• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೋಮುವಾದಕ್ಕೆ ಬ್ರೇಕ್ ಅಭಿವೃದ್ಧಿಗೆ ಒತ್ತು: ನೌಹೀರಾ ಶೇಖ್

By Nayana
|

ಬೆಂಗಳೂರು, ಮೇ 7: ಕೋಮುವಾದ ದೂರಮಾಡಿ ಸುಂದರ ಕರ್ನಾಟಕ, ಸುಂದರ ಭಾರತ ನಿರ್ಮಾಣ ಮಾಡಲು ಎಂಇಪಿಗೆ ಬೆಂಬಲ ಕೊಡಿ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಡಾ.ನೌಹೀರಾ ಶೇಖ್ ಮನವಿ ಮಾಡಿದ್ದಾರೆ.

ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಆರ್ ನಂದಕುಮಾರ್ ಪರವಾಗಿ ಇಂದು(ಸೋಮವಾರ) ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದ್ವೇಷ ಬಿತ್ತಿ, ಜನರನ್ನು ಎತ್ತಿಕಟ್ಟಿ ಒಡೆದು ಆಳುವುದು ನಮ್ಮ ನೀತಿಯಲ್ಲ, ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಗೂಂಡಾ ಸರ್ಕಾರವನ್ನು ಕಿತ್ತೊಗೆಯಿರಿ: ನೌಹೀರಾ ಶೇಖ್‌

ರಾಜ್ಯದಲ್ಲಿ ಜನರ ಆರ್ಶಿರ್ವಾದದಿಂದ ಎಂಇಪಿ ಅಧಿಕಾರಕ್ಕೆ ಬರಲಿದೆ ನಮ್ಮ ಆಂತರಿಕ ಸಮೀಕ್ಷೆಗಳು ಕೂಡ ಇದನ್ನೆ ಪುಷ್ಟಿಕರಿಸುತ್ತಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಯಾರ ವಿರುದ್ಧವೂ ಟಕ್ಕರ್ ನೀಡಲು ನಾನು ಬಂದಿಲ್ಲ. ಯಾವುದೇ ರಾಜಕೀಯ ಪಕ್ಷ ಮತ್ತು ನಾಯಕರ ವಿರುದ್ಧ ಹೋರಾಟ ನನ್ನ ಗುರಿಯಲ್ಲ. ಅನ್ಯಾಯದ ವಿರುದ್ಧ ಸಿಡಿದೆಳುವುದು, ಮಾನವಿಯತೆಗಾಗಿ ಹೋರಾಡುವುದು, ನೊಂದವರಿಗೆ ನೆಮ್ಮದಿ, ಬದಕು ಕಟ್ಟಿಕೊಡುವುದು ನನ್ನ ರಾಜಕೀಯ ಜೀವನದ ಹೋರಾಟವಾಗಿದೆ.

ದೇಶವನ್ನು ಅತಿ ಹೆಚ್ಚು ವರ್ಷ ಆಡಳಿತ ಮಾಡಿದ ಪಕ್ಷ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲಿಲ್ಲ. ಹಾಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದ ಸಮಸ್ಯೆ ಪರಿಹರಿಸುವತ್ತ ಗಮನ ಕೊಡುತ್ತಿಲ್ಲ. ಏಕೆಂದರೆ ಅವರು ಬಹುಪಾಲು ಸಮಯವನ್ನು ವಿದೇಶದಲ್ಲಿ ಕಳೆಯುತ್ತ ಬಂದಿದ್ದಾರೆ ಎಂದು ಟಾಂಗ್ ನೀಡಿದರು.

ಎಂಇಪಿ ಅಧಿಕಾರಕ್ಕೆ ಬಂದಲ್ಲಿ ಪಕ್ಷ ಪ್ರಣಾಳಿಕೆ ಮೂಲಕ ನೀಡಿರುವ ಭರವಸೆಯಂತೆ ರೈತರ ಸಾಲ, ಬಡ್ಡಿ ಮನ್ನಾ ಮಾಡಲಾಗುವುದು. ಇದಲ್ಲದೆ ರೈತರು ಬೆಳೆದ ಬೆಳೆಗಳನ್ನು ಸಂರಕ್ಷಣೆ ಮಾಡಿ ಒಳ್ಳೆಯ ಬೆಲೆ ಬಂದಾಗ ಮಾರಾಟ ಮಾಡಲು ಅನುಕೂಲವಾಗುವಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಶೀತಲ ಗೃಹಗಳನ್ನು, ಆಹಾರ ಧಾನ್ಯಗಳ ಗೋದಾಮುಗಳನ್ನು ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಮಹಿಳೆಯರು ನೆಮ್ಮದಿ ಮತ್ತು ಸ್ವಾಭಿಮಾನದಿಂದ ಬದುಕುವಂತಹ ನಿರ್ಮಲ ವಾತಾವರಣ ಕಲ್ಪಿಸಿ ಕೊಡಲಾಗುವುದು. ತಾಲೂಕು ಮಟ್ಟದಲ್ಲಿ ದೊಡ್ಡ ದೊಡ್ಡ ಆಸ್ಪತ್ರೆಗಳನ್ನು ನಿರ್ಮಿಸಿ ಬಡವರಿಗೆ ಉಚಿತ ಚಿಕಿತ್ಸಾ ಸೌಲಭ್ಯ ಒದಗಿಸಲಾಗುವುದು. ಶಾಸನಸಭೆ, ಸ್ಥಳೀಯ ಸಂಸ್ಥೆ ಸೇರಿದಂತೆ ಎಲ್ಲ ಚುನಾಯಿತ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಸ್ಥಾನಗಳನ್ನು ಮೀಸಲಿಡಲಾಗುವುದು ಎಂದರು.

ದೊಡ್ಡ ದೊಡ್ಡ ನಗರಗಳಲ್ಲಿ ಆಟೋ ಚಾಲಕರಿಗೆ ಬಡ್ಡಿರಹಿರವಾಗಿ ಆಟೋ ಸಾಲ ನೀಡಿ ಸ್ವತಂತ್ರವಾಗಿ ಬದುಕು ಕಟ್ಟಿಕೊಳ್ಳಲು ಅನುಕೂಲ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Mahila Empowerment Party chief Dr. Nowhera Shaik appealed people of the state to keep away communal forces and asked support MEP for betterment of Karnataka.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more