ಬೆಂಗಳೂರು; ಬೆರಳ ತುದಿಯಲ್ಲೇ ಕೋವಿಡ್ ಆಸ್ಪತ್ರೆ ಮಾಹಿತಿ
ಬೆಂಗಳೂರು, ಆಗಸ್ಟ್ 06 : ಬೆಂಗಳೂರು ನಗರದಲ್ಲಿ ಕೋವಿಡ್ ಆಸ್ಪತ್ರೆಗಳನ್ನು ಪತ್ತೆ ಮಾಡುವುದು ಹೇಗೆ?, ಯಾವ ಆಸ್ಪತ್ರೆಯಲ್ಲಿ ಎಷ್ಟು ಬೆಡ್ ಖಾಲಿ ಇದೆ ಎಂದು ತಿಳಿಯುವುದು ಹೇಗೆ?. ಇದಕ್ಕಾಗಿ ಬಿಬಿಎಂಪಿ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿ ಪಡಿಸಿದೆ.
Recommended Video
ಗುರುವಾರ ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರು ಕೋವಿಡ್ ಆಸ್ಪತ್ರೆಗಳ ಹಾಸಿಗೆ ನಿರ್ವಹಣಾ ವ್ಯವಸ್ಥೆ ಹಾಗೂ ಪಿಹೆಚ್‌ಸಿ ಆಪ್ಲಿಕೇಶನ್ ಬಿಡುಗಡೆ ಮಾಡಿದರು. ಬಿಬಿಎಂಪಿ ಮೇಯರ್ ಮತ್ತು ಆಯುಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬಿಬಿಎಂಪಿ ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕು ಹರಡುವಿಕೆ ನಿಯಂತ್ರಣ ಮಾಡಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರ ಭಾಗವಾಗಿಯೇ ಕೋವಿಡ್ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೋವಿಡ್ ಆಸ್ಪತ್ರೆಗಳ ಹಾಸಿಗೆ ನಿರ್ವಹಣಾ ವ್ಯವಸ್ಥೆ ಅಪ್ಲಿಕೇಶನ್ ಬಿಡುಗಡೆ ಮಾಡಲಾಗಿದೆ.
ಕರ್ನಾಟಕದಲ್ಲಿಯೇ ಅತಿ ಹೆಚ್ಚು ಕೋವಿಡ್ ಸೋಂಕಿತರು ಇರುವುದು ಬೆಂಗಳೂರು ನಗರದಲ್ಲಿ. ಬುಧವಾರ ನಗರದಲ್ಲಿ 1848 ಹೊಸ ಪ್ರಕರಣ ದಾಖಲಾಗಿದೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 64,881.

ಪಿಹೆಚ್‌ಸಿ ಮೊಬೈಲ್ ಅಪ್ಲಿಕೇಶನ್
ಬೆಂಗಳೂರು ನಗರದಲ್ಲಿ ತ್ವರಿತವಾಗಿ ಕೋವಿಡ್ ಸೋಂಕಿತರನ್ನು ಪತ್ತೆ ಹಚ್ಚುವಿಕೆ, ಕಂಟೈನ್ಮೆಂಟ್ ವಲಯಗಳ ನಿರ್ವಹಣೆ, ಐಎಲ್ಐ ಸಮೀಕ್ಷೆ, ಜ್ವರ ತಪಾಸಣಾ ಕೇಂದ್ರಗಳ ನಿರ್ವಹಣೆ, ಗಂಟಲು ದ್ರವ ಮಾದರಿ ಪರೀಕ್ಷೆ ಹಾಗೂ ಇತರೆ ಚಟುವಟಿಕೆಗಳ ನಿರ್ವಹಣಾ ವರದಿಯನ್ನು ಪಿಹೆಚ್‌ಸಿಗಳಿಂದ ಪಡೆಯಲು ಈ ತಂತ್ರಾಂಶ ಅಭಿವೃದ್ದಿ ಪಡಿಸಲಾಗಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರ
ಬೆಂಗಳೂರು ನಗರ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಮಾಹಿತಿ ಪಡೆದು ಸಮಗ್ರವಾದ ವರದಿಯನ್ನು, ಕೋವಿಡ್ -19 ಹಾಗೂ ಇನ್ನಿತರೆ ಕಾಯಿಲೆಗಳಿಗೆ ಸಂಬಂಧಿಸಿದ ವರದಿಗಳನ್ನು ತಯಾರಿಸಲು CSR ಅಡಿಯಲ್ಲಿ 'ಯುನೈಟೆಡ್ ವೇ ಆಫ್ ಬೆಂಗಳೂರು' ವತಿಯಿಂದ ಈ ತಂತ್ರಾಂಶವನ್ನು ಸಿದ್ಧಪಡಿಸಲಾಗಿದೆ.

ರೋಗಿಗಳಿಗೆ ನೆರವಾಗಲಿದೆ
ಕೋವಿಡ್ ಪ್ರಕರಣಗಳನ್ನು ಆಗಿಂದಾಗಲೇ ಆಸ್ಪತ್ರೆಗಳಿಗೆ ದಾಖಲಿಸಲು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ , ಮುಖೇನಾ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆ, ಹಾಸಿಗೆಗಳನ್ನು ಕೇಂದ್ರ ಕಛೇರಿಯಲ್ಲಿ ಮತ್ತು ವಲಯ ಮಟ್ಟದಲ್ಲಿ ಸ್ಥಾಪಿಸಲಾಗಿರುವ ಜೋನಲ್ ಕಮ್ಯಾಂಡ್ ಕೇಂದ್ರಗಳ ಮೂಲಕ ಹಂಚಿಕೆ ಮಾಡಲು ಇದು ಸಹಾಯಕವಾಗಲಿದೆ.

ರೋಗಿಗಳಿಗೆ ಆಸ್ಪತ್ರೆಯ ಮಾಹಿತಿ
ಬೆಂಗಳೂರು ನಗರದ ರೋಗಿಗಳನ್ನು ತ್ವರಿತವಾಗಿ ಆಸ್ಪತ್ರೆಗಳಿಗೆ ದಾಖಲಿಸಲು Covid Hospital Bed Management System ಎಂಬ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದೆ. ಇದರಿಂದಾಗಿ ರೋಗಿಗಳು ಆಸ್ಪತ್ರೆಗಳಿಗೆ ಅಲೆಯುವುದು ತಪ್ಪಲಿದೆ.
-
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್












Click it and Unblock the Notifications