ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು; ಬೆರಳ ತುದಿಯಲ್ಲೇ ಕೋವಿಡ್ ಆಸ್ಪತ್ರೆ ಮಾಹಿತಿ

|
Google Oneindia Kannada News

ಬೆಂಗಳೂರು, ಆಗಸ್ಟ್ 06 : ಬೆಂಗಳೂರು ನಗರದಲ್ಲಿ ಕೋವಿಡ್ ಆಸ್ಪತ್ರೆಗಳನ್ನು ಪತ್ತೆ ಮಾಡುವುದು ಹೇಗೆ?, ಯಾವ ಆಸ್ಪತ್ರೆಯಲ್ಲಿ ಎಷ್ಟು ಬೆಡ್ ಖಾಲಿ ಇದೆ ಎಂದು ತಿಳಿಯುವುದು ಹೇಗೆ?. ಇದಕ್ಕಾಗಿ ಬಿಬಿಎಂಪಿ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿ ಪಡಿಸಿದೆ.

Recommended Video

ರಕ್ಷಣೆಗೆಂದು ಮರದ ಕೆಳಗೆ ನಿಂತವರು ಅದೇ ಮರ ಬಿದ್ದು ಸಾವು! | Oneindia Kannada

ಗುರುವಾರ ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರು ಕೋವಿಡ್ ಆಸ್ಪತ್ರೆಗಳ ಹಾಸಿಗೆ ನಿರ್ವಹಣಾ ವ್ಯವಸ್ಥೆ ಹಾಗೂ ಪಿಹೆಚ್‌ಸಿ ಆಪ್ಲಿಕೇಶನ್ ಬಿಡುಗಡೆ ಮಾಡಿದರು. ಬಿಬಿಎಂಪಿ ಮೇಯರ್ ಮತ್ತು ಆಯುಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕೊರೊನಾವೈರಸ್ ಬಗ್ಗೆ ಡೋಂಟ್ ಕೇರ್ ಎನ್ನುತ್ತಿದೆಯಾ ಬಿಬಿಎಂಪಿ? ಕೊರೊನಾವೈರಸ್ ಬಗ್ಗೆ ಡೋಂಟ್ ಕೇರ್ ಎನ್ನುತ್ತಿದೆಯಾ ಬಿಬಿಎಂಪಿ?

ಬಿಬಿಎಂಪಿ ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕು ಹರಡುವಿಕೆ ನಿಯಂತ್ರಣ ಮಾಡಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರ ಭಾಗವಾಗಿಯೇ ಕೋವಿಡ್ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೋವಿಡ್ ಆಸ್ಪತ್ರೆಗಳ ಹಾಸಿಗೆ ನಿರ್ವಹಣಾ ವ್ಯವಸ್ಥೆ ಅಪ್ಲಿಕೇಶನ್ ಬಿಡುಗಡೆ ಮಾಡಲಾಗಿದೆ.

ಕೋವಿಡ್ ಪರಿಸ್ಥಿತಿಯಲ್ಲಿ; ಖಾಸಗಿ ಆಸ್ಪತ್ರೆ ಕರ್ತವ್ಯಗಳುಕೋವಿಡ್ ಪರಿಸ್ಥಿತಿಯಲ್ಲಿ; ಖಾಸಗಿ ಆಸ್ಪತ್ರೆ ಕರ್ತವ್ಯಗಳು

ಕರ್ನಾಟಕದಲ್ಲಿಯೇ ಅತಿ ಹೆಚ್ಚು ಕೋವಿಡ್ ಸೋಂಕಿತರು ಇರುವುದು ಬೆಂಗಳೂರು ನಗರದಲ್ಲಿ. ಬುಧವಾರ ನಗರದಲ್ಲಿ 1848 ಹೊಸ ಪ್ರಕರಣ ದಾಖಲಾಗಿದೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 64,881.

ಚಿತ್ರಗಳು; ಕಚೇರಿಯನ್ನು ಕೋವಿಡ್ ಆಸ್ಪತ್ರೆ ಮಾಡಿದ ಉದ್ಯಮಿ ಚಿತ್ರಗಳು; ಕಚೇರಿಯನ್ನು ಕೋವಿಡ್ ಆಸ್ಪತ್ರೆ ಮಾಡಿದ ಉದ್ಯಮಿ

ಪಿಹೆಚ್‌ಸಿ ಮೊಬೈಲ್ ಅಪ್ಲಿಕೇಶನ್

ಪಿಹೆಚ್‌ಸಿ ಮೊಬೈಲ್ ಅಪ್ಲಿಕೇಶನ್

ಬೆಂಗಳೂರು ನಗರದಲ್ಲಿ ತ್ವರಿತವಾಗಿ ಕೋವಿಡ್ ಸೋಂಕಿತರನ್ನು ಪತ್ತೆ ಹಚ್ಚುವಿಕೆ, ಕಂಟೈನ್ಮೆಂಟ್ ವಲಯಗಳ ನಿರ್ವಹಣೆ, ಐಎಲ್ಐ ಸಮೀಕ್ಷೆ, ಜ್ವರ ತಪಾಸಣಾ ಕೇಂದ್ರಗಳ ನಿರ್ವಹಣೆ, ಗಂಟಲು ದ್ರವ ಮಾದರಿ ಪರೀಕ್ಷೆ ಹಾಗೂ ಇತರೆ ಚಟುವಟಿಕೆಗಳ ನಿರ್ವಹಣಾ ವರದಿಯನ್ನು ಪಿಹೆಚ್‌ಸಿಗಳಿಂದ ಪಡೆಯಲು ಈ ತಂತ್ರಾಂಶ ಅಭಿವೃದ್ದಿ ಪಡಿಸಲಾಗಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರ

ಪ್ರಾಥಮಿಕ ಆರೋಗ್ಯ ಕೇಂದ್ರ

ಬೆಂಗಳೂರು ನಗರ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಮಾಹಿತಿ ಪಡೆದು ಸಮಗ್ರವಾದ ವರದಿಯನ್ನು, ಕೋವಿಡ್ -19 ಹಾಗೂ ಇನ್ನಿತರೆ ಕಾಯಿಲೆಗಳಿಗೆ ಸಂಬಂಧಿಸಿದ ವರದಿಗಳನ್ನು ತಯಾರಿಸಲು CSR ಅಡಿಯಲ್ಲಿ 'ಯುನೈಟೆಡ್ ವೇ ಆಫ್ ಬೆಂಗಳೂರು' ವತಿಯಿಂದ ಈ ತಂತ್ರಾಂಶವನ್ನು ಸಿದ್ಧಪಡಿಸಲಾಗಿದೆ.

ರೋಗಿಗಳಿಗೆ ನೆರವಾಗಲಿದೆ

ರೋಗಿಗಳಿಗೆ ನೆರವಾಗಲಿದೆ

ಕೋವಿಡ್ ಪ್ರಕರಣಗಳನ್ನು ಆಗಿಂದಾಗಲೇ ಆಸ್ಪತ್ರೆಗಳಿಗೆ ದಾಖಲಿಸಲು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ , ಮುಖೇನಾ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆ, ಹಾಸಿಗೆಗಳನ್ನು ಕೇಂದ್ರ ಕಛೇರಿಯಲ್ಲಿ ಮತ್ತು ವಲಯ ಮಟ್ಟದಲ್ಲಿ ಸ್ಥಾಪಿಸಲಾಗಿರುವ ಜೋನಲ್ ಕಮ್ಯಾಂಡ್ ಕೇಂದ್ರಗಳ ಮೂಲಕ ಹಂಚಿಕೆ ಮಾಡಲು ಇದು ಸಹಾಯಕವಾಗಲಿದೆ.

ರೋಗಿಗಳಿಗೆ ಆಸ್ಪತ್ರೆಯ ಮಾಹಿತಿ

ರೋಗಿಗಳಿಗೆ ಆಸ್ಪತ್ರೆಯ ಮಾಹಿತಿ

ಬೆಂಗಳೂರು ನಗರದ ರೋಗಿಗಳನ್ನು ತ್ವರಿತವಾಗಿ ಆಸ್ಪತ್ರೆಗಳಿಗೆ ದಾಖಲಿಸಲು Covid Hospital Bed Management System ಎಂಬ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದೆ. ಇದರಿಂದಾಗಿ ರೋಗಿಗಳು ಆಸ್ಪತ್ರೆಗಳಿಗೆ ಅಲೆಯುವುದು ತಪ್ಪಲಿದೆ.

English summary
Deputy chief minister of Karnataka Dr. C. N. Ashwathnarayan launched BBMP mobile application for Covid primary health centres & hospital bed management.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X