ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿಬಂಧನೆ ಇಲ್ಲ: ಬಿಸಿ ಪಾಟೀಲ್

|
Google Oneindia Kannada News

ಬೆಂಗಳೂರು,‌ ಮಾ.27: ಮಹಾಮಾರಿ ಕೊರೊನಾದಿಂದ ಇಡೀ ಜಗತ್ತೇ ತಲ್ಲಣಗೊಂಡಿದ್ದು, ಇಂತಹ ಸಂದರ್ಭದಲ್ಲಿ ಜಗತ್ತಿಗೆ ಅನ್ನವನ್ನು ನೀಡುವ ಅನ್ನದಾತನಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ದಿಟ್ಟ ಕ್ರಮಗಳನ್ನು ಕೈಗೊಂಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ರೈತರು ಬೆಳೆದಂತಹ ಬೆಳೆಗಳನ್ನು ಕೊಯ್ಲು ಮಾಡಲು ಮಾರಾಟ ಮಾಡಲು ಯಾವುದೇ ನಿಬಂಧನೆಗಳು ಇರುವುದಿಲ್ಲ. ಮಾನ್ಸೂನ್ ಪ್ರಾರಂಭವಾದಲ್ಲಿ ರೈತ ಹೊಲದಲ್ಲಿ ಬಿತ್ತನೆ ಮಾಡಲು, ಸರ್ಕಾರ ರೈತನಿಗೆ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಒದಗಿಸಲು ಕ್ರಮಗಳನ್ನು ಕೈಗೊಂಡಿದೆ. ಬೆಳೆಗಳನ್ನು ಸಾಗಾಣಿಕೆ ಮಾಡಲು ಎಸೆನ್ಷಿಯಲ್ ಕಮಾಂಡಿಟಿಸ್ ಆ್ಯಕ್ಟ್(ಅಗತ್ಯ ವಸ್ತುಗಳ ಕಾಯಿದೆ) ಅಡಿ ತಂದಿದ್ದು, ಈ ಸಂಬಂಧ ರಾಜ್ಯದ ಎಲ್ಲಾ ಕೃಷಿ ನಿರ್ದೇಶಕರು ಹಾಗೂ ಜಂಟಿ ಕೃಷಿ ನಿರ್ದೇಶಕರುಗಳಿಗೆ ಹಾಗೂ ಎಲ್ಲಾ ಇಲಾಖೆಗಳಿಗೂ ಸುತ್ತೋಲೆ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೊರೊನಾ ತಡೆಯುವಲ್ಲಿ ಸರ್ಕಾರಕ್ಕೆ ಬೆಂಬಲ; ಡಿ ಕೆ ಶಿವಕುಮಾರ್ಕೊರೊನಾ ತಡೆಯುವಲ್ಲಿ ಸರ್ಕಾರಕ್ಕೆ ಬೆಂಬಲ; ಡಿ ಕೆ ಶಿವಕುಮಾರ್

ರಾಯಚೂರು, ಕೊಪ್ಪಳ,‌ ಬಳ್ಳಾರಿ ಹಾಗೂ ಇತರೆ ಭಾಗಗಳಲ್ಲಿ ಬತ್ತ ಬೆಳೆದ ರೈತರು ಬತ್ತ ಕೊಯ್ಲಿಗೆ ಪರರಾಜ್ಯದಿಂದ ಕೊಯ್ಲು ಯಂತ್ರ ತರಬೇಕಾಗುತ್ತದೆ ಎಂಬ ಆತಂಕದಲ್ಲಿರುವುದು ತಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗಿದ್ದು, ರೈತರು ಯಾವುದೇ ಕಾರಣಕ್ಕೂ ಆತಂಕಕ್ಕೊಳಗಾಗುವುದು ಬೇಡ. ಬಿತ್ತನೆ ಮಾಡಲಾಗಲೀ ಅಥವಾ ಕೊಯ್ಲು ಮಾಡಲಾಗಲಿ ರೈತರಿಗೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

No Restriction To Farmers Said BC Patil

ಹೀಗಾಗಿ ರೈತರು ಯಾವುದೇ ಆತಂಕಕ್ಕೊಳಗಾಗದೇ ತಮ್ಮ ಬಿತ್ತನೆ ಕಾರ್ಯ ಕೃಷಿ ಕಾರ್ಯದಲ್ಲಿ‌ ತೊಡಗಬಹುದು. ಹಾಗೂ ರೈತರ ಕೃಷಿ ಚಟುವಟಿಕೆಗಳಿಗೆ ಯಾರೂ ಸಹ ತೊಂದರೆ ಮಾಡಬಾರದು. ಯಂತ್ರೋಪಕರಣ ತಂದು ಕೊಯ್ಲು ಕೃಷಿ ಚಟುವಟಿಕೆ ಮಾಡುವ ಮುನ್ನ ರೈತರು ಅಧಿಕಾರಿಗಳಿಗೆ ಮಾಹಿತಿ ಕೊಡಬೇಕು. ಕೃಷಿ ಚಟುವಟಿಕೆ ಮಾಡುವಾಗ ರೈತರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಬಿತ್ತನೆ ಬೀಜ ಮತ್ತು ಫಸಲು ಸರಬರಾಜು ಮಾಡುವಾಗ ಇಲಾಖಾಧಿಕಾರಿಗಳಿಂದ ಸರಬರಾಜು ಮಾಡುವ ವಾಹನಗಳಿಗೆ ಕೃಷಿಕರು ಪಾಸ್ ಪಡೆಯಬೇಕು ಎಂದು ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.

English summary
Coronavirus Lockdown: No restriction for Farmers said Karnataka agriculture minister Bc patil
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X