ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಕುತ್ತು ತರಬೇಡಿ

ಬೆಂಗಳೂರು ಫೆಬ್ರವರಿ 25: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಪರಿಸರ ಸೂಕ್ಷ್ಮ ವಲಯವನ್ನು ಕಡಿತಗೊಳಿಸಬಾರದು ಎಂದು ನಮ್ಮ ಬೆಂಗಳೂರು ಪ್ರತಿಷ್ಠಾನ (ಎನ್‌ಬಿಎಫ್‌) ಒತ್ತಾಯಿಸಿದೆ.

ಎನ್‌ಬಿಎಫ್‌ ಪ್ರಧಾನ ವ್ಯವಸ್ಥಾಪಕ ಹರೀಶ್‌ಕುಮಾರ್‌ ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, '268.96 ಚದರ ಕಿ.ಮೀ. ವಿಸ್ತೀರ್ಣದ ಇಎಸ್‌ಜೆಡ್‌ ವ್ಯಾಪ್ತಿಯನ್ನು 168.84 ಚದರ ಕಿಲೋ ಮೀಟರ್‌ಗೆ ಕುಗ್ಗಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೇ ಕೇಂದ್ರ ಪರಿಸರ ಸಚಿವಾಲಯಕ್ಕೆ ಪತ್ರ ಬರೆದಿರುವುದು ದುರದೃಷ್ಟಕರ' ಎಂದು ಅಸಮಧಾನ ವ್ಯಕ್ತಪಡಿಸಿದರು.

'ಪರಿಸರ ಸೂಕ್ಷ್ಮ ವಲಯವನ್ನು ಕುಗ್ಗಿಸುವುದರಿಂದ ಬೆಂಗಳೂರಿನವರ ಆರೋಗ್ಯದ ಮೇಲೆ ನೇರವಾಗಿ ದುಷ್ಪರಿಣಾಮ ಉಂಟಾಗಲಿದೆ. ವನ್ಯಮೃಗಗಳ ಕಾರಿಡಾರ್‌ಗೂ ಇದು ಧಕ್ಕೆ ತರಲಿದೆ. ಮಾನವ ಮತ್ತು ಕಾಡು ಪ್ರಾಣಿಗಳ ಸಂಘರ್ಷಕ್ಕೆ ದಾರಿ ಮಾಡಿಕೊಡಲಿದೆ. ಕಾವೇರಿ ನದಿಯನ್ನು ಸೇರಿಕೊಳ್ಳುವ ನೀರಿನ ತೊರೆಗಳು ನಾಶವಾಗಲಿದೆ' ಎಂದು ಅಸಮಧಾನ ವ್ಯಕ್ತಪಡಿಸಿದರು.

No Withdraw Eco Sensitive Zone For Bannerghatta National Park

ಬೆಂಗಳೂರಿನಲ್ಲಿ ಶೇ 25ರಷ್ಟು ಮಕ್ಕಳು ಆಸ್ತಮಾದಿಂದ ಬಳಲುತ್ತಿವೆ. ಇನ್ನಷ್ಟು ಮಕ್ಕಳು ಆಸ್ತಮಾಕ್ಕೆ ಬಲಿಯಾಗಬೇಕು ಎಂದು ಸರ್ಕಾರ ಬಯಸುತ್ತಿದೆಯೇ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+