ಬೆಂಗಳೂರಿನಲ್ಲಿ ಮತ್ತೆ ಬೈಕ್ ಟ್ಯಾಕ್ಸಿ ಸೇವೆ ಪುನರಾರಂಭಿಸಿದ ಓಲಾ
ಬೆಂಗಳೂರು, ಸೆಪ್ಟೆಂಬರ್ 16: ಫೆಡರೇಶನ್ ಆಫ್ ಕರ್ನಾಟಕ ಸ್ಟೇಟ್ ಪ್ರೈವೇಟ್ ಟ್ರಾನ್ಸ್‌ಪೋರ್ಟ್ ಅಸೋಸಿಯೇಷನ್ ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ನಿಷೇಧಿಸುವಂತೆ ಒತ್ತಾಯಿಸಿದ್ದರೂ ಓಲಾ ಸಿಇಒ ಭವೀಶ್ ಅಗರ್‌ವಾಲ್ ಎಸ್ 1 ಸ್ಕೂಟರ್‌ಗಳೊಂದಿಗೆ ಓಲಾ ಬೈಕ್ ಟ್ಯಾಕ್ಸಿ ಸೇವೆಗಳನ್ನು ಪುನಾರಂಭವನ್ನು ಘೋಷಿಸಿದರು.
ಓಲಾ ತನ್ನ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಯನ್ನು ಇಂದು ಸೆಪ್ಟೆಂಬರ್ 16 ರಿಂದ ಬೆಂಗಳೂರಿನಲ್ಲಿ ಪುನರಾರಂಭಿಸುತ್ತಿದೆ. ಓಲಾ ಸಿಇಒ ಭವಿಶ್ ಅಗರ್ವಾಲ್ ಅವರು ಟ್ವೀಟ್‌ನಲ್ಲಿ ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಮರುಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಅಪ್ಲಿಕೇಶನ್ ಆಧಾರಿತ ಕ್ಯಾಬ್ ಸೇವಾ ಪೂರೈಕೆದಾರ ಸಂಸ್ಥೆ ಓಲಾ ಬೆಂಗಳೂರು ನಗರದಾದ್ಯಂತ 5 ಕಿಮೀಗೆ 25 ರೂ ಮತ್ತು 10 ಕಿಮೀಗೆ 50 ರೂಗಳಲ್ಲಿ ಸವಾರಿಗಳನ್ನು ನೀಡಲಿದೆ.

ಅಗರ್ವಾಲ್ ಶೀಘ್ರದಲ್ಲೇ ರಾಷ್ಟ್ರವ್ಯಾಪಿ ಸೇವೆಯನ್ನು ವಿಸ್ತರಿಸುವ ತಮ್ಮ ಯೋಜನೆಗಳನ್ನು ಪ್ರಸ್ತಾಪಿಸಿದರು. ಭವಿಶ್ ಅಗರ್ವಾಲ್ ಅವರು ತಮ್ಮ ಎಕ್ಸ್ ಪೋಸ್ಟ್‌ನಲ್ಲಿ, "ಇಂದು ಬೆಂಗಳೂರಿನಲ್ಲಿ Ola ಬೈಕ್ ಅನ್ನು ಮರುಪ್ರಾರಂಭಿಸಲಾಗುತ್ತಿದೆ. ಈ ಸಮಯದಲ್ಲಿ ಎಲ್ಲಾ ಎಲೆಕ್ಟ್ರಿಕ್ ಮತ್ತು ನಮ್ಮದೇ ಆದ S1 ಸ್ಕೂಟರ್‌ಗಳು 5 ಕಿ.ಮೀಗೆ 25 ರೂ., 10 ಕಿ.ಮೀಗೆ 50 ರೂ. ಕಡಿಮೆ ವೆಚ್ಚದಲ್ಲಿ ಸೇವೆ ಒದಗಿಸಲಿದೆ. ಮುಂದಿನ ಕೆಲವು ತಿಂಗಳುಗಳಲ್ಲಿ ಭಾರತದಾದ್ಯಂತ ಹರಡಲಿದೆ ಎಂದು ತಿಳಿಸಿದ್ದಾರೆ.
ಓಲಾ ಮೊದಲ ಬಾರಿಗೆ 2016 ರಲ್ಲಿ ಬೆಂಗಳೂರಿನಲ್ಲಿ ತನ್ನ ಬೈಕ್ ಟ್ಯಾಕ್ಸಿ ಸೇವೆಯನ್ನು ಪ್ರಾರಂಭಿಸಿತ್ತು, ಆದರೆ ದ್ವಿಚಕ್ರ ವಾಹನಗಳ ಸುರಕ್ಷತೆ ಮತ್ತು ಕಾನೂನುಬದ್ಧತೆಗೆ ಸಂಬಂಧಿಸಿದಂತೆ ರಾಜ್ಯದ ಸಾರಿಗೆ ಇಲಾಖೆಯಿಂದ ಅಡಚಣೆಯನ್ನು ಎದುರಿಸಿತು. ಬಳಿಕ 2019 ರ ವೇಳೆಗೆ ರಾಜ್ಯದಲ್ಲಿ ಸಂಪೂರ್ಣ ನಿಷೇಧವನ್ನು ವಿಧಿಸಲಾಯಿತು.
Restarting Ola Bike in Blr today 🙂
— Bhavish Aggarwal (@bhash) September 16, 2023
This time, all electric and our own S1 scooters!
₹25 for 5km, ₹50 for 10km.
Lowest cost, very comfortable and great for the environment! Will scale across India over next few months. pic.twitter.com/HIB4Pu0SKQ
ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳ ನಿಷೇಧವನ್ನು ಜಾರಿಗೊಳಿಸುವಂತೆ ಕರ್ನಾಟಕ ಸರ್ಕಾರವನ್ನು ನಗರದಲ್ಲಿ ಕ್ಯಾಬ್ ಮತ್ತು ಆಟೋ ಅಸೋಸಿಯೇಷನ್‌ಗಳು ಒತ್ತಾಯಿಸುತ್ತಿರುವ ಮಧ್ಯೆ ಅಗರ್ವಾಲ್ ಅವರು ಈ ಘೋಷಣೆ ಮಾಡಿದ್ದಾರೆ. ಮಹಿಳೆಯರ ಸುರಕ್ಷತಾ ಸಮಸ್ಯೆಗಳ ಬಗ್ಗೆ ಕ್ಯಾಬ್ ಮತ್ತು ಆಟೋ ಅಸೋಸಿಯೇಷನ್ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದು, ಬಿಳಿ ನಂಬರ್ ಪ್ಲೇಟ್‌ಗಳನ್ನು ಹೊಂದಿರುವ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯು ಕಾನೂನಿಗೆ ವಿರುದ್ಧವಾಗಿದೆ ಎಂದು ಹೇಳಿವೆ.
ಬೈಕ್ ಟ್ಯಾಕ್ಸಿಗಳನ್ನು ಪರಿಚಯಿಸಿದಾಗಿನಿಂದ ಇದು ಅನೇಕ ಇತರ ರಾಜ್ಯಗಳಲ್ಲಿಯೂ ಪ್ರಮುಖ ಅಡಚಣೆಗಳನ್ನು ಎದುರಿಸುತ್ತಿದೆ. ಈ ಹಿಂದೆ ಫೆಬ್ರವರಿಯಲ್ಲಿ ದೆಹಲಿ ಸಾರಿಗೆ ಇಲಾಖೆಯು ಓಲಾ, ಉಬರ್ ಮತ್ತು ರಾಪಿಡೋದಂತಹ ನಿರ್ವಾಹಕರು ಒದಗಿಸುವ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸಿ ಅಧಿಸೂಚನೆಯನ್ನು ಹೊರಡಿಸಿತ್ತು.
ನಿಯಮಗಳನ್ನು ಉಲ್ಲಂಘಿಸುವ ಸಂಗ್ರಾಹಕರಿಗೆ 1 ಲಕ್ಷ ರೂಪಾಯಿ ದಂಡ ವಿಧಿಸಲಾಗುವುದು ಎಂದು ಅದು ಹೇಳಿದೆ. ನಂತರ ಜೂನ್‌ನಲ್ಲಿ, ಈ ಬೈಕ್ ಅಗ್ರಿಗೇಟರ್‌ಗಳು ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸಲು ಅನುಮತಿಸಿದ ದೆಹಲಿ ಹೈಕೋರ್ಟ್‌ನ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿತು.
ಬೈಕ್ ಟ್ಯಾಕ್ಸಿ ಸೇವೆಗಳನ್ನು ಒದಗಿಸಲು ರಾಪಿಡೋಗೆ ಪರವಾನಗಿ ನೀಡಲು ಪುಣೆಯ ಪ್ರಾದೇಶಿಕ ಸಾರಿಗೆ ಕಚೇರಿ ನಿರಾಕರಿಸಿದ ನಂತರ ಮಹಾರಾಷ್ಟ್ರದಲ್ಲಿ ಇದೇ ರೀತಿಯ ನಿಷೇಧವನ್ನು ವಿಧಿಸಲಾಯಿತು. ನಂತರ ಈ ಆದೇಶವನ್ನು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಯಿತು, ಅಲ್ಲಿ ಅದನ್ನು ವಜಾಗೊಳಿಸಲಾಯಿತು.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.












Click it and Unblock the Notifications