Namma Metro ಪ್ರಯಾಣಿಕರೇ ಗಮನಿಸಿ: ಮಧ್ಯರಾತ್ರಿ 2 ಗಂಟೆಯವರೆಗೆ ನಮ್ಮ ಮೆಟ್ರೋ ಸಂಚಾರ

ಬೆಂಗಳೂರು, ಡಿಸೆಂಬರ್‌ 29: ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರು ತಯಾರಿ ನಡೆಸುತ್ತಿದ್ದು, ಹಲವು ಸುರಕ್ಷತಾ ಕ್ರಮಗಳೊಂದಿಗೆ ಸಡಗರ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ನಗರದ ಮೆಟ್ರೋ ಸಂಚಾರದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಹೊಸ ವರ್ಷದ ಸಂಭ್ರಮಾಚರಣೆಗೆ ಅನುಕೂಲವಾಗುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ಹೊಸ ವರ್ಷದ ಮುನ್ನಾದಿನದಂದು ಬೆಳಗಿನ ಜಾವ 2 ಗಂಟೆಯವರೆಗೆ ತನ್ನ ರೈಲು ಸೇವೆಗಳನ್ನು ವಿಸ್ತರಿಸಿದೆ. ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎಂಜಿ ರಸ್ತೆ ಮೆಟ್ರೋ ನಿಲ್ದಾಣಕ್ಕೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಪೊಲೀಸ್ ಇಲಾಖೆ ಸೂಚಿಸಿದ್ದು, ಡಿಸೆಂಬರ್ 31 ರಂದು ವಿಸ್ತೃತ ರೈಲು ಸೇವೆಯನ್ನು ಬಳಸಲು ಮೆಟ್ರೋ ಪ್ರಯಾಣಿಕರು ಟ್ರಿನಿಟಿ ಅಥವಾ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಿಗೆ ತೆರಳಲು ಸೂಚಿಸಲಾಗಿದೆ.

On December 31, Namma Metro will run till 2 midnight in Bengaluru

ರಾತ್ರಿ 11.30ಕ್ಕೆ ಇದ್ದ ಕೊನೆಯ ರೈಲು ಸೇವೆಯನ್ನು ಡಿಸೆಂಬರ್ 31 ರಂದು ಬೆಳಗಿನ ಜಾವ 2 ಗಂಟೆಯವರೆಗೆ ವಿಸ್ತರಿಸಲಾಗಿದ್ದು, ರೈಲುಗಳು 15 ನಿಮಿಷಗಳ ಆವರ್ತನದಲ್ಲಿ ಸಂಚರಿಸಲಿವೆ. ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳಿಂದ ಪ್ರಯಾಣಿಕರಿಗೆ 50 ರೂಪಾಯಿಗೆ ಪೇಪರ್ ಟಿಕೆಟ್ ನೀಡಲಾಗುತ್ತದೆ.

ಡಿಸೆಂಬರ್ 31 ರಂದು ಮಧ್ಯರಾತ್ರಿ ಟಿಕೆಟ್ ವಿತರಣೆ ಇರುವುದಿಲ್ಲವಾದ್ದರಿಂದ ಪೇಪರ್ ಟಿಕೆಟ್‌ಗಳನ್ನು ಮುಂಚಿತವಾಗಿ ಪಡೆಯಬೇಕು. ಸ್ಮಾರ್ಟ್ ಕಾರ್ಡ್ ಮತ್ತು ಕ್ಯೂಆರ್ ಕೋಡ್ ಟಿಕೆಟ್ ಹೊಂದಿರುವ ಪ್ರಯಾಣಿಕರು ಎಂದಿನಂತೆ ರಿಯಾಯಿತಿ ದರದಲ್ಲಿ ಪ್ರಯಾಣಿಸಬಹುದು ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಹೊಸ ವರ್ಷಾಚರಣೆಗಾಗಿ ಎಂ.ಜಿ.ರಸ್ತೆಯ ಸಮೀಪದಲ್ಲಿರುವ ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್‌ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಯುವ ಜನರನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಎಂಜಿ ರಸ್ತೆ ನಿಲ್ದಾಣಕ್ಕೆ ಪ್ರವೇಶ ನಿರ್ಬಂಧಿಸುವ ಕ್ರಮಕ್ಕೆ ಮುಂದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+