BMTC: ಬಿಎಂಟಿಸಿಯಲ್ಲಿರುವ ಎಲೆಕ್ಟ್ರಿಕ್ ಬಸ್‌, ಹೊಸದಾಗಿ ಖರೀದಿಸುವ ಬಸ್‌ಗಳು ಎಷ್ಟು?

ಬೆಂಗಳೂರು, ಜುಲೈ 28: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಸಂಚಾರ ಹೆಚ್ಚಿದೆ. ಹಲವು ಮಾರ್ಗದಲ್ಲಿ ನಗರದಲ್ಲಿ ಈ ಮಾದರಿ ಬಸ್‌ಗಳು ಸಂಚರಿಸುತ್ತಿವೆ. ಹೊಸ ಬಸ್‌ಗಳನ್ನು ಸಹ ಖರೀದಿ ಮಾಡಲಾಗುತ್ತಿದೆ. ಈ ಕುರಿತು ಸಚಿವರು ಮಾಹಿತಿ ನೀಡಿದ್ದಾರೆ.

ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಹೆಚ್. ಎಸ್. ಗೋಪಿನಾಥ್ ಈ ಕುರಿತು ಕೇಳಿದ್ದ ಪ್ರಶ್ನೆಗೆ ಸಾರಿಗೆ ಮತ್ತು ಮುಜರಾಯಿ ಖಾತೆ ಸಚಿವರು ಉತ್ತರವನ್ನು ನೀಡಿದ್ದಾರೆ. ಸದಸ್ಯರು ಸಾರಿಗೆ ಇಲಾಖೆಯಲ್ಲಿ ಎಲೆಕ್ಟ್ರಾನಿಕ್ ಬಸ್‌ಗಳ ಬಳಕೆಯನ್ನು ಉತ್ತೇಜಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳೇನು? ಎಂದು ಪ್ರಶ್ನಿಸಿದ್ದರು.

Number Of Electric Bus In BMTC And New Bus Details

ಸಚಿವರ ಉತ್ತರದ ಮಾಹಿತಿ: 4 ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಬಳಕೆಯನ್ನು ಉತ್ತೇಜಿಸಲು ಕೈಗೊಂಡಿರುವ ಕ್ರಮಗಳ ವಿವರಗಳನ್ನು ಸಚಿವರು ನೀಡಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮದಲ್ಲಿ ಪ್ರಸ್ತುತ ಕೇಂದ್ರ ಸರ್ಕಾರದ ಫೇಮ್-2 ಯೋಜನೆಯಡಿಯಲ್ಲಿ ಮಂಜೂರಾಗಿರುವ 50 ಹವಾನಿಯಂತ್ರಿತ ವಿದ್ಯುತ್ ಚಾಲಿತ (ಎಲೆಕ್ಟ್ರಿಕ್) ವಾಹನಗಳನ್ನು ಜಿ.ಸಿ.ಸಿ. ಆಧಾರದಲ್ಲಿ ಬೆಂಗಳೂರು ಸೇರಿದಂತೆ 6 ನಗರಗಳಲ್ಲಿ ಕಾರ್ಯಾಚರಣೆ ಮಾಡಲಾಗುತ್ತಿದೆ. ಮುಂದುವರೆದು, 300 ವಿದ್ಯುತ್‌ಚಾಲಿತ ವಾಹನಗಳನ್ನು ಜಿ.ಸಿ.ಸಿ (ಒಟ್ಟು ಒಪ್ಪಂದದ ವೆಚ್ಚ) ಆಧಾರದ ಮೇರಗೆ ಕಾರ್ಯಾಚರಿಸಲು ಟೆಂಡರ್ ಅಹ್ವಾನಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಎಂದು ಸಚಿವರು ವಿವರಣೆ ನೀಡಿದ್ದಾರೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬೆಂಗಳೂರು ಸ್ಮಾರ್ಟ್‌ಸಿಟಿ ಯೋಜನೆಯಡಿ ನೀಡಲಾಗಿರುವ ಅನುದಾನದಲ್ಲಿ 90 ಹವಾನಿಯಂತ್ರಣ ರಹಿತ ಮಿಡಿ ಎಲೆಕ್ಟ್ರಿಕ್ ಬಸ್ಸುಗಳನ್ನು ಹಾಗೂ ಕೇಂದ್ರ ಸರ್ಕಾರದ ಫೇಮ್-2 ಯೋಜನೆಯಡಿ 300 ಹವಾನಿಯಂತ್ರಣ ರಹಿತ ಎಲೆಕ್ಟ್ರಿಕ್ ಬಸ್ಸುಗಳನ್ನು ಜಿ.ಸಿ.ಸಿ. ಆಧಾರದ ಮೇಲೆ ಈಗಾಗಲೇ ಕಾರ್ಯಾಚರಣೆ ಮಾಡಲಾಗುತ್ತಿದೆ.

CESLನ ಫೇಮ್-2 ಯೋಜನೆಯಡಿಯಲ್ಲಿ ಜಿಸಿಸಿ ಮಾದರಿಯಲ್ಲಿ ಕಾರ್ಯಾಚರಣೆ ಮಾಡಲು ಮಂಜೂರಾಗಿರುವ 921 ಎಲೆಕ್ಟ್ರಿಕ್ ಬಸ್ಸುಗಳ ಪೈಕಿ ಇಲ್ಲಿಯವರೆಗೆ 333 ಬಸ್ಸುಗಳು ಸಂಸ್ಥೆಯಲ್ಲಿ ಕಾರ್ಯಾಚರಣೆಯಲ್ಲಿದ್ದು, ಇನ್ನುಳಿದ ಬಸ್ಸುಗಳನ್ನು ಪ್ರಸಕ್ತ ಸಾಲಿನಲ್ಲಿ ಹಂತಹಂತವಾಗಿ ಕಾರ್ಯಾಚರಣೆಗೊಳಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ನಗರ ಭೂಸಾರಿಗೆ ನಿರ್ದೇಶನಾಲಯ ಹಾಗೂ National Clean Air Programme ಯೋಜನೆಯಡಿಯಲ್ಲಿ 120 ಹವಾನಿಯಂತ್ರಣ ರಹಿತ ಮಿಡಿ ಎಲೆಕ್ಟ್ರಿಕ್ ವಾಹನಗಳನ್ನು ಹಾಗೂ 10 ಹವಾನಿಯಂತ್ರಿತ ಡಬಲ್‌ ಡೆಕ್ಕರ್ ಎಲೆಕ್ಟ್ರಿಕ್ ವಾಹನಗಳನ್ನು ಜಿಸಿಸಿ ಆಧಾರದ ಮೇಲೆ ಕಾರ್ಯಾಚರಣೆ ಸಂಬಂಧ ಆಹ್ವಾನಿಸಿರುವ ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿರುತ್ತದೆ.

ವಿಶೇಷ ಬಂಡವಾಳ ನೆರವಿನಡಿ ಒದಗಿಸಿರುವ ಅನುದಾನದಲ್ಲಿ 320 ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್‌ಗಳನ್ನು ಸಂಸ್ಥೆಯಲ್ಲಿ ಕಾರ್ಯಾಚರಿಸಲು ಆದೇಶ ನೀಡಲಾಗಿದ್ದು, ಅವುಗಳನ್ನು ಪ್ರಸಕ್ತ ಸಾಲಿನಲ್ಲಿ ಹಂತ ಹಂತವಾಗಿ ಕಾರ್ಯಾಚರಣೆಗೊಳಿಸಲಾಗುವುದು. National Clean Air Programme ಯೋಜನೆಯಡಿಯಲ್ಲಿ 76 ಹವಾನಿಯಂತ್ರಣ ರಹಿತ ಎಲೆಕ್ಟ್ರಿಕ್ ವಾಹನಗಳನ್ನು ಜಿಸಿಸಿ ಆಧಾರದ ಮೇಲೆ ಕಾರ್ಯಾಚರಣೆ ಮಾಡುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿರುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಇನ್ನೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 350 ಎಲೆಕ್ಟ್ರಿಕ್ ಬಸ್‌ಗಳನ್ನು ಸಂಸ್ಥೆಯ ಆಂತರಿಕ ಸಂಪನ್ಮೂಲದಿಂದ ಭರಿಸಿ ಜಿಸಿಸಿ ಮಾದರಿಯಲ್ಲಿ ಕಾರ್ಯಾಚರಿಸಲು ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಎಂದು ಸಚಿವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+