ಕಬ್ಬನ್ ಪಾರ್ಕ್‌ನಲ್ಲಿ ವಾಹನ ಸಂಚಾರ ನಿಷೇಧವಿಲ್ಲ

ಬೆಂಗಳೂರು, ಏಪ್ರಿಲ್ 9; ಬೆಂಗಳೂರು ನಗರದ ಕಬ್ಬನ್ ಪಾರ್ಕ್ ಆವರಣದಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ಕರ್ನಾಟಕ ಸರ್ಕಾರದ ವಿರುದ್ಧ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಕೆ ಮಾಡಿತ್ತು. ಇದಕ್ಕೆ ಉತ್ತರವಾಗಿ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅಫಿಡವಿಟ್ ಸಲ್ಲಿಕೆ ಮಾಡಿದ್ದಾರೆ.

2020ರ ನವೆಂಬರ್ 11ರಂದು ನಡೆದ ಸಭೆಯಲ್ಲಿ ಕಬ್ಬನ್ ಪಾರ್ಕ್‌ನಲ್ಲಿ ವಾಹನ ಸಂಚಾರ ತಪ್ಪಿಸಲು ಸಾಧ್ಯವಿಲ್ಲ. ಆದ್ದರಿಂದ ಮೊದಲಿನಂತೆ ಮುಂದುವರೆಸಬೇಕು ಎಂಬ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

 No Vehicle Movement Ban Inside Cubbon Park

ಅಫಿಡವಿಟ್ ಆಧರಿಸಿ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಕೈ ಬಿಟ್ಟಿದೆ. ಈ ನಿರ್ಧಾರ ಅರ್ಜಿದಾರರಿಗೆ ತೃಪ್ತಿ ಎನಿಸದಿದ್ದರೆ ಕಾನೂನು ಪ್ರಕಾರ ಮುಂದುವರೆಯಲು ಅವಕಾಶವಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ಕರ್ನಾಟಕ ಸರ್ಕಾರ ನಗರ ಭೂ ಸಾರಿಗೆ ನಿರ್ದೇಶನಾಲಯ (ಡಲ್ಟ್) ಶಿಫಾರಸನ್ನು ಪರಿಗಣಿಸಿಲ್ಲ. ಡಲ್ಟ್ ಶಿಫಾರಸು ಪರಿಗಣಿಸುವಂತೆ ನ್ಯಾಯಾಲಯ ಸರ್ಕಾರಕ್ಕೆ ಸೂಚನೆ ನೀಡಿತ್ತು. ಸರ್ಕಾರ ನ್ಯಾಯಾಲಯದ ಆದೇಶ ಪಾಲಿಸಿಲ್ಲ ಎಂದು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ ಮಾಡಿತ್ತು.

ಕಬ್ಬನ್ ಪಾರ್ಕ್‌ನಲ್ಲಿ ವಾಹನ ಸಂಚಾರ ನಿಷೇಧಿಸಬೇಕು ಎಂಬುದು ಹಲವಾರು ವರ್ಷಗಳ ಬೇಡಿಕೆಯಾಗಿದೆ. ಆದರೆ, ವಾಹನ ಸಂಚಾರ ನಿಷೇಧ ಮಾಡಿದರೆ ವಿಧಾನಸೌಧ, ಹೈಕೋರ್ಟ್ ಮತ್ತು ಸುತ್ತಮುತ್ತಲಿನ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಲಿದೆ ಎಂಬ ಕಾರಣಕ್ಕೆ ಈ ಪ್ರಸ್ತಾವನೆಯನ್ನು ಕೈಬಿಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+