ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ

|
Google Oneindia Kannada News

ಬೆಂಗಳೂರು, ಸೆ.30 : ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಮೊಹಮ್ಮದ್ ಗೌಸ್ ಶುಕುರೆ ಕಮಾಲ್, ರಾಜೇಂದ್ರ ಬಾದಾಮಿಕರ್ ಹಾಗೂ ಶ್ರೀಮತಿ ಖಾಜಿ ಜೈಬುನ್ನೀಸಾ ಮೊಹಿದ್ದೀನ್ ಅವರು ಪದವಿಯ ಅಧಿಕಾರ ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ.

ನಗರದ ರಾಜಭವನದಲ್ಲಿನ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಉಚ್ಛ ನ್ಯಾಯಾಲಯದ ಗೌರವಾನಿತ್ವ ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣ ವಚನ ಬೋಧಿಸಿದ್ದಾರೆ.

Breaking; ಹೈಕೋರ್ಟ್‌ ಸಿಜೆ ಹುದ್ದೆಗೆ ನ್ಯಾ. ಪಿ. ಬಿ. ವರಳೆ ಹೆಸರು ಶಿಫಾರಸುBreaking; ಹೈಕೋರ್ಟ್‌ ಸಿಜೆ ಹುದ್ದೆಗೆ ನ್ಯಾ. ಪಿ. ಬಿ. ವರಳೆ ಹೆಸರು ಶಿಫಾರಸು

ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಅಲೋಕ್ ಆರಾಧೆ ಸೇರಿದಂತೆ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು, ಕುಟುಂಬ ವರ್ಗದವರು, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Oath-taking of Additional Judges of Karnataka High Court

ಸಮಾರಂಭದ ಸ್ವಾಗತವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮಾ ಅವರು ನೆರವೇರಿಸಿದ್ದರು.

English summary
Oath-taking of Additional Judges of Karnataka High Court, Governor Thawar Chand Gehlot administered the oath. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X