ಅಖಂಡ ಕರ್ನಾಟಕ ನನ್ನುಸಿರು: ಎಚ್ಡಿಕೆ ಭಾವುಕ ನುಡಿ
Recommended Video

ಬೆಂಗಳೂರು, ಆಗಸ್ಟ್ 01: ಕರ್ನಾಟಕ ರಾಜ್ಯವನ್ನು ಉತ್ತರ ಕರ್ನಾಟಕ- ದಕ್ಷಿಣ ಕರ್ನಾಟಕ ಕರಾವಳಿ ಕರ್ನಾಟಕ ಎಂದು ಪ್ರತ್ಯೇಕ ಪ್ರತ್ಯೇಕವಾಗಿ ಕನಸು ಮನಸ್ಸಿನಲ್ಲೂ ಊಹಿಸಲು ಸಾಧ್ಯವಿಲ್ಲ. ಕರ್ನಾಟಕದ ಅಖಂಡತೆಯ ಕಡೆಗೆ ಅಚಲ ವಿಶ್ವಾಸ ನನ್ನದು. ಉತ್ತರ ಮತ್ತು ದಕ್ಷಿಣ ಕರ್ನಾಟಕಗಳೆಂಬ ಭೇದವನ್ನು ನಮ್ಮ ಸರ್ಕಾರ ಎಂದಿಗೂ ಎಣಿಸಿಲ್ಲ. ಎಣಿಸುವುದೂ ಇಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಸ್ಪಷ್ಟಪಡಿಸಿದರು.
ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಂತೆ ಚರ್ಚಿಸಲು ನಿಯೋಗವೊಂದು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.
'ಬೆಳಗಾವಿಯನ್ನು ಎರಡನೇ ರಾಜಧಾನಿಯನ್ನಾಗಿ ಮಾಡುವ ಘೋಷಣೆ ಮಾಡಿದ್ದೆ. ಬೆಳಗಾವಿಯ ಸುವರ್ಣ ಸೌಧಕ್ಕೆ ರಾಜ್ಯದ ಹಲವು ಕಚೇರಿಗಳನ್ನು ಸ್ಥಳಾಂತರಿಸಲು ತೀರ್ಮಾನಿಸಿದ್ದೇನೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸ್ಥಳೀಯ ಕೈಗಾರಿಕಾ ಕೌಶಲ್ಯಕ್ಕೆ ಅನುಗುಣವಾಗಿ ಕ್ಲಸ್ಟರ್ ಮಾದರಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು 500 ಕೋಟಿ ರೂ.ಗಳನ್ನು ಈಗಾಗಲೇ ತೆಗೆದಿರಿಸಿದ್ದೇನೆ. ಸಾಲ ಮನ್ನಾ ಯೋಜನೆಯಿಂದ ಉತ್ತರ ಕರ್ನಾಟಕ ಭಾಗದ ರೈತರಿಗೆ ಹೆಚ್ಚಿನ ಉದ್ದೇಶಕ್ಕಾಗಿಯೇ ಅನುಕೂಲವಾಗಲಿದೆ,' ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಅಖಂಡ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಬಗೆಗಿನ ತಮ್ಮ ಪ್ರೀತಿಯನ್ನು ಎಚ್ ಡಿ ಕುಮಾರಸ್ವಾಮಿ ಅವರ ಪದಗಳಲ್ಲೇ ಕೇಳಿ... (ಕೃಪೆ: ಕರ್ನಾಟಕ ವಾರ್ತೆ)

ಉತ್ತರ ಕರ್ನಾಟಕ ನನ್ನ ಉಸಿರಿನ ಭಾಗ!
"ಉತ್ತರ ಕರ್ನಾಟಕ ನನ್ನ ಉಸಿರಿನ ಭಾಗ. ಈ ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ 27 ಬಾರಿ ಉತ್ತರ ಕರ್ನಾಟಕಕ್ಕೆ ಭೇಟಿ ಕೊಟ್ಟಿದ್ದೇನೆ. ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ನಿರ್ಮಿಸಲು ಮುಂದಾಗಿದ್ದು ನಾನು. ಹಾಗಿರುವಾಗ ನಾನು ಉತ್ತರ ಕರ್ನಾಟಕ ಅಭಿವೃದ್ಧಿಯ ವಿರುದ್ಧ ಇದ್ದೇನೆ ಎಂದು ಸುಳ್ಳು ಸುದ್ದಿ ಹರಡುತ್ತಿರುವವರ ಬಗ್ಗೆ ಅನುಕಂಪವಿದೆ."

ನನ್ನ ಹೇಳಿಕೆ ತಿರುಚಲಾಗಿದೆ
"ಶಾಸಕ ಶ್ರೀರಾಮುಲು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ನಾನು ಪ್ರತಿಕ್ರಿಯೆ ನೀಡಿದ್ದೇನೆ ಅಷ್ಟೇ. ಅದನ್ನು ಬೇಕೆಂದೇ ವಿಚ್ಚಿದ್ರಕಾರಿ ಶಕ್ತಿಗಳು ದೊಡ್ಡದಾಗಿ ಬೆಳಸುತ್ತಿದೆ. ಹೇಳಿಕೆಯನ್ನು ತಿರುಚಿ ಸಮಾಜದ ಒಡಕಿಗೆ ಮುಂದಾಗಿವೆ. 'ಕರ್ನಾಟಕ ಒಂದೇ' ಎನ್ನುವ ನನ್ನ ಭಾವನೆಯಲ್ಲಿ ಯಾವುದೇ ಬದಲಾವಣೆಯಿಲ್ಲ. 'ಕಾವೇರಿಯಿಂದ ಗೋದಾವರಿಯವರೆಗೆ.' ಎಂದು ಹೇಗೆ ಕವಿಗಳು ಮನದುಂಬಿ ನುಡಿದರೋ ಹಾಗೆಯೇ ನಾನೂ ಸಹಾ ಕರ್ನಾಟಕ ಎನ್ನುವುದನ್ನು ಅಖಂಡ ಕರ್ನಾಟಕವಾಗಿ ಕಂಡಿದ್ದೇನೆ. ಕರ್ನಾಟಕ ಏಕೀಕರಣದ ಕನಸು ಚಿಗುರಿದ್ದೇ ಇಲ್ಲಿ."

ಕನ್ನಡ ಸಂಸ್ಕೃತಿಗೆ ಉತ್ತರ ಕರ್ನಾಟಕದ ಕೊಡುಗೆ
"ಉತ್ತರ ಕರ್ನಾಟಕ ಕನ್ನಡ ಸಂಸ್ಕೃತಿಗೆ ಸಾಕಷ್ಟು ಮಹತ್ವದ ಕೊಡುಗೆ ನೀಡಿದೆ. ಈ ನೆಲದ ಹೆಮ್ಮೆಯ ಗರಿಯಾಗಿದೆ. 'ಉತ್ತರ ಕರ್ನಾಟಕಕ್ಕೆ ಸಮಾನ ಅವಕಾಶ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ವಿಧಾನಮಂಡಲದ ಅಧಿವೇಶವನ್ನು ಬೆಳಗಾವಿಯಲ್ಲಿ ನಡೆಸಲು ತೀರ್ಮಾನ ಕೈಗೊಂಡವನು ನಾನು. ಅಧಿವೇಶನ ನಡೆಯದ ಸಂದರ್ಭದಲ್ಲಿ ಸುವರ್ಣ ಸೌಧ ಸದ್ಬಳಕೆಯಾಗುತ್ತಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದ್ದು, ಸದ್ಯದಲ್ಲೇ ಸರ್ಕಾರದ ಕೆಲವು ಪ್ರಮುಖ ಇಲಾಖೆಗಳು ಹಾಗೂ ನಿಗಮಗಳು ಸುವರ್ಣಸೌಧದಲ್ಲಿ ಕೆಲಸ ನಿರ್ವಹಿಸುವಂತೆ ಕ್ರಮಕೈಗೊಳ್ಳುತ್ತೇನೆ,".

ಯಾವುದೇ ಹುನ್ನಾರದಿಂದಲೂ ಒಡೆಯುವುದಕ್ಕೆ ಬಿಡೋಲ್ಲ!
"ಹೀಗಿರುವಾಗ ಕರ್ನಾಟಕದಲ್ಲಿ ಆಗುತ್ತಿರುವ ಬೆಳವಣಿಗೆಯನ್ನು ಸಹಿಸಲಾಗದೆ ಉತ್ತರ ಕರ್ನಾಟಕವನ್ನು ಅಸ್ತ್ರವಾಗಿ ಬಳಸುತ್ತಿರುವವರು ರಾಜ್ಯವನ್ನು ಒಡೆಯುವ ಮನಸ್ಸಿನವರು. ನಮ್ಮ ಪೂರ್ವಿಕರು ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡ ನೆಲವನ್ನು ಒಂದುಗೂಡಿಸಲು, ಕರ್ನಾಟಕವಾಗಿಸಲು ತಮ್ಮ ಬದುಕನ್ನು ತೆತ್ತಿದ್ದಾರೆ. ಅವರ ತ್ಯಾಗದ ಬಗ್ಗೆ ನನಗೆ ಹೆಮ್ಮೆ ಇದೆ. ಇಂತಹ ಕರ್ನಾಟಕವನ್ನು ಯಾವುದೇ ಹುನ್ನಾರ ಮಾಡಿದರೂ ಬೇರೆಯಾಗಿಸಲು ಸಾಧ್ಯವಿಲ್ಲ."

ಒಗ್ಗಟ್ಟಿನಿಂದ ಕರ್ನಾಟಕದ ಏಳ್ಗೆಗೆ ಮುಂದಾಗೋಣ
"ಇತ್ತೀಚಿಗೆ ಪ್ರಕಟವಾದ 'ಪ್ಯಾಕ್' ವರದಿ 'ಆರ್ ಬಿ ಐ' ವರದಿಗಳು ಕರ್ನಾಟಕ ಇಡೀ ದೇಶದಲ್ಲಿ ಹಲವಾರು ರಂಗಗಳಲ್ಲಿ ಮೊದಲ ಸ್ಥಾನದಲ್ಲಿರುವುದನ್ನು ಗುರುತಿಸಿದೆ. ಹೀಗೆ ಇನ್ನೂ ಅನೇಕ ರಂಗದಲ್ಲಿ ಮೊದಲ ಸ್ಥಾನಕ್ಕೆ ಏರಬೇಕಾದರೆ ಕನ್ನಡಿಗರೆಲ್ಲರೂ ಒಗ್ಗೂಡಿ ಮಾಡುವ ಸಾಧನೆಯಿಂದ ಮಾತ್ರ ಸಾಧ್ಯ. ಹಾಗಾಗಿ ನನ್ನ ಮಾತುಗಳಲ್ಲಿ ಹುಳುಕು ಹುಡುಕಲು ಮುಂದಾದವರ ಬಗ್ಗೆ ಗಮನ ಕೊಡದೆ ಸಮಾಜದ ಏಳಿಗೆಗೆ ಗಮನ ಹರಿಸೋಣ"
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications