Prajwal Revanna: ಅಶ್ಲೀಲ ವಿಡಿಯೋ ಕೇಸ್: ಪ್ರಜ್ವಲ್ ರೇವಣ್ಣ 6 ದಿನ ಪೊಲೀಸ್ ಕಸ್ಟಡಿಗೆ
ಬೆಂಗಳೂರು ಮೇ 31: ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.
ಬೆಂಗಳೂರು ನ್ಯಾಯಾಲಯಕ್ಕೆ ಇಂದು ಪ್ರಜ್ವಲ್ ರೇವಣ್ಣ ಅವರನ್ನು ಹಾಜರುಪಡಿಸಲಾಗಿತ್ತು. ವಾದ ಪ್ರತಿವಾದಗಳ ನಂತರ ಅವರನ್ನು ಕೋರ್ಟ್ ಆರು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಲೈಂಗಿಕ ಕಿರುಕುಳ ಆರೋಪದ ವಿಚಾರಣೆಗಾಗಿ ಎಸ್‌ಐಟಿ ಪ್ರಜ್ವಲ್ ರೇವಣ್ಣ ಅವರನ್ನು ಕಸ್ಟಡಿಗೆ ನೀಡುವಂತೆ ಕೋರಿತ್ತು.

ಇದೇ ವೇಳೆ ವಕೀಲರ ಭೇಟಿ ಹಾಗೂ ವೈದ್ಯಕೀಯ ಚಿಕಿತ್ಸೆಗೆ ಅವಕಾಶ ನೀಡಿದ ಕೋರ್ಟ್ ಕಸ್ಟಡಿಯಲ್ಲಿ ಕಿರುಕುಳ ನೀಡದಂತೆ ತನಿಖಾಧಿಕಾರಿಗಳಿಗೆ ಸೂಚನೆ ನೀಡಿದೆ. ಹೊಳೆನರಸೀಪುರದಲ್ಲಿ ಪ್ರಜ್ವಲ್ ವಿರುದ್ಧ ದಾಖಲಾಗಿರುವ ಮೊದಲ ಎಫ್‌ಐಆರ್ ಬಗ್ಗೆ ಅವರ ವಿಚಾರಣೆ ನಡೆಯಲಿದೆ.
#WATCH | Bengaluru | Obscene videos case: Suspended JD(S) leader Prajwal Revanna remanded to six days police custody pic.twitter.com/Q2QhBmQEEK
— ANI (@ANI) May 31, 2024
ಪ್ರಜ್ವಲ್ ಅವರು ಭಾಗಿಯಾಗಿದ್ದಾರೆ ಎನ್ನಲಾದ ನೂರಾರು ಅಶ್ಲೀಲ ವಿಡಿಯೋ ತುಣುಕುಗಳ ಪ್ರಸಾರದ ಮಧ್ಯೆ ಏಪ್ರಿಲ್ 26 ರಂದು ತಡರಾತ್ರಿ ದೇಶವನ್ನು ತೊರೆದಿದ್ದಾರೆ ಎಂದು ವರದಿಯಾಗಿತ್ತು. ಸೋಮವಾರ ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದ ಅವರು, ಮೇ 31 ರಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ಮುಂದೆ ಹಾಜರಾಗುವುದಾಗಿ ಹೇಳಿದ್ದರು.
ಲೈಂಗಿಕ ಕಿರುಕುಳದ ಆರೋಪದ ನಡುವೆ ಕಳೆದ ತಿಂಗಳು ಜರ್ಮನಿಗೆ ಪಲಾಯನ ಮಾಡಿದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ಅನ್ನು ವಶಪಡಿಸಿಕೊಳ್ಳಲು ವಿದೇಶಾಂಗ ವ್ಯವಹಾರಗಳ ಸಚಿವಾಲಯವು (ಎಂಇಎ) ಮೇ 21 ರಂದು ವಿನಂತಿಯನ್ನು ಸ್ವೀಕರಿಸಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.












Click it and Unblock the Notifications