ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

200ಕ್ಕೂ ಹೆಚ್ಚು ಪೊಲೀಸ್‌ ಅಧಿಕಾರಿಗಳಿಗೆ ವರ್ಗಾವಣೆ ಭಾಗ್ಯ ಇಲ್ಲ

By Nayana
|
Google Oneindia Kannada News

ಬೆಂಗಳೂರು, ಆಗಸ್ಟ್ 9: ಇನ್ನೂರಕ್ಕೂ ಹೆಚ್ಚು ಪೊಲೀಸ್‌ ಅಧಿಕಾರಿಗಳು ತಮ್ಮ ವರ್ಗಾವಣೆ ನಿರೀಕ್ಷೆಯಲ್ಲಿದ್ದರು ಆದರೆ ಇದಕ್ಕೆ ರಾಜ್ಯ ಚುನಾವಣಾ ಆಯೋಗ ತಡೆಯೊಡ್ಡಿದೆ.

105 ನಗರ ಸ್ಥಳೀಯ ಸಂಸ್ಥೆಗಳಿಗೆ ಸೆಪ್ಟೆಂಬರ್‌ 4ರಂದು ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಯಾವುದೇ ಅಧಿಕಾರಿಗಳನ್ನು ವರ್ಗಾವಣೆ ಮಾಡಬಾರದೆಂದು ಚುನಾವಣಾ ಆಯೋಗ ಪೊಲೀಸ್‌ ಮಹಾನಿರ್ದೇಶಕರಿಗೆ ಸೂಚನೆ ನೀಡಿದೆ. ಈಗಾಗಲೇ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಮುಗಿದಿದ್ದು, ಪೊಲೀಸ್‌ ಇಲಾಖೆಯಲ್ಲಿನ ಸಬ್‌ ಇನ್ಸ್‌ಪೆಕ್ಟರ್‌ ಮಟ್ಟದ 350 ಅಧಿಕಾರಿಗಳನ್ನು ಡಿಜಿಪಿ ಹಂತದಲ್ಲಿ ವರ್ಗ ಮಾಡಲಾಗಿದೆ.

ಮುಂದುವರೆದ ವರ್ಗಾವಣೆ ಪರ್ವ: ಹತ್ತು ಐಪಿಎಸ್ ಅಧಿಕಾರಿಗಳು ಎತ್ತಂಗಡಿಮುಂದುವರೆದ ವರ್ಗಾವಣೆ ಪರ್ವ: ಹತ್ತು ಐಪಿಎಸ್ ಅಧಿಕಾರಿಗಳು ಎತ್ತಂಗಡಿ

ಪೊಲೀಸ್‌ ಎಸ್ಟಾಬ್ಲಿಷ್‌ಮೆಂಟ್‌ ಬೋರ್ಡ್‌ನಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದ 205ಇನ್ಸ್‌ಪೆಕ್ಟರ್‌ಗಳು, 26 ಎಸ್‌ಪಿ ಹಂತದ ಅಧಿಕಾರಿಗಳ ವರ್ಗಾವಣೆಗೆ ಚುನಾವಣಾ ಆಯೋಗದ ಆದೇಶ ಅಡ್ಡಿಯಾಗಿದೆ. ಈಗಾಗಲೇ ಶೈಕ್ಷಣಿಕ ವರ್ಷ ಆರಂಭಗೊಂಡಿರುವುದರಿಂದ ತುರ್ತಾಗಿ ವರ್ಗಾವಣೆ ಪ್ರಕ್ರಿಯೆ ನಡೆಸುವಂತೆ ಪೊಲೀಸ್‌ ಅಧಿಕಾರಿಗಳು, ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲಾರಂಭಿಸಿದ್ದರು. ಪೊಲೀಸ್‌ ಇಲಾಖೆ ಮೂಲಗಳ ಪ್ರಕಾರ ಈಗಾಗಲೇ ಇನ್ಸ್‌ಪೆಕ್ಟರ್‌ ಹಾಗೂ ಡಿವೈಎಸ್‌ಪಿ ಕೇಡರ್‌ ಅಧಿಕಾರಿಗಳ ವರ್ಗ ಪಟ್ಟಿ ಸಿದ್ಧಗೊಂಡಿದ್ದು, ಒಂದೆರೆಡು ದಿನಗಳಲ್ಲಿ ಹೊರಬೀಳುವ ನಿರೀಕ್ಷೆ ಇದೆ.

No police transfer till ULB poll over

ಆದೇಶದಲ್ಲಿರುವುದು ಏನು? ರಾಜ್ಯದ 105 ನಗರ ಸ್ಥಳೀಯ ಸಂಸ್ಥೆಗಳಿಗೆ ಒಂದು ಹಂತದಲ್ಲೇ ಚುನಾವಣೆ ನಡೆಸಲು ಆ.2ರಂದು ಅಧಿಸೂಚನೆ ಹೊರಡಿಸಲಾಗಿದೆ. ಚುನಾವಣೆಯನ್ನು ಶಾಂತಿ ಹಾಗೂ ಸುವ್ಯವಸ್ಥೆಯಿಂದ ನಡೆಸುವ ಸಲುವಾಗಿ ಸೂಕ್ತ ಬಂದೋಬಸ್ತ್‌ ಕಲ್ಪಿಸಬೇಕಾಗಿದೆ. ಆದ್ದರಿಂದ ಈ ಹಂತದಲ್ಲಿ ಯಾವುದೇ ಅಧಿಕಾರಿಗಳನ್ನು ವರ್ಗಾವಣೆ ಮಾಡಬಾರದು ಎಂದು ಚುನಾವಣಾ ಆಯೋಗ ತಿಳಿಸಿದೆ.

English summary
State election commission has instructed to hold police officers like inspectors, DySPs and SPs till the urban local bodies elections should be completed. The commission has written a letter to the Director General of Police.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X