ಪ್ರಯಾಣಿಕರಿಗೆ ಸಿಹಿ ಸುದ್ದಿ: ಬೆಂಗಳೂರಿನಿಂದ ವಿಶೇಷ ಬಸ್ ಕಾರ್ಯಾಚರಣೆ
ಹುಬ್ಬಳ್ಳಿ, ಏಪ್ರಿಲ್ 29: ಬಸವ ಜಯಂತಿ, ಕಾರ್ಮಿಕರ ದಿನಾಚರಣೆ ರಜೆ ಹಾಗೂ ವಾರಾಂತ್ಯದ ರಜೆಗಳ ಹಿನ್ನೆಲೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಈ ಕಾರಣದಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ವಿಶೇಷ ಬಸ್ಗಳ ಸೇವೆ ಕಲ್ಪಿಸಲು ಮುಂದಾಗಿದೆ.
ಈ ವಿಚಾರವಾಗಿ ಸಂಸ್ಥೆ ಪ್ರಕಟಣೆ ಹೊರಡಿಸಿದ್ದು, ಹೆಚ್ಚುವರಿ ಬಸ್ಗಳು ಏಪ್ರಿಲ್ 30 ಹಾಗೂ ಮೇ 01 ರಂದು ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದ ಟರ್ಮಿನಲ್‌ನಿಂದ ಹೊರಡಲಿವೆ. ಬೆಂಗಳೂರು ಹಾಗೂ ಉತ್ತರ ಕರ್ನಾಟಕ ಇತರ ಭಾಗಗಳಿಗೆ ಈ ವಿಶೇಷ ಬಸ್‌ಗಳು ಸಂಪರ್ಕ ಸಾಧಿಸಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಜಿಲ್ಲೆಗಳು ಸೇರಿದಂತೆ ಇನ್ನಿತರ ಸ್ಥಳಗಳಿಗೆ ವಿಶೇಷ ಹೆಚ್ಚುವರಿ ಸಾರಿಗೆ ಬಸ್ ಸೇವೆ ಪ್ರಯಾಣಿಕರಿಗೆ ಲಭ್ಯವಾಗಲಿದೆ. ನೀವು ಎಂದಿನಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) https://ksrtc.in/ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮುಂಗಡ ಆಸನ ಕಾಯ್ದಿರಿಸಬಹುದಾಗಿದೆ.
ನಾಲ್ಕು ಅಥವಾ ಅದಕ್ಕಿಂತ ಹೆಚ್ಚಿನ ಟಿಕೆಟ್ ಬುಕ್ ಮಾಡುವುದಿದ್ದರೆ ನಿಮಗೆ ಟಿಕೆಟ್ ಒಟ್ಟು ಹಣದ ಮೇಲೆ ಶೇಕಡಾ 5ರಷ್ಟು ಹಣ ರಿಯಾಯಿತಿ ಸಿಗಲಿದೆ. ಹೆಚ್ಚಿನ ಮಾಹಿತಿಗೆ ಹತ್ತಿರದ ಬಸ್ ನಿಲ್ದಾಣ, ಇಲ್ಲವೇ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.
ಬಸವ ಜಯಂತಿ, ಪಾಲ್ಗೊಳ್ಳುವಿಕೆಗೆ ಜನ ಹಿಂದೇಟು: ಹೊರಟ್ಟಿ ಕಳವಳ
ಭಾರತ ಸೇರಿದಂತೆ ವಿದೇಶಗಳಲ್ಲಿ ಶ್ರೀ ಬಸವೇಶ್ವರ ಜಯಂತಿಯನ್ನು ಭಾರೀ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದ್ದು ನಮ್ಮ ರಾಜ್ಯದಲ್ಲಿ ಬಸವ ಜಯಂತಿ ಆಚರಣೆಗೆ ಸಾರ್ವಜನಿಕರು ಹಾಗೂ ಭಕ್ತರು ಬರಲು ಹಿಂದೇಟು ಮಾಡುತಿದ್ದಾರೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಳವಳ ವ್ಯಕ್ತಪಡಿಸಿದ್ದಾರೆ.
ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತ್ರೋತ್ಸವದ ಅಂಗವಾಗಿ ಹುಬ್ಬಳ್ಳಿಯ ಮೂರುಸಾವಿರ ಮಠದ ಆವರಣದಲ್ಲಿ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ವಿವಿಧ ಕಾರ್ಯಕ್ರಮಗಳ ಸಮಾರಂಭದ ಮುಖ್ಯ ಅತಿಯಾಗಿ ಆಗಮಿಸಿ ಅವರು ಮಾತನಾಡಿದರು.
ಜಗದ್ಗುರು ಡಾ.ಗುರುಸಿದ್ದ ರಾಜಯೋಗೀಂದ್ರ ಮಹಾಸ್ವಾಮಿಗಳ ಮಾತನಾಡಿ, ನಾಡಿನ ಮಠಗಳಲ್ಲಿ ಒಂದಾದ ಮೂರು ಸಾವಿರ ಮಠದಲ್ಲಿ ಬಸವೇಶ್ವರ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ ಬಸವೇಶ್ವರರ ಅನುಯಾಯಿಗಳು ಭಾಗವಹಿಸಬೇಕು ಎಂದರು.
ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷೆ ಗಿರಿಜಾ ಎಸ್. ಹೂಗಾರ ಮಾತನಾಡಿ, ಶ್ರೀ ಬಸವೇಶ್ವರ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದು ಇಂತಹ ಕಾರ್ಯಕ್ರಮಗಳು ನಾಡಿನ ಜನತೆಗೆ ಶ್ರೀ ಬಸವೇಶ್ವರರ ಕಾಲಾವಧಿ ಶರಣರ ತತ್ವ ವಚನಗಳು ಇನ್ನಷ್ಟು ತಿಳಿಯವಂತಹ ಆಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶ್ರೀ ಬಸವಣ್ಣನವರ ವಚನಗಳ ಗಾಯನ ಸ್ಪರ್ಧೆ, ಕುಮಾರಿ. ದಿಯಾ ಆವಾರಿ ಅವರಿಂದ ಭರತ ನಾಟ್ಯ ಜೊತೆಗೆ ವಿದ್ವಾನ ಸುಜಯ ಶಾನಭಾಗ ಮತ್ತು ಕಲಾ ಸುಜಯ ತಂಡಗಳಿಂದ ವಚನಾಧಾರಿತ ನೃತ್ಯರೂಪಕಗಳು, ಸಂಗೀತ ಸಂಜೆ ಪ್ರಕಾಶ ಜಾಡರ ಅವರ ಹಾಸ್ಯ ಕಾರ್ಯಕ್ರಮಗಳು ಜನಮನ ಸೆಳೆದವು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications