ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಸೀಲ್‌ಡೌನ್‌ ಇಲ್ಲ: ಭಾಸ್ಕರ್ ರಾವ್ ಸ್ಪಷ್ಟನೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 10: ರಾಜ್ಯದಲ್ಲಿ ಲಾಕ್‌ಡೌನ್‌ ಅವಧಿ ಮುಗಿಯುತ್ತಿದ್ದಂತೆ ಸೀಲ್‌ಡೌನ್‌ ಆಗುತ್ತೆ ಎಂಬ ಮಾತುಗಳು ಕೇಳಿಬರುತ್ತಿದೆ. ಸೋಂಕಿತರ ಸಂಖ್ಯೆ ಅಧಿಕವಾಗುತ್ತಿದ್ದು, ನಿಯಂತ್ರಿಸಲು ಸೀಲ್‌ಡೌನ್‌ ಅಗತ್ಯ ಎಂಬ ಸುದ್ದಿಗಳು ಇಂದು ಮಾಧ್ಯಮದಲ್ಲಿ ಸದ್ದು ಮಾಡಿವೆ.

ರಾಜ್ಯಾದ್ಯಂತ ಕೊರೊನಾ ಕೇಸ್‌ ಹೆಚ್ಚಿರುವ ಜಿಲ್ಲೆಗಳನ್ನು ಡೇಂಜರ್ ಝೋನ್ ಎಂದು ಗುರುತಿಸಿ, ಆ ಜಿಲ್ಲೆಗಳನ್ನು ಸಂಪೂರ್ಣವಾಗಿ ಸೀಲ್‌ಡೌನ್‌ ಮಾಡಲಾಗುತ್ತೆ ಎನ್ನಲಾಗುತ್ತಿದೆ. ಈ ನಡುವೆ ಬೆಂಗಳೂರಿನ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಸಂಪೂರ್ಣವಾಗಿ ಸೀಲ್‌ ಡೌನ್‌ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

ಮಂಗಳೂರು, ದಕ್ಷಿಣ ಕನ್ನಡ, ಸೀಲ್ಡ್ ಡೌನ್: ಜಿಲ್ಲಾಡಳಿತದ ಸ್ಪಷ್ಟನೆಮಂಗಳೂರು, ದಕ್ಷಿಣ ಕನ್ನಡ, ಸೀಲ್ಡ್ ಡೌನ್: ಜಿಲ್ಲಾಡಳಿತದ ಸ್ಪಷ್ಟನೆ

ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಡಿಸಿಪಿಗಳ ಸಭೆ ಕರೆದಿದ್ದು, ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬ ಸುದ್ದಿ ಇತ್ತು. ಆದರೆ, ಈ ಬಗ್ಗೆ ಭಾಸ್ಕರ್ ರಾವ್ ಸ್ಪಷ್ಟನೆ ನೀಡಿದ್ದು, ಸದ್ಯಕ್ಕೆ ಬೆಂಗಳೂರಿನಲ್ಲಿ 'ಸೀಲ್‌ಡೌನ್‌' ಇಲ್ಲ ಎಂದಿದ್ದಾರೆ.

No Seal Down In Bengaluru Bhaskar Rao Tweeted

''ಬೆಂಗಳೂರು ಸೀಲ್‌ ಡೌನ್ ಆಗಲಿದೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಇದು ಜನರಿಗೆ ಆತಂಕ ಸೃಷ್ಟಿಸಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಸದ್ಯಕ್ಕೆ ನಗರದಲ್ಲಿ ಇಂತಹ ಪರಿಸ್ಥಿತಿ ಬಂದಿಲ್ಲ. ಆರಾಮಾಗಿರಿ'' ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ.

ಕೊರೊನಾ ಕಡಿವಾಣಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೀಲ್ ಡೌನ್?ಕೊರೊನಾ ಕಡಿವಾಣಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೀಲ್ ಡೌನ್?

ಮತ್ತೊಂದೆಡೆ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಅವರು ಸೀಲ್‌ಡೌನ್‌ ಬಗ್ಗೆ ಸುಳಿವು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ವಾರ್ಡ್ 134 ಮತ್ತು ವಾರ್ಡ್ 135 ಪ್ರದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸುವ ದೃಷ್ಟಿಯಿಂದ ಸೀಲ್‌ಡೌನ್‌ ಮಾಡುವ ಕುರಿತು ಚರ್ಚಿಸಲಾಗುತ್ತಿದೆ ಎಂದಿದ್ದಾರೆ.

''ಬಾಪೂಜಿ ನಗರ ವಾರ್ಡ್ 134 ಮತ್ತು ಪಾದರಾಯನಪುರ ವಾರ್ಡ್ 135ರಲ್ಲಿ ಕೋವಿಡ್19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಪರಿಸ್ಥಿತಿಯನ್ನು ನಿಯಂತ್ರಣ ತರಲು ಈ 2 ವಾರ್ಡ್ ಗಳನ್ನು ಸಂಪೂರ್ಣ ಸೀಲ್ ಡೌನ್ ಮಾಡಲು ಯೋಜಿಸಿದೆ. ಈ ವಾರ್ಡ್ ಗಳಿಗೆ ಅಗತ್ಯವಿರುವ ಎಲ್ಲಾ ವಸ್ತುಗಳ ಸರಬರಾಜು ಬಿಬಿಎಂಪಿ ಮಾಡಲಿದೆ'' ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

English summary
'Rumors and fake news are floating around of a Seal down in Bangalore City and creating panic. Dearest Citizens, there is nothing like that as of now'- bhaskar rao twitted.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X