ಬೆಂಗಳೂರಲ್ಲಿ ಓಲಾ, ಉಬರ್ & ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಗೆ ಬ್ರೇಕ್!
ಬೆಂಗಳೂರು ಹಾಗೂ ಮೈಸೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಓಲಾ, ಉಬರ್ ಹಾಗೂ ರ್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಗೆ ಬಿಗ್ ಶಾಕ್ ಕೊಡಲಾಗಿದೆ. ಬೆಂಗಳೂರು ಮತ್ತು ಮೈಸೂರು ಭಾಗದಲ್ಲಿ ವಾಹನ ಇಲ್ಲದೆ ಇರುವವರಿಗೆ ಹಾಗೂ ಕಡಿಮೆ ಖರ್ಚಿನಲ್ಲಿ ಹೋಗಬೇಕು ಎನ್ನುವವರು ಓಲಾ, ಉಬರ್ ಹಾಗೂ ರ‍್ಯಾಪಿಡೋ ಬೈಕ್‌ಗಳನ್ನು ಅವಲಂಬಿಸುತ್ತಿದ್ದರು. ಆದರೆ, ಇದು ಕಾನೂನು ಬಾಹಿರವಾಗಿತ್ತು. ಇದೀಗ ಈ ಸೇವೆಗಳಿಗೆ ತಾತ್ಕಾಲಿಕ ಬ್ರೇಕ್ ಬಿದ್ದಂತೆ ಆಗಿದೆ.
ಹೌದು ಬೆಂಗಳೂರಿನಲ್ಲಿ ಓಲಾ, ಉಬರ್ ಹಾಗೂ ರ್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಯು ಮುಂದಿನ ಆರು ವಾರಗಳ ಅವಧಿಯ ವರೆಗೆ ಇರುವುದಿಲ್ಲ. ಮುಂದಿನ ಆರು ವಾರಗಳ ಅವಧಿಗೆ ಓಲಾ, ಉಬರ್ ಹಾಗೂ ರ್ಯಾಪಿಡೋ ಬೈಕ್ ಟ್ಯಾಕ್ಸಿಗಳ ಸೇವೆಯನ್ನು ಸ್ಥಗಿತ ಮಾಡುವಂತೆ ಕರ್ನಾಟಕ ಹೈಕೋರ್ಟ್ ಆದೇಶ ಮಾಡಿದೆ. ಹೈಕೋರ್ಟ್‌ನ ಆದೇಶವು ನಗರದ ಆಟೋ ಚಾಲಕರಲ್ಲಿ ಸಂತೋಷವನ್ನುಂಟು ಮಾಡಿದೆ.

ಕಳೆದ ಹಲವು ದಿನಗಳಿಂದ ನಗರದಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ನಿಷೇಧಿಸಬೇಕು ಎಂದು ಆಟೋ ಚಾಲಕರು ಆಗ್ರಹಿಸುತ್ತಲ್ಲೇ ಇದ್ದರು. ಇದೀಗ ಆಟೋ ಚಾಲಕರು ತುಸು ನಿರಾಳವಾಗುವಂತಹ ಸುದ್ದಿ ಬಂದಿದೆ. ಹೌದು ಬೆಂಗಳೂರಿನಲ್ಲಿ ಮೆಟ್ರೋ ಸೇವೆ ಪ್ರಾರಂಭವಾದ ಮೇಲೆ ಹಾಗೂ ಖಾಸಗಿ ಕಂಪನಿಗಳ ಟ್ಯಾಕ್ಸಿ ಸೇವೆಯಿಂದ ಆಟೋ ಚಾಲಕರಿಗೆ ಭಾರೀ ನಷ್ಟ ಹಾಗೂ ಸಂಕಷ್ಟ ಎದುರಾಗಿದೆ ಎಂದು ಆಟೋ ಚಾಲಕರು ದೂರಿದ್ದರು. ಈ ಸೇವೆಗಳು ಕಾನೂನು ಬಾಹಿರವಾಗಿದ್ದು ನಿಲ್ಲಿಸಬೇಕು ಎನ್ನುವ ಆಗ್ರಹಗಳು ಸಹ ಕೇಳಿ ಬಂದಿದ್ದವು.
ಇನ್ನು ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ನಿರ್ದೇಶನ ಕೊಡಬೇಕು ಎಂದು ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈ. ಲಿ, ರೊಪ್ಪೆನ್ ಟ್ರಾನ್ಸ್ಪೋರ್ಟೇಶನ್ ಸರ್ವೀಸಸ್ ಪ್ರೈ.ಲಿ ಹಾಗೂ ಎಎನ್ಐ ಟೆಕ್ನಾಲಜೀಸ್ ಪ್ರೈ.ಲಿ ಪ್ರಮುಖ ಸಂಸ್ಥೆಗಳು ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದವು. ಈ ಅರ್ಜಿಗಳ ವಿಚಾರಣೆ ನಡೆದಿದ್ದು, ನ್ಯಾಯಮೂರ್ತಿ ಬಿ.ಎಂ. ಶ್ಯಾಮಪ್ರಸಾದ್ ಅವರ ಏಕಸದಸ್ಯ ಪೀಠವು ಇದೀಗ ಆರು ವಾರಗಳ ಸೇವೆ ಸ್ಥಗಿತ ಆದೇಶವನ್ನು ಮಾಡಿದೆ.
ಹೊಸ ನಿಯಮ ರೂಪಿಸಲು ಆದೇಶ: ಇನ್ನು ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರಕ್ಕೆ ಪ್ರಮುಖ ನಿರ್ದೇಶನವನ್ನೂ ನೀಡಲಾಗಿದೆ. ಬೈಕ್‌ಟ್ಯಾಕ್ಸ್ ಸಿಟಿ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಮುಂದಿನ ಮೂರು ತಿಂಗಳ ಒಳಗಾಗಿ ಮೋಟಾರು ವಾಹನ ಕಾಯ್ದೆಯ ಅನುಸಾರ ಹೊಸ ನಿಯಮವನ್ನು ರೂಪಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಕೋರ್ಟ್ ಸೂಚನೆ ನೀಡಿದೆ. ಕೋರ್ಟ್‌ನ ಈ ಆದೇಶದಿಂದಾಗಿ ಬೆಂಗಳೂರಿನಲ್ಲಿ ಬೈಕ್ ಸಿಟಿ ಕಾರ್ಯಾಚರಣೆಗೆ ಭಾರೀ ದೊಡ್ಡ ಹಿನ್ನೆಡೆಯಾಗಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಇನ್ನು ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳ ಸೇವೆ ಪುನರಾರಂಭವಾಗುವುದು ಅಥವಾ ಆಗದೆ ಇರುವುದು ಎಲ್ಲವೂ ಇದೀಗ ರಾಜ್ಯ ಸರ್ಕಾರದ ಕೈಯಲ್ಲಿಯೇ ಇದೆ. ಸರ್ಕಾರವು ಹೊಸ ನಿಯಮ ರೂಪಿಸಬೇಕು. ಆ ನಂತರ ಈ ಪ್ರಕ್ರಿಯೆ ಪುನರ್ ಪ್ರಾರಂಭವಾಗುವ ಸಾಧ್ಯತೆ ಇದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications