ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಕ್ಕಂತಾಗಿದೆ ಎಂದ ಎಂಬಿ ಪಾಟೀಲ್

ಬೆಂಗಳೂರು, ಡಿಸೆಂಬರ್ 22: ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ವೇಳೆ ಉತ್ತರ ಕರ್ನಾಟಕದ 7 ಮಂದಿ ಶಾಸಕರಿಗೆ ಸಚಿವ ಸ್ಥಾನ ನೀಡುತ್ತಿರುವುದರಿಂದ ಉತ್ತರ ಕರ್ನಾಟಕದ ಭಾಗಕ್ಕೆ ಸ್ವಲ್ಪ ಮಟ್ಟಿಗೆ ನ್ಯಾಯ ಸಿಕ್ಕಂತಾಗಿದೆ ಎಂದು ಸಂಭಾವ್ಯ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರಚನೆಯಾದಾಗಲೇ ನಾನು ಸಚಿವನಾಗಬೇಕಿತ್ತು ನನಗೆ ಆ ಅರ್ಹತೆಯೂ ಇತ್ತು ಆದರೆ ಈಗ ಆ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಅದರಲ್ಲಿ ನನಗೆ ಖುಷಿ ಇದೆ ಎಂದರು.

ಕಾಂಗ್ರೆಸ್ ಹೈಕಮಾಂಡ್ ಈಗ ಈ ನಿರ್ಧಾರ ಮಾಡಿದೆ. ಸಚಿವ ಸ್ಥಾನ ಸಿಗದಿದ್ದಾಗಲೂ ನಾನು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸಿದ್ದೇನೆ, ನನ್ನ ಕರ್ತವ್ಯವನ್ನು ಮರೆತಿರಲಿಲ್ಲ. ನಾನು ಮಾಡಿರುವ ಕೆಲಸವನ್ನು ಜನರು ಮೆಚ್ಚಿದ್ದಾರೆ. ಇದೀಗ 7 ಮಂದಿಗೆ ಸಚಿವ ಸ್ಥಾನ ನೀಡುತ್ತಿದ್ದು, ನಮಗಾದ ತಾರತಮ್ಯ ತಕ್ಕ ಮಟ್ಟಿಗೆ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.

North Karnataka is getting justice now: MB Patil

ರಮೇಶ್ ಜಾರಕಿಹೊಳಿಯವರು ನಮ್ಮೊಂದಿಗೇ ಇರುತ್ತಾರೆ, ಪಕ್ಷ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ, ಯಡಿಯೂರಪ್ಪ ಕನಸು ಕಾಣುತ್ತಿದ್ದಾರೆ ಅದು ಎಂದಿಗೂ ಸಾಧ್ಯವಿಲ್ಲ ಎಂದು ನುಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+