ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಕ್ಷೇಪಾರ್ಹ ಟ್ವೀಟ್; ನಟ ಚೇತನ್‌ಗೆ 14 ದಿನಗಳ ನ್ಯಾಯಾಂಗ ಬಂಧನ

|
Google Oneindia Kannada News

ಬೆಂಗಳೂರು, ಫೆಬ್ರವರಿ 23: ಹಿಜಾಬ್ ಪ್ರಕರಣ ಸದ್ಯ ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು, ಈ ವಿಚಾರವಾಗಿ ವಿವಾದಾತ್ಮಕ ಪೋಸ್ಟ್ ಹಾಕಿದ ಆರೋಪದ ಹಿನ್ನೆಲೆಯಲ್ಲಿ ನಟ ಚೇತನ್ ಕುಮಾರ್ ಅವರನ್ನು ಮಂಗಳವಾರ ಶೇಷಾದ್ರಿಪುರಂ ಪೊಲೀಸರು ವಶಕ್ಕೆ ಪಡೆದಿದ್ದರು.

ಆಕ್ಷೇಪಾರ್ಹ ಟ್ವೀಟ್ ಮಾಡಿರುವ ಆರೋಪದ ಮೇರೆಗೆ ಮೈನಾ ಖ್ಯಾತಿಯ ನಟ ಚೇತನ್‌ರಿಗೆ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್‌ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಜಾಮೀನಿಗಾಗಿ ಚೇತನ್ ಪರ ವಕೀಲ ಕೆ. ಬಾಲನ್ ಅರ್ಜಿ ಸಲ್ಲಿಸಿದ್ದು, ಇಂದು ಆಕ್ಷೇಪಣೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ನಟ ಚೇತನ್ ಬಂಧನ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆನಟ ಚೇತನ್ ಬಂಧನ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

ಈ ಮಧ್ಯೆ, ಚೇತನ್ ಪತ್ನಿ ಮೇಘಾ ಪ್ರತಿಕ್ರಿಯೆ ನೀಡಿದ್ದು, ಚೇತನ್ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಶ್ನಿಸುವ ಅವಕಾಶ ಎಲ್ಲರಿಗೂ ಇದೆ. ಪೊಲೀಸ್, ಜಡ್ಜ್, ಮೋದಿ ಯಾರೇ ಆಗಿರಲಿ ಪ್ರಶ್ನಿಸುವ ಅಧಿಕಾರವಿದೆ. ಯಾವುದೇ ಆಕ್ಷೇಪಾರ್ಹ ಪದಗಳನ್ನು ಬಳಸಿ ಚೇತನ್ ಮಾತನಾಡಿಲ್ಲ. ಚೇತನ್ ಜೊತೆ ಮಾತನಾಡಿದ್ದೇನೆ, ಆತ್ಮವಿಶ್ವಾಸದಿಂದಿದ್ದಾರೆ. ಬಂಧನದ ವಿರುದ್ಧವಾಗಿ ನಾವು ಕಾನೂನು ಹೋರಾಟ ಕೈಗೊಳ್ಳಲಿದ್ದೇವೆ ಎಂದಿದ್ದಾರೆ.

Offending Tweet Over High Court Judge Krishna Dixit; 14-day Judicial Custody of Actor Chetan

ಫೆಬ್ರವರಿ 16ರಂದು ನಟ ಚೇತನ್​ ಟ್ವೀಟ್, ಎಫ್​ಐಆರ್ ದಾಖಲು
ನಟ ಚೇತನ್​ ಫೆಬ್ರವರಿ 16ರಂದು ಟ್ವೀಟ್​ ಮಾಡಿದ್ದು, ಅದರಲ್ಲಿ ಹಿಜಾಬ್​ ವಿಚಾರವನ್ನು ಪ್ರಸ್ತಾಪಿಸುತ್ತಾ ಹೈಕೋರ್ಟ್​ ನ್ಯಾಯಮೂರ್ತಿಗಳೊಬ್ಬರ ವಿರುದ್ಧ ಅಕ್ಷೇಪಾರ್ಹ ವ್ಯಾಖ್ಯಾನ ಮಾಡಿದ್ದರು ಎನ್ನಲಾಗಿದೆ. ಇದರ ವಿರುದ್ಧ ಶೇಷಾದ್ರಿಪುರಂ ಪೊಲೀಸರು ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಂಡಿದ್ದರು. ಬಳಿಕ ಐಪಿಸಿ ಸೆಕ್ಷನ್​ 505(2) ಮತ್ತು 504 ಅಡಿ ಎಫ್​ಐಆರ್ ( FIR - Cr No40/2022) ದಾಖಲಿಸಿದ್ದಾರೆ.​

ಎರಡು ವರ್ಷಗಳ ಹಿಂದೆ ನಟ ಚೇತನ್‌ ಅತ್ಯಾಚಾರ ಪ್ರಕರಣವೊಂದರ ಬಗ್ಗೆ ನ್ಯಾಯಮೂರ್ತಿಗಳನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದರು. ಅದನ್ನು ಉಲ್ಲೇಖ ಮಾಡಿ ಫೆಬ್ರವರಿ 16ರಂದು ನ್ಯಾಯಮೂರ್ತಿಗಳ ಹಿಜಾಬ್ ವಿಚಾರಣೆ ಪೀಠದಲ್ಲಿ ಇದ್ದಾಗ ಟೀಕೆ ಮಾಡಿದ್ದರು. ಈ ಹಿನ್ನೆಲೆಯಿಂದಾಗಿ ಚೇತನ್‌ ಬಂಧನ ಮಾಡಲಾಗಿದೆ. ಇನ್ನು ವಕೀಲ ಎಸ್‌ ಬಾಲನ್, "ಒಂದು ಟ್ವೀಟ್‌ ಆಧಾರದಲ್ಲಿ ಬಂಧನ ಮಾಡಿದ್ದಾರೆಯೇ? ಯಾರ ದೂರಿನ ಆಧಾರದಲ್ಲಿ ಬಂಧನ ಮಾಡಲಾಗಿದೆ,'' ಎಂಬ ಬಗ್ಗೆಯೂ ಹೇಳಿಲ್ಲ ಎಂದಿದ್ದಾರೆ.

ಶೇಷಾದ್ರಿಪುರ ಪೊಲೀಸರ ವಶಕ್ಕೆ ನಟ ಚೇತನ್ ಕುಮಾರ್, ಕಾರಣ ಏನು?ಶೇಷಾದ್ರಿಪುರ ಪೊಲೀಸರ ವಶಕ್ಕೆ ನಟ ಚೇತನ್ ಕುಮಾರ್, ಕಾರಣ ಏನು?

ಸಾಮಾಜಿಕ ಜಾಲತಾಣದಲ್ಲಿ ಚೇತನ್‌ ಪರ-ವಿರೋಧ ಚರ್ಚೆ ನಟ ಚೇತನ್‌ ಬಂಧನದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಈ ಬಂಧನದ ವಿರುದ್ಧವಾಗಿ ಹಾಗೂ ಪರವಾಗಿ ಚರ್ಚೆಗಳು ನಡೆಯುತ್ತಿದೆ. "ನಾವು ಯಾವುದೇ ವಿರೋಧವನ್ನು ಮಾಡಿದರೂ ನಮ್ಮನ್ನು ಭಯೋತ್ಪಾದಕರಂತೆ ಬಿಂಬಿಸುವ ಸಮಾಜ ಈಗ ಇದೆ. ನಮ್ಮ ಭಾರತದಲ್ಲಿ ರಾಜಕಾರಣಿಗಳು ಇನ್ನೂ ಬುದ್ಧಿಯಲ್ಲಿ ಬೆಳೆಯಬೇಕಾಗಿದೆ,'' ಎಂದಿದ್ದಾರೆ.

Offending Tweet Over High Court Judge Krishna Dixit; 14-day Judicial Custody of Actor Chetan

ಇದಕ್ಕೂ ಮುನ್ನ ನಟ ಚೇತನ್ ಪತ್ನಿ ಮೇಘಾ ಅವರು ಮಂಗಳವಾರ ರಾತ್ರಿ ಫೇಸ್​ಬುಕ್​ ಲೈವ್​ ಬಂದು ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದರು. 'ನನ್ನ ಪತಿಯ ಅಪಹರಣವಾಗಿದೆ' ಎಂದು ಹೇಳಿಕೊಂಡಿದ್ದರು. ಇದಕ್ಕೆ ಪೊಲೀಸರಿಂದ ಸ್ಪಷ್ಟನೆ ಸಿಕ್ಕಿದ್ದು, ಅವರನ್ನು ಬಂಧಿಸಲಾಗಿದೆ ಎಂದಿದ್ದರು.

"ಶೇಷಾದ್ರಿಪುರಂ ಠಾಣೆಯ ಪೊಲೀಸರು ಚೇತನ್​ರನ್ನು ಬಂಧಿಸಿದ್ದಾರೆ. ನ್ಯಾಯಾಧೀಶರಿಗೆ ನಿಂದಿಸಿದ ಆರೋಪ ಪ್ರಕರಣದಡಿ ಬಂಧನ ನಡೆದಿದೆ. ಸ್ವಯಂಪ್ರೇರಿತ ಕೇಸ್‌ ದಾಖಲಿಸಿ ನಟ ಚೇತನ್‌ನನ್ನ ಬಂಧಿಸಿದ್ದೇವೆ,'' ಎಂದು ಬೆಂಗಳೂರಿನ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್​. ಅನುಚೇತ್ ಸ್ಪಷ್ಟನೆ ನೀಡಿದರು.

"ಚೇತನ್​ ಅವರಿಗೆ ಯಾವುದೇ ನೋಟಿಸ್ ನೀಡಿಲ್ಲ. ನೇರವಾಗಿ ಬಂದು ಚೇತನ್​ ಅವರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಚೇತನ್​ ಎಲ್ಲಿದ್ದಾರೆ ಎಂದೂ ಹೇಳುತ್ತಿಲ್ಲ. ಇದೊಂದು ರೀತಿ ಕಿಡ್ನ್ಯಾಪ್​ ಮಾಡಿದಂತೆ. ನಮಗೆ ಅನ್ಯಾಯ ಆಗಿದೆ. ಪೊಲೀಸ್​ ಆದರೂ ನಮಗೆ ಮಾಹಿತಿ ನೀಡಬಹುದಿತ್ತು. ಅದನ್ನೂ ಮಾಡುತ್ತಿಲ್ಲ,'' ಎಂದು ಚೇತನ್ ಪತ್ನಿ ಮೇಘಾ ಆರೋಪಿಸಿದ್ದರು.

Recommended Video

11 ವರ್ಷದ ಮಗುವಿನ ಜೀವ ಉಳಿಸಿದ ಕನ್ನಡಿಗ ಕೆಎಲ್ ರಾಹುಲ್ | Oneindia Kannada

English summary
The 8th ACMM court in Bengaluru has granted 14-day judicial custody to actor Chetan on charges of objection tweeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X