ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಬ್ಬನ್ ಪಾರ್ಕ್‌ನಲ್ಲಿ ವಾಹನ ಸಂಚಾರ ನಿಷೇಧವಿಲ್ಲ

|
Google Oneindia Kannada News

ಬೆಂಗಳೂರು, ಏಪ್ರಿಲ್ 9; ಬೆಂಗಳೂರು ನಗರದ ಕಬ್ಬನ್ ಪಾರ್ಕ್ ಆವರಣದಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ಕರ್ನಾಟಕ ಸರ್ಕಾರದ ವಿರುದ್ಧ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಕೆ ಮಾಡಿತ್ತು. ಇದಕ್ಕೆ ಉತ್ತರವಾಗಿ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅಫಿಡವಿಟ್ ಸಲ್ಲಿಕೆ ಮಾಡಿದ್ದಾರೆ.

ಕಬ್ಬನ್ ಉದ್ಯಾನ ವ್ಯಾಪ್ತಿಯಲ್ಲಿ ನಿಯಮಬಾಹಿರ ಕಟ್ಟಡ ನಿರ್ಮಾಣ: ನೋಟಿಸ್ ಕಬ್ಬನ್ ಉದ್ಯಾನ ವ್ಯಾಪ್ತಿಯಲ್ಲಿ ನಿಯಮಬಾಹಿರ ಕಟ್ಟಡ ನಿರ್ಮಾಣ: ನೋಟಿಸ್

2020ರ ನವೆಂಬರ್ 11ರಂದು ನಡೆದ ಸಭೆಯಲ್ಲಿ ಕಬ್ಬನ್ ಪಾರ್ಕ್‌ನಲ್ಲಿ ವಾಹನ ಸಂಚಾರ ತಪ್ಪಿಸಲು ಸಾಧ್ಯವಿಲ್ಲ. ಆದ್ದರಿಂದ ಮೊದಲಿನಂತೆ ಮುಂದುವರೆಸಬೇಕು ಎಂಬ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಕಬ್ಬನ್ ಪಾರ್ಕ್‌ನಲ್ಲಿ ವಾಹನ ನಿಷೇಧ; ಬೆಂಗಳೂರು ಪೊಲೀಸರ ವರದಿ ಕಬ್ಬನ್ ಪಾರ್ಕ್‌ನಲ್ಲಿ ವಾಹನ ನಿಷೇಧ; ಬೆಂಗಳೂರು ಪೊಲೀಸರ ವರದಿ

 No Vehicle Movement Ban Inside Cubbon Park

ಅಫಿಡವಿಟ್ ಆಧರಿಸಿ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಕೈ ಬಿಟ್ಟಿದೆ. ಈ ನಿರ್ಧಾರ ಅರ್ಜಿದಾರರಿಗೆ ತೃಪ್ತಿ ಎನಿಸದಿದ್ದರೆ ಕಾನೂನು ಪ್ರಕಾರ ಮುಂದುವರೆಯಲು ಅವಕಾಶವಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಕಬ್ಬನ್ ಪಾರ್ಕ್‌ ಅಭಿವೃದ್ಧಿ; ಎರಡು ಹಂತದ ಯೋಜನೆಗೆ 40 ಕೋಟಿ ಕಬ್ಬನ್ ಪಾರ್ಕ್‌ ಅಭಿವೃದ್ಧಿ; ಎರಡು ಹಂತದ ಯೋಜನೆಗೆ 40 ಕೋಟಿ

ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ಕರ್ನಾಟಕ ಸರ್ಕಾರ ನಗರ ಭೂ ಸಾರಿಗೆ ನಿರ್ದೇಶನಾಲಯ (ಡಲ್ಟ್) ಶಿಫಾರಸನ್ನು ಪರಿಗಣಿಸಿಲ್ಲ. ಡಲ್ಟ್ ಶಿಫಾರಸು ಪರಿಗಣಿಸುವಂತೆ ನ್ಯಾಯಾಲಯ ಸರ್ಕಾರಕ್ಕೆ ಸೂಚನೆ ನೀಡಿತ್ತು. ಸರ್ಕಾರ ನ್ಯಾಯಾಲಯದ ಆದೇಶ ಪಾಲಿಸಿಲ್ಲ ಎಂದು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ ಮಾಡಿತ್ತು.

Recommended Video

ಸರ್ಕಾರಿ ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿಪಡಿಸಿ ಮಾದರಿಯಾದ ಶಿಕ್ಷಕ | Oneindia Kannada

ಕಬ್ಬನ್ ಪಾರ್ಕ್‌ನಲ್ಲಿ ವಾಹನ ಸಂಚಾರ ನಿಷೇಧಿಸಬೇಕು ಎಂಬುದು ಹಲವಾರು ವರ್ಷಗಳ ಬೇಡಿಕೆಯಾಗಿದೆ. ಆದರೆ, ವಾಹನ ಸಂಚಾರ ನಿಷೇಧ ಮಾಡಿದರೆ ವಿಧಾನಸೌಧ, ಹೈಕೋರ್ಟ್ ಮತ್ತು ಸುತ್ತಮುತ್ತಲಿನ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಲಿದೆ ಎಂಬ ಕಾರಣಕ್ಕೆ ಈ ಪ್ರಸ್ತಾವನೆಯನ್ನು ಕೈಬಿಡಲಾಗಿದೆ.

English summary
In a affidavit filed by Karnataka government to Karnataka High Court it is clarified that vehicle movement will not banned in the roads inside the Cubbon park, Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X