ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾಸಕ ಆನಂದ್ ಸಿಂಗ್ ವಿರುದ್ಧ ಜಾಮೀನು ರಹಿತ ವಾರೆಂಟ್

|
Google Oneindia Kannada News

ಬೆಂಗಳೂರು, ಮಾರ್ಚ್‌ 14: ಕಾಂಗ್ರೆಸ ಶಾಸಕ ಆನಂದ್ ಸಿಂಗ್ ವಿರುದ್ಧ ಜಾಮೀನು ವಾರೆಂಟ್ ಜಾರಿಯಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ವಾರೆಂಟ್‌ ಅನ್ನು ಹೊರಡಿಸಿದೆ.

ಆನಂದ್ ಸಿಂಗ್ ಅವರ ವಿರುದ್ಧ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ್ರಕರಣವೊಂದು ದಾಖಲಾಗಿತ್ತು. ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕೆಲವರು ಪ್ರಕರಣ ದಾಖಲಿಸಿದ್ದರು.

ಲೋಕಸಭಾ ಚುನಾವಣೆ ಘೋಷಣೆ : ಮಾದರಿ ನೀತಿ ಸಂಹಿತೆ ಎಂದರೇನು?ಲೋಕಸಭಾ ಚುನಾವಣೆ ಘೋಷಣೆ : ಮಾದರಿ ನೀತಿ ಸಂಹಿತೆ ಎಂದರೇನು?

ಪ್ರಕರಣದ ತನಿಖೆ ನಡೆಸಿದ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅದರಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆನಂದ್ ಸಿಂಗ್ ಅವರಿಗೆ ನೊಟೀಸ್ ನೀಡಿ ಹಾಜರಾಗುವಂತೆ ಹೇಳಿತ್ತು. ಆದರೆ ಆನಂದ್ ಸಿಂಗ್ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ.

Non bailable warrant against congress MLA Anand Singh

ಹಾಗಾಗಿ ನ್ಯಾಯಾಲಯವು ಆನಂದ್ ಸಿಂಗ್ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿದ್ದು, ಆನಂದ್ ಸಿಂಗ್ ಅವರು ಖಡ್ಡಾಯವಾಗಿ ನ್ಯಾಯಾಲಯದ ಮುಂದೆ ಹಾಜರಾಗಬೇಕಿದೆ. ಹಾಗೊಂದು ವೇಳೆ ಹಾಜರಾಗದೇ ಇದ್ದಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ.

ಚುನಾವಣಾ ಅಕ್ರಮ ವರದಿ : ಸಿ-ವಿಜಿಲ್ ಆಪ್ ಬಳಸುವುದು ಹೇಗೆ?ಚುನಾವಣಾ ಅಕ್ರಮ ವರದಿ : ಸಿ-ವಿಜಿಲ್ ಆಪ್ ಬಳಸುವುದು ಹೇಗೆ?

ಆನಂದ್ ಸಿಂಗ್ ಅವರು ಕೆಲವು ದಿನಗಳ ಹಿಂದೆ ಶಾಸಕರೊಂದಿಗೆ ಮಾರ-ಮಾರಿ ಘಟನೆಯಿಂದ ಸಹ ಸುದ್ದಿಯಾಗಿದ್ದಾರೆ. ಈಗಲ್‌ಟನ್ ರೆಸಾರ್ಟ್‌ನಲ್ಲಿ ಆನಂದ್ ಸಿಂಗ್ ಮತ್ತು ಕಂಪ್ಲಿ ಶಾಸಕ ಗಣೇಶ್ ಮಧ್ಯೆ ಜಗಳ ನಡೆದು ಗಣೇಶ್ ಅವರು ಆನಂದ್ದ ಸಿಂಗ್ ಅವರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದರು.

English summary
special court issued non bailable warrant against congress MLA Anand Singh. A complaint has been lodge against Anand Singh for violating election code of conduct in the time of last assembly election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X