ಒಮ್ಮೆ ಕುರ್ಚಿ ಬಿಟ್ಟರೆ ಸಿದ್ದು ಇತಿಹಾಸದಿಂದಲೇ ಮಾಯ: ಡಿವಿಎಸ್
ಬೆಂಗಳೂರು, ಸೆಪ್ಟೆಂಬರ್ 23: ರಾಜ್ಯ ಬಿಜೆಪಿಯ ಸಾಂಪ್ರದಾಯಿಕ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ಬೆನ್ನಲ್ಲೇ ಕೇಂದ್ರದ ಸಚಿವ ಡಿ.ವಿ. ಸದಾನಂದ ಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಲಾರಂಭಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿರುವವರೆಗೂ ಅವರ ತಪ್ಪುಗಳು ಅವರಿಗೆ ಕಾಣಿಸುವುದಿಲ್ಲ ಎಂದರು.

ಒಮ್ಮೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರ ಬಿಟ್ಟು ಕೆಳಗಿಳಿಯಲಿ, ಅವರು ಚರಿತ್ರೆಯಿಂದಲೇ ಮಾಯವಾಗುತ್ತಾರೆ ಎಂದು ವ್ಯಂಗ್ಯವಾಡಿದರು.

ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಚಿಸಲಾಗಿರುವ ಬಿಜೆಪಿ ಸಾಂಪ್ರದಾಯಿಕ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರನ್ನು ನೇಮಿಸಲಾಗಿದೆ.












Click it and Unblock the Notifications