ಸಲಿಂಗ ಪ್ರೇಮಿಗಳ ತಲ್ಲಣಗಳ ಕಥೆಯುಳ್ಳ ನಾಟಕ ನೋಡಿ
ಬೆಂಗಳೂರು, ನವೆಂಬರ್ 22: 25: ಒಂದು ಪ್ರೀತಿಯ ಕಥೆ, ಸಲಿಂಗ ಪ್ರೀತಿ ಮತ್ತು ಈ ಪ್ರೇಮಿಗಳ ಜೀವನದಲ್ಲಿ ಸಮಾಜ ಸೃಷ್ಟಿಸುವ ತಲ್ಲಣಗಳ ಕಥೆ. 1982ರಲ್ಲಿ ವಿಜಯ್ ತೆಂಡೂಲ್ಕರ್ ಅವರು ರಚಿಸಿದ 'ಮಿತ್ರಾಚಿ ಗೋಶ್ಟ್' ನಾಟಕವನ್ನು ವೆಂಕಟೇಶ್ ಪ್ರಸಾದ್ 'ಒಂದು ಪ್ರೀತಿಯ ಕಥೆ' ಎಂಬ ಹೆಸರಿನೊಂದಿಗೆ ಕನ್ನಡಕ್ಕೆ ರೂಪಾಂತರಿಸಿ ನಿರ್ದೇಶಿಸಿದ್ದಾರೆ.
ಸಲಿಂಗ ಕಾಮ ವೈಯಕ್ತಿಕ ಆಯ್ಕೆಯಲ್ಲ. ನೈಸರ್ಗಿಕವಾಗಿಯೇ ಈ ರೀತಿಯ ಆಸಕ್ತಿಗಳು ಮೂಡುತ್ತವೆ ಎಂದು ವೈದ್ಯಕೀಯ ವಿಜ್ಞಾನ ತಿಳಿಸುತ್ತದೆ. ಪ್ರಾಣಿಗಳಲ್ಲಿಯೂ ಈ ಬಗೆಯ ಸಂಬಂಧಗಳನ್ನು ಕಾಣಬಹುದು. ಸಲಿಂಗವು ಅಸಾಮಾನ್ಯ ಪ್ರವೃತ್ತಿಯಲ್ಲ. ಗಂಡು ಹೆಣ್ಣಿನ ಪ್ರೀತಿ ಹೇಗೆ ಸಾಗುತ್ತದೆಯೋ ಹಾಗೆಯೇ ಇಬ್ಬರು ಹೆಣ್ಣು ಮಕ್ಕಳ ಪ್ರೇಮವನ್ನೂ ನಾಟಕದಲ್ಲಿ ಹೆಣೆಯಲಾಗಿದೆ.
ಇದು ಅಸಹಜವಲ್ಲ ಎನ್ನುವುದನ್ನು ಪ್ರೇಕ್ಷಕರ ಮನಮುಟ್ಟುವಂತೆ ಸಾರುವುದೇ ನಾಟಕದ ಉದ್ದೇಶ. ಗಂಡು ಹೆಣ್ಣಿನ ಪ್ರೇಮಕ್ಕೆ ಎದುರಾಗುವ ಎಲ್ಲ ಅಡೆತಡೆಗಳು ಸಲಿಂಗಿಗಳ ಪ್ರೀತಿಗೂ ಎದುರಾಗುತ್ತವೆ, ಆದರೆ ಸಲಿಂಗ ಕಾಮಿಗಳನ್ನು ಈ ಸಮಾಜ ನೋಡುವ ಬಗೆ ಮತ್ತು ಅವರ ಪ್ರೀತಿಗೆ ಸಮಾಜ ಕೊಡುವ ಅನೈತಿಕತೆಯ ಪಟ್ಟ, ಅದರಿಂದಾಗಿ ಈ ಪ್ರೇಮಿಗಳ ಬದುಕಿನಲ್ಲಾಗುವ ಪರಿಣಾಮಗಳ ಬಗೆಗೆ ನಾಟಕ ಬೆಳಕು ಚೆಲ್ಲುತ್ತದೆ.

ಸಲಿಂಗಿಗಳ ವಿವಾಹ ವಿಷಯ ಕುರಿತು ರಂಗಪ್ರಯೋಗ
ಸಲಿಂಗಿಗಳ ವಿವಾಹ ವಿಷಯ ಕುರಿತು ರಂಗಪ್ರಯೋಗಗಳಾಗಿದ್ದು ವಿರಳ. ತೃತೀಯ ಲಿಂಗಿಗಳು, ಸಲಿಂಗಿಗಳು ಹಾಗೂ ಲೈಂಗಿಕ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಯ ಕಲಾ ಪ್ರಕಾರಗಳಲ್ಲಿ ಹಾಸ್ಯದ ವಸ್ತುವಾಗಿ ಬಳಸಿಕೊಂಡಿದ್ದೇ ಹೆಚ್ಚು. ಇಲ್ಲವೇ ಅವರನ್ನು ವ್ಯವಸ್ಥೆಯ ಬಲಿಪಶುಗಳು ಎನ್ನುವಂತೆ ಬಿಂಬಿಸಲಾಗುತ್ತದೆ.
ಸಲಿಂಗ ಕಾಮ ಅಸಹಜವಲ್ಲ ಎನ್ನುವುದನ್ನು ಪ್ರೇಕ್ಷಕರ ಮನಮುಟ್ಟುವಂತೆ ಸಾರುವುದೇ ನಾಟಕದ ಉದ್ದೇಶ. ಗಂಡು ಹೆಣ್ಣಿನ ಪ್ರೇಮಕ್ಕೆ ಎದುರಾಗುವ ಎಲ್ಲ ಅಡೆತಡೆಗಳು ಸಲಿಂಗಿಗಳ ಪ್ರೀತಿಗೂ ಎದುರಾಗುತ್ತವೆ, ಆದರೆ, ಸಲಿಂಗ ಕಾಮಿಗಳನ್ನು ಈ ಸಮಾಜ ನೋಡುವ ಬಗೆ ಮತ್ತು ಅವರ ಪ್ರೀತಿಗೆ ಸಮಾಜ ಕೊಡುವ ಅನೈತಿಕತೆಯ ಪಟ್ಟ, ಅದರಿಂದಾಗಿ ಈ ಪ್ರೇಮಿಗಳ ಬದುಕಿನಲ್ಲಾಗುವ ಪರಿಣಾಮಗಳ ಬಗೆಗೆ ನಾಟಕ ಬೆಳಕು ಚೆಲ್ಲುತ್ತದೆ.

ಪೂರ್ವಾಗ್ರಹಗಳನ್ನು ತೊಲಗಿಸುವ ನಿಟ್ಟಿನಲ್ಲಿ ಕಥೆ
ಈ ನಾಟಕ ರಚನೆಯಾದದ್ದು 1980ರ ದಶಕದಲ್ಲಿ. ಅಂದಿನ ದಿನಗಳಿಗೂ, ಇಂದಿನ ಪರಿಸ್ಥಿತಿಗೂ ಸಲಿಂಗಿಗಳ ಕುರಿತು ನಮ್ಮ ಸಮಾಜ ಹೊಂದಿರುವ ಮನಸ್ಥಿತಿಯಲ್ಲಿ ಬಹುದೊಡ್ಡ ಬದಲಾವಣೆಗಳಾಗಿಲ್ಲ. ಲೈಂಗಿಕ ಅಲ್ಪಸಂಖ್ಯಾತರ ಕುರಿತು ಜನರು ಹೊಂದಿರುವ ಪೂರ್ವಾಗ್ರಹಗಳು ಜನರಲ್ಲಿ ಗಟ್ಟಿಯಾಗಿ ಬೇರೂರಿವೆ. ಸಲಿಂಗ ವಿವಾಹವಾಗುವವರು ಅಸಾಮಾನ್ಯರು, ಅಸಹಜರು ಎನ್ನುವ ಧೋರಣೆಯನ್ನು ತೊಲಗಿಸುವ ನಿಟ್ಟಿನಲ್ಲಿ ರಂಗತಂಡ ಕಾರ್ಯಪ್ರವೃತ್ತವಾಗಿದೆ

ಸಹಜ ನಿರೂಪಣೆಯ ನಾಟಕ
ಲೈಂಗಿಕ ಅಲ್ಪಸಂಖ್ಯಾತರನ್ನು ಕಲೆಗಳಲ್ಲಿ ಹಾಸ್ಯಕ್ಕೆ ಬಳಸಿಕೊಳ್ಳುವುದು ಅಥವಾ ಅವರ ಸಮಸ್ಯೆಗಳನ್ನು ವೈಭವೀಕರಿಸುವುದು, ಅಲ್ಲದೆ ವೀಕ್ಷಕರಿಂದ ಕಣ್ಣೀರು ಹಾಕಿಸಿ, ಸಮಾಜದಲ್ಲಿ ಸಲಿಂಗಿಗಳು ಸಹಜವಾಗಿ ಬದುಕಲು ಸಾಕಷ್ಟು ಶ್ರಮಪಡಬೇಕಾಗುತ್ತದೆ ಎಂಬುದನ್ನು ತಿಳಿಸುವುದು ಸರಿಯಲ್ಲ. ಇದರಿಂದ ಸಲಿಂಗಿಗಳನ್ನು ನೋಡುವ ಸಮಾಜದ ದೃಷ್ಟಿಕೋನದಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ. ಹಾಗಾಗಿ ಈ ನಾಟಕದ ನಿರೂಪಣೆಯನ್ನು ಸಹಜವಾಗಿ ಕಟ್ಟಲಾಗಿದೆ.

ಸಮಸ್ಯೆಯ ವೈಭವೀಕರಣವಲ್ಲ. ನವಿರಾದ ಪ್ರೀತಿಯ ಕಥೆ
ಇದು ಸಮಸ್ಯೆಯ ವೈಭವೀಕರಣವಲ್ಲ. ನವಿರಾದ ಪ್ರೀತಿಯ ಕಥೆ - ಒಂದು ಪ್ರೀತಿಯ ಕಥೆ
ನಾಟಕ : ಒಂದು ಪ್ರೀತಿಯ ಕಥೆ..!
ಮರಾಠಿ ಮೂಲ : ವಿಜಯ್ ತೆಂಡೂಲ್ಕರ್ ರ 'ಮಿತ್ರಾಚಿ ಗೋಶ್ಟ್'
ನಿರ್ದೇಶನ : ವೆಂಕಟೇಶ್ ಪ್ರಸಾದ್
ಸಹ ನಿರ್ದೇಶನ : ಉಜ್ವಲ ರಾವ್
ನವೆಂಬರ್ 24| ಕೆಎಚ್ ಕಲಾಸೌಧ, ಹನುಮಂತನಗರ | ಸಂಜೆ 7:30 | 150/-
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications