ನಾನು ಸಣ್ಣ ತಪ್ಪು ಮಾಡಿದ್ದರೂ ಎಂತಹುದೇ ಶಿಕ್ಷೆಗೆ ನಾನು ಬದ್ಧ.

ನಾನು ಇಂಧನ ಇಲಾಖೆ ಜವಾಬ್ದಾರಿ ವಹಿಸಿಕೊಂಡಾಗ ಉತ್ಪಾದನೆ ಎಷ್ಟಿತ್ತು? ಜವಾಬ್ದಾರಿ ಬಿಡುವಾಗ ಉತ್ಪಾದನೆ ಎಷ್ಟಕ್ಕೆ ಏರಿಕೆಯಾಗಿತ್ತು ಎಂದು ಈಗ ಮಾತನಾಡುವುದಿಲ್ಲ. ಎಲ್ಲ ದಾಖಲೆಗಳು ನನ್ನ ಬಳಿಯೇ ಇವೆ. ಯಾವುದೇ ರೀತಿಯ ತನಿಖೆಗೂ ಸಿದ್ಧ. ನಾನು ಅದನ್ನು ಸ್ವಾಗತಿಸುತ್ತೇನೆ.

No one can change history, whatever probe the state govt conducts is welcome sasy DK Sivakumar

ನಾನು ಇಂಧನ ಇಲಾಖೆಯಲ್ಲಿ ಮಾಡಿರುವ ಕೆಲಸದ ಸತ್ಯಾಂಶ ಮುಚ್ಚಿಹಾಕಿದರೆ ಅದರ ಪರಿಣಾಮ ಅವರಿಗೆ ತಗುಲುತ್ತದೆ. ಸತ್ಯಾಂಶವನ್ನು ಅವರು ಮುಚ್ಚಿಹಾಕಬಾರದು. ಈಗ ಇಡೀ ರಾಜ್ಯದಲ್ಲಿ ಯಾವ್ಯಾವ ಹಗರಣ ನಡೆದಿವೆ, ಬಿಟ್ ಕಾಯಿನ್ ಪ್ರಕರಣದಿಂದ ಹಿಡಿದು ಏನೆಲ್ಲ ಪ್ರಕರಣಗಳನ್ನು ಅವರು ಹೇಗೆಲ್ಲಾ ಮುಚ್ಚಿಹಾಕಿದ್ದಾರೆ ಎಂದು ಗೊತ್ತಿದೆ. ಅವರು ಏನು ಮಾಡುತ್ತಾರೋ ಮಾಡಲಿ, ಸಮಯ ಬಂದಾಗ ನಾನು ಮಾತನಾಡುತ್ತೇನೆ.

No one can change history, whatever probe the state govt conducts is welcome sasy DK Sivakumar

ಭಾರತ ಜೋಡೋ ಯಾತ್ರೆ ಸಂದರ್ಭದಲ್ಲಿ ಕೆಜಿಎಫ್ 2 ಚಿತ್ರದ ಹಾಡಿನ ಬಳಕೆ ವಿಚಾರವಾಗಿ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಹಾಗೂ ಇತರ ನಾಯಕರ ವಿರುದ್ಧ ದೂರು ದಾಖಲಾಗಿರುವ ಕುರಿತು ಮಾತನಾಡಿ, ದೇಶದೆಲ್ಲೆಡೆ ಜನ ಸಿನಿಮಾ ಹಾಡುಗಳನ್ನು ತಮ್ಮ ವಿಡಿಯೋಗಳಿಗೆ ಬಳಸುತ್ತಾರೆ. ಅದರಲ್ಲಿ ಯಾವ ಅಪರಾಧ ಇದೆಯೋ ಎಂದು ತಿಳಿಯುತ್ತಿಲ್ಲ. ಇಂತಹ ಪ್ರಕರಣಗಳ ಅನೇಕ ಉದಾಹರಣೆ ಪಟ್ಟಿ ನೀಡಬಹುದು. ಇದನ್ನು ನಾವು ಕಾನೂನಿನ ಮೂಲಕ ಎದುರಿಸುತ್ತೇವೆ 'ಎಂದರು.

English summary
The Central Government has given an award in appreciation of Pavagada Solar Park project,No one can change history, whatever probe the state govt conducts is welcome sasy DK Sivakumar,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X