ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಡಿಎ ಅಧ್ಯಕ್ಷ ಎಸ್. ಆರ್.ವಿಶ್ವನಾಥ್ ಲಾಭದ ಹುದ್ದೆ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ಆ.24. ಶಾಸಕ ಎಸ್.ಆರ್. ವಿಶ್ವನಾಥ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷರಾಗಿ ಜೊತೆಗೆ ಶಾಸಕರಾಗಿ ಎರಡೂ ವೇತನ ಪಡೆದು ಲಾಭದಾಯಕ ಹುದ್ದೆ ಹೊಂದಿದ್ದಾರೆಂದು ಸಲ್ಲಿಸಿರುವ ಅರ್ಜಿಯ ಕುರಿತು ಹೈಕೋರ್ಟ್ ವಿಚಾರಣೆ ಪೂರ್ಣಗೊಳಿಸಿದೆ.

ವಿಶ್ವನಾಥ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿ ಕುರಿ ತುಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಬಿಡಿಎಗೆ 100ಕೋಟಿ ನಷ್ಟ, ಅಧಿಕಾರಿಗಳ ವಿರುದ್ಧ ಎಫ್ಐಆರ್ಬಿಡಿಎಗೆ 100ಕೋಟಿ ನಷ್ಟ, ಅಧಿಕಾರಿಗಳ ವಿರುದ್ಧ ಎಫ್ಐಆರ್

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠವು ಬೆಂಗಳೂರು ವಕೀಲ ಎ.ಎಸ್. ಹರೀಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತು.

Office of profit charges against BDA Chairman SR Vishwanath: HC reserves orders

ಎರಡೆರಡು ಹುದ್ದೆ: ಅರ್ಜಿದಾರರ ಪರ ವಕೀಲರು, ಕಾನೂನು ಪ್ರಕಾರ ಶಾಸಕರು ಸರ್ಕಾರದ ಅಧೀನ ಸಂಸ್ಥೆಗೆ ಸಂಬಂಧಿಸಿದ ಸಮಿತಿಯಲ್ಲಿ ಅಧ್ಯಕ್ಷರಾಗಿರಬಹುದು. ಆದರೆ, ಬಿಡಿಎ ಸಮಿತಿಯಲ್ಲ. ಅದೊಂದು ಶಾಸನಾತ್ಮಕವಾಗಿ ರಚಿಸಲ್ಪಟ್ಟಿರುವ ಪ್ರಾಧಿಕಾರವಾಗಿದ್ದು, ಅದಕ್ಕೆ ಅಧ್ಯಕ್ಷರಾಗಿ ಶಾಸಕ ಎಸ್.ಆರ್. ವಿಶ್ವನಾಥ್ ನೇಮಕಗೊಂಡು ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಆ ಅಧ್ಯಕ್ಷ ಹುದ್ದೆಗೆ ವೇತನ ಪಡೆಯುತ್ತಿದ್ದಾರೆ. ಈ ವಿಚಾರವನ್ನು ನ್ಯಾಯಾಲಯಕ್ಕೆ ಶಾಸಕರೇ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ ಎಂದರು.

ಅಲ್ಲದೆ, ಎಸ್.ಆರ್. ವಿಶ್ವನಾಥ್ ಅವರು ಲಾಭದಾಯಕ ಹುದ್ದೆ ಹೊಂದಿದ್ದು, ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿದರು.

ಒಂದೇ ವೇತನ: ಶಾಸಕ ಎಸ್.ಆರ್. ವಿಶ್ವನಾಥ್ ಪರ ವಕೀಲರು ವಾದ ಮಂಡಿಸಿ, ಶಾಸಕರನ್ನು ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಲು ಕಾನೂನಿನಲ್ಲಿ ಅವಕಾಶ ಇದೆ. ವಿಶ್ವನಾಥ್ ಅವರು ಶಾಸಕ ಸ್ಥಾನಕ್ಕೆ ವೇತನ ಹಾಗೂ ಭತ್ಯೆ ಪಡೆಯುತ್ತಿಲ್ಲ.‌ ಕೇವಲ ಬಿಡಿಎ ಅಧ್ಯಕ್ಷ ಹುದ್ದೆಗೆ ವೇತನ ಹಾಗೂ ಭತ್ಯೆ ಪಡೆಯುತ್ತಿದ್ದಾರೆ. ಹಾಗಾಗಿ ಅವರು ಬಿಡಿಎ ಅಧ್ಯಕ್ಷ ಹುದ್ದೆ ಅಂತಹ ಲಾಭದಾಯಕ ಹುದ್ದೆ ಹೊಂದಿದ್ದಾರೆ ಎಂದು ಹೇಳಲಾಗದು.‌ ಆದ್ದರಿಂದ ಅರ್ಜಿ ವಜಾಗೊಳಿಸಬೇಕು ಎಂದು ಕೋರಿದರು.

 BDA

ಪ್ರಕರಣದ ಹಿನ್ನೆಲೆ: ಯಲಹಂಕ ಶಾಸಕ ಎಸ್. ಆರ್. ವಿಶ್ವನಾಥ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಲಾಭದಾಯಕ ಹುದ್ದೆ ಹೊಂದಿದ್ದಾರೆಂದು ಆರೋಪಿಸಲಾಗಿದೆ. ಅಲ್ಲದೆ, ಅದೇ ಆಧಾರದ ಮೇಲೆ ವಿಶ್ವನಾಥ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹೂಡಲಾಗಿದೆ.

ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಸ್ಥಾನಕ್ಕೆ ಕುತ್ತು?ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಸ್ಥಾನಕ್ಕೆ ಕುತ್ತು?

ಸಂವಿಧಾನದ ಪರಿಚ್ಛೇದ 191(1) (ಎ) ಪ್ರಕಾರ ಸಂಸದರು ಹಾಗೂ ಶಾಸಕರಾಗಿರುವವರು ಕೇಂದ್ರ ಅಥವಾ ರಾಜ್ಯ ಸರ್ಕಾರದಲ್ಲಿ ಯಾವುದೇ ಲಾಭದಾಯಕ ಹುದ್ದೆ ಹೊಂದುವಂತಿಲ್ಲ. ಒಂದು ವೇಳೆ ಲಾಭದಾಯಕ ಹುದ್ದೆ ಹೊಂದಿದ್ದರೆ ಶಾಸಕ ಅಥವಾ ಸಂಸದ ಸ್ಥಾನದಿಂದ ಅನರ್ಹರಾಗುತ್ತಾರೆ. ಎಸ್.ಆರ್.ವಿಶ್ವನಾಥ್ ಶಾಸಕರಾಗಿ ಆಯ್ಕೆಯಾದ ಬಳಿಕ ಬಿಡಿಎ ಅಧ್ಯಕ್ಷರೂ ಆಗಿ ನೇಮಕವಾಗಿದ್ದಾರೆಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಬಿಡಿಎ ಅಧ್ಯಕ್ಷರು ಹಾಗೂ ಸದಸ್ಯರ ನೇಮಕಾತಿಗೆ ನಿರ್ದಿಷ್ಟ ನಿಯಮ ಹಾಗೂ ಮಾರ್ಗಸೂಚಿ ಇಲ್ಲ. ಸರ್ಕಾರ ತನಗೆ ಬೇಕಾದವರನ್ನು ಅಧ್ಯಕ್ಷ ಹಾಗೂ ಸದಸ್ಯರ ಸ್ಥಾನಕ್ಕೆ ನೇಮಿಸುತ್ತದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಇರುವುದಿಲ್ಲ. ಬಿಡಿಎ ಹಾಲಿ ಅಧ್ಯಕ್ಷರಾಗಿರುವ ವಿಶ್ವನಾಥ್ ಅವರು ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಅವರಿಗೆ ಬಿಡಿಎ ಅಧ್ಯಕ್ಷರಾಗಲು ಅರ್ಹತೆ ಇಲ್ಲ. ಆದ್ದರಿಂದ ಶಾಸಕ ಎಸ್.ಆರ್. ವಿಶ್ವನಾಥ್ ಅವರನ್ನು ಬಿಡಿಎ ಅಧ್ಯಕ್ಷರಾಗಿ ನೇಮಿಸಿ ಸರ್ಕಾರ 2020ರ ನ.28ರಂದು ಹೊರಡಿಸಿದ ಆದೇಶ ರದ್ದುಪಡಿಸುವಂತೆ ಅರ್ಜಿದಾರರು ಕೋರಿದ್ದಾರೆ.

ಅಲ್ಲದೆ, ಎಸ್.ಆರ್. ವಿಶ್ವನಾಥ್ ಅವರು ಬಿಡಿಎ ಅಧ್ಯಕ್ಷ ಹುದ್ದೆಗೆ ವೇತನ ಮತ್ತು ಭತ್ಯೆ ಸೇರಿದಂತೆ ಒಟ್ಟು 1.92 ಲಕ್ಷ ರೂ. ಪಡೆದುಕೊಳ್ಳುತ್ತಿದ್ದಾರೆ. ಹಾಗಾಗಿ, ಎರಡು ಹುದ್ದೆಗೆ ಸರ್ಕಾರದಿಂದ ವೇತನ ಪಡೆದುಕೊಳ್ಳುತ್ತಿರುವ ಕಾರಣ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

English summary
Office of profit charges against BDA Chairman SR Vishwanath: HC reserves orders.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X