Odisha Train Acident: ಯಶವಂತಪುರದಲ್ಲಿ ಹೆಲ್ಪ್ ಡೆಸ್ಕ್ ಸ್ಥಾಪನೆ
ಬೆಂಗಳೂರು, ಜೂನ್ 3: ಒಡಿಶಾದ ಬಾಲಸೋರ್‌ನಲ್ಲಿ ರೈಲು ಅಪಘಾತಕ್ಕೀಡಾದವರಿಗೆ ನೆರವು ನೀಡಲು ಶನಿವಾರ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಲ್ಲಿ ಸಹಾಯ ಕೇಂದ್ರವನ್ನು ಆರಂಭಿಸಲಾಗಿದೆ.
ಇದಲ್ಲದೆ ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಹಿನ್ನೆಲೆಯಲ್ಲಿ ಕನ್ನಡಿಗರಿಗೆ ಅಗತ್ಯ ನೆರವು ನೀಡಲು ಹಾಗೂ ಸುರಕ್ಷತೆಯ ಮಾಹಿತಿ ಒದಗಿಸಲು ರಾಜ್ಯ ತುರ್ತು ನಿರ್ವಹಣಾ ಕೇಂದ್ರ (SEOC)ದಲ್ಲಿ ನಾಗರೀಕರ ಅನುಕೂಲಕ್ಕಾಗಿ ಸಹಾಯವಾಣಿ ತೆರೆಯಲಾಗಿದೆ.

ದೂರವಾಣಿ ಸಂಖ್ಯೆ: 1070, 080-22253707, 080-22340676 ಕ್ಕೆ ಕರೆಮಾಡಿ ಮಾಹಿತಿ ಅಥವಾ ನೆರವು ಪಡೆಯಲು ಕೋರಲಾಗಿದೆ. ಶುಕ್ರವಾರ ರಾತ್ರಿ ಓಡಿಶಾದ ಬಾಲಸೋರ್ ರೈಲು ಅಪಘಾತ ಘಟನೆಯಲ್ಲಿ ಕನ್ನಡಿಗರ ಸುರಕ್ಷತೆಗಾಗಿ ಸಚಿವ ಸಂತೋಷ್ ಲಾಡ್ ನೇತೃತ್ವದ ತಂಡವನ್ನು ನಿಯೋಜಿಸಿದೆ.
ಮುಖ್ಯಮಂತ್ರಿಗಳು ಮುಖ್ಯ ಕಾರ್ಯದರ್ಶಿಯವರಿಂದ ವರದಿಯನ್ನು ಕೇಳಿದ್ದು, ಕನ್ನಡಿಗರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಅವರಿಗೆ ಅಗತ್ಯವಿರುವ ಎಲ್ಲ ಬೆಂಬಲವನ್ನು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ಸಂಪೂರ್ಣ ನೆರವು ನೀಡಲಾಗುವುದು. ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಒಡಿಶಾದ ಬಾಲಸೋರ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಪಘಾತ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಕಟಕ್‌ನ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಕ್ಕೂ ಮುನ್ನ ಅವರು ಶುಕ್ರವಾರ ರಾತ್ರಿ ಒಡಿಶಾದಲ್ಲಿ ಮೂರು ರೈಲುಗಳನ್ನು ಒಳಗೊಂಡ ಅಪಘಾತದಲ್ಲಿ ಕನಿಷ್ಠ 238 ಜನರು ಸಾವನ್ನಪ್ಪಿದ ನಂತರ ಪರಿಸ್ಥಿತಿಯನ್ನು ಅವಲೋಕಿಸಲು ರೈಲ್ವೆ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.

ಒಡಿಶಾದ ಬಾಲಾಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟ ಸುದ್ದಿ ಕೇಳಿ ಅತೀವ ನೋವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಗಾಯಗೊಂಡಿರುವವರೆಲ್ಲರೂ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಈ ಮೊದಲು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.
ಒಡಿಶಾದ ಬಾಲಶೋರ್‌ನಲ್ಲಿ ನಡೆದ ಕೋರೊಮಂಡಲ್ ರೈಲು ಅಪಘಾತದಲ್ಲಿ ಬೆಂಗಳೂರಿನಿಂದ ಬಂದ ಪ್ರಯಾಣಿಕರಿಗೆ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಬಹನಾಗಾ ಬಜಾರ್ ನಿಲ್ದಾಣದಲ್ಲಿ ಹಳಿತಪ್ಪಿದ ಕೋಚ್‌ಗಳನ್ನು ಬೇರ್ಪಡಿಸಲು ಮತ್ತು ಸಂತ್ರಸ್ತರನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ.












Click it and Unblock the Notifications