ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಟಿಎಂ ಲೇಔಟ್‌ನಲ್ಲಿ ಶೀಘ್ರದಲ್ಲೇ ಓಪನ್ ಸ್ಟ್ರೀಟ್ ಕಾರ್ಯಕ್ರಮ

|
Google Oneindia Kannada News

ಬೆಂಗಳೂರು, ಮಾರ್ಚ್ 21 : ಎಂ.ಜಿ.ರಸ್ತೆ ಮತ್ತು ಎಚ್‌ಎಸ್‌ಆರ್ ಲೇಔಟ್‌ ಬಳಿಕ, ಬಿಟಿಎಂ ಲೇಔಟ್‌ನಲ್ಲಿ 'ಓಪನ್ ಸ್ಟ್ರೀಟ್' ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ಕಾರ್ಯಕ್ರಮದ ದಿನಾಂಕವನ್ನು ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುತ್ತದೆ.

ಮಹಾತ್ಮ ಗಾಂಧಿ (ಎಂ.ಜಿ.ರಸ್ತೆ) ಮತ್ತು ಎಚ್‌ಎಸ್ಆರ್ ಲೇಔಟ್‌ನಲ್ಲಿ ಆಯೋಜಿಸಿದ ಓಪನ್ ಸ್ಟ್ರೀಟ್ ಕಾರ್ಯಕ್ರಮ ಯಶಸ್ವಿಯಾಗಿತ್ತು. ಇದರಿಂದಾಗಿ ಬಿಟಿಎಂ ಲೇಔಟ್‌ನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕೆಲವು ರಸ್ತೆಗಳಲ್ಲಿ ಮಾತ್ರವಲ್ಲ ಇಡೀ ಬಡಾವಣೆಯಲ್ಲಿಯೇ ಖಾಸಗಿ ವಾಹನ ಸಂಚಾರ ನಿಷೇಧಿಸಲು ಚಿಂತನೆ ನಡೆಸಲಾಗುತ್ತದೆ. [ಚಿತ್ರಗಳು : ಬೆಂಗಳೂರಿನ ಎಂಜಿ ರಸ್ತೆಯಲ್ಲಿ ಹಬ್ಬದ ವಾತಾವರಣ]

btm layout

ಸದ್ಯ, ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುತ್ತಿವೆ. ಪರೀಕ್ಷೆಗಳು ಮುಗಿದ ಬಳಿಕ ಓಪನ್ ಸ್ಟ್ರೀಟ್ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ. ಬಿಟಿಎಂ ಬಡಾವಣೆ ನಿವಾಸಿಗಳ ಸಂಘವೂ ಕಾರ್ಯಕ್ರಮ ಆಯೋಜನೆ ಮಾಡಲು ಬೆಂಬಲ ನೀಡಿದೆ. [ಕಮರ್ಷಿಯಲ್ ಸ್ಟ್ರೀಟ್ 'ಹ್ಯಾಪಿ ಸ್ಟ್ರೀಟ್' ಆಗಿ ಬದಲಾದ ಚಿತ್ರಗಳು]

ಎಂ.ಜಿ.ರಸ್ತೆಯಲ್ಲಿ ಓಪನ್ ಸ್ಟ್ರೀಟ್ ಕಾರ್ಯಕ್ರಮ ಆಯೋಜನೆ ಮಾಡಿದಾಗ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತಮ್ಮ ಕ್ಷೇತ್ರ ಬಿಟಿಎಂ ಬಡಾವಣೆಯಲ್ಲಿಯೂ ಕಾರ್ಯಕ್ರಮ ಆಯೋಜಿಸುವಂತೆ ಮನವಿ ಮಾಡಿದ್ದರು. ನಿವಾಸಿಗಳೂ ಬೆಂಬಲ ನೀಡಿರುವುದರಿಂದ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ.

2016ರ ಫೆಬ್ರವರಿ 21ರಂದು ಬಿಎಂಟಿಸಿ, ಬಿಎಂಆರ್‌ಸಿಎಲ್, ಬಿಬಿಎಂಪಿ, ಜಲಮಂಡಳಿ, ಬೆಸ್ಕಾಂ, ನಗರ ಪೊಲೀಸರ ಜಂಟಿ ಸಹಭಾಗ್ವಿತ್ವದಲ್ಲಿ ಎಂ.ಜಿ.ರಸ್ತೆಯಲ್ಲಿ ಓಪನ್ ಸ್ಟ್ರೀಟ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿತ್ತು. ಸಂಪೂರ್ಣ ರಸ್ತೆ ವಿವಿಧ ಸಾಂಸ್ಕೃತಿಕ ಚಟುವಟಿಕೆ ಮತ್ತು ಕ್ರೀಡಾ ಚಟುವಟಿಕೆಗಳಿಂದ ತುಂಬಿ ಹೋಗಿತ್ತು. ಜನರು ಸಾರ್ಜನಿಕ ಸಾರಿಗೆಯನ್ನು ಬಳಸುವಂತೆ ಮನವಿ ಮಾಡಲಾಗಿತ್ತು.

English summary
After the success of Open Street Day at HSR Layout and MG Road, the civic authorities in the Bengaluru city are now looking to organize event at BTM layout.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X