ಬೆಂಕಿ ಹೊತ್ತಿ ಚೀರಾಡುತ್ತಿದ್ದರೂ ಜನರು ನೆರವಿಗೆ ಬರಲಿಲ್ಲ
ಬೆಂಗಳೂರು, ಏಪ್ರಿಲ್ 11 : ಬೆಂಗಳೂರಿನಲ್ಲಿ ಮಾನವೀಯತೆ ಮರೆತ ಪ್ರಸಂಗ ಮತ್ತೊಮ್ಮೆ ನಡೆದಿದೆ. ಬೆಂಕಿ ಹೊತ್ತಿಕೊಂಡ ವ್ಯಕ್ತಿಯೊಬ್ಬ 15 ನಿಮಿಷಗಳ ಕಾಲ ರಸ್ತೆಯಲ್ಲಿ ಸಹಾಯಕ್ಕಾಗಿ ಅಂಗಲಾಚಿದರೂ, ಜನರು ಮೂಕ ಪ್ರೇಕ್ಷಕರಾಗಿದ್ದರು.
ಹೊಸೂರು ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಆರ್‌ಇಝಡ್ ಕಂಪನಿಯ ನೌಕರ ಟ್ರಾನ್ಸ್‌ಫಾರ್ಮರ್ ರಿಪೇರಿ ಮಾಡುವ ಸಂದರ್ಭದಲ್ಲಿ ಆತನಿಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಅವನು ಜನರ ಸಹಾಯ ಕೇಳಿದರೂ ಆತನಿಗೆ ನೆರವು ಸಿಗಲಿಲ್ಲ. [ಮುಖ್ಯಮಂತ್ರಿ ಸಾಂತ್ವನ-'ಹರೀಶ್' ಯೋಜನೆ ಬಗ್ಗೆ ತಿಳಿಯಿರಿ]

ಸುಮಾರು 15 ನಿಮಿಷ ರಸ್ತೆ ಪಕ್ಕದಲ್ಲಿ ಸಹಾಯಕ್ಕಾಗಿ ವ್ಯಕ್ತ ಕೂಗಿಕೊಳ್ಳುತ್ತಿದ್ದರೂ ಜನರು ಕೈ ಕಟ್ಟಿ ನಿಂತಿದ್ದರು. ನಂತರ ಪಕ್ಕದ ಹೋಟೆಲ್‌ನ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲು ಪ್ರಯತ್ನ ನಡೆಸಿದರೂ, ಆಟೋ ಚಾಲಕರು ಕರೆದುಕೊಂಡು ಹೋಗಲು ನಿರಾಕರಿಸಿದರು.
ಕೊನೆಗೆ ಹರಸಾಹಸ ಪಟ್ಟು ಆತನನ್ನು ರಕ್ಷಣೆ ಮಾಡಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹರೀಶ್ ಮೃತಪಟ್ಟಿದ್ದರು : 2016ರ ಫೆ.16ರಂದು ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 4ರ ತಿಪ್ಪಗೊಂಡನಹಳ್ಳಿ ಬಳಿ ನಡೆದ ಅಪಘಾತದಲ್ಲಿ ಎನ್.ಹರೀಶ್ ಎಂಬ ಯುವಕನ ದೇಹ ಎರಡು ಭಾಗವಾಗಿತ್ತು. ಸುಮಾರು 8 ನಿಮಿಷಗಳ ಕಾಲ ರಸ್ತೆಯಲ್ಲಿಯೇ ಒದ್ದಾಡಿ ಅವರು ಮೃತಪಟ್ಟಿದ್ದರು. ಆಗಲೂ ಜನರು ಅವರ ಸಹಾಯಕ್ಕೆ ಬಂದಿರಲಿಲ್ಲ. [ದೇಹ ಎರಡು ತುಂಡಾದರೂ ಕಣ್ಣು ದಾನ ಮಾಡಿದರು]
(ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ)
-
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications