ಸಲಿಂಗ ಪ್ರೀತಿ, ತಲ್ಲಣಗಳ ಒಂದು ಪ್ರೀತಿಯ ಕಥೆ ನೋಡಿ!
ಬೆಂಗಳೂರು, ಜನವರಿ 25: ಒಂದು ಪ್ರೀತಿಯ ಕಥೆ, ಸಲಿಂಗ ಪ್ರೀತಿ ಮತ್ತು ಈ ಪ್ರೇಮಿಗಳ ಜೀವನದಲ್ಲಿ ಸಮಾಜ ಸೃಷ್ಟಿಸುವ ತಲ್ಲಣಗಳ ಕಥೆ. 1982ರಲ್ಲಿ ವಿಜಯ್ ತೆಂಡೂಲ್ಕರ್ ಅವರು ರಚಿಸಿದ 'ಮಿತ್ರಾಚಿ ಗೋಶ್ಟ್' ನಾಟಕವನ್ನು ವೆಂಕಟೇಶ್ ಪ್ರಸಾದ್ 'ಒಂದು ಪ್ರೀತಿಯ ಕಥೆ' ಎಂಬ ಹೆಸರಿನೊಂದಿಗೆ ಕನ್ನಡಕ್ಕೆ ರೂಪಾಂತರಿಸಿ ನಿರ್ದೇಶಿಸಿದ್ದಾರೆ.

ಸಲಿಂಗ ಕಾಮ ವೈಯಕ್ತಿಕ ಆಯ್ಕೆಯಲ್ಲ. ನೈಸರ್ಗಿಕವಾಗಿಯೇ ಈ ರೀತಿಯ ಆಸಕ್ತಿಗಳು ಮೂಡುತ್ತವೆ ಎಂದು ವೈದ್ಯಕೀಯ ವಿಜ್ಞಾನ ತಿಳಿಸುತ್ತದೆ. ಪ್ರಾಣಿಗಳಲ್ಲಿಯೂ ಈ ಬಗೆಯ ಸಂಬಂಧಗಳನ್ನು ಕಾಣಬಹುದು. ಸಲಿಂಗವು ಅಸಾಮಾನ್ಯ ಪ್ರವೃತ್ತಿಯಲ್ಲ. ಗಂಡು ಹೆಣ್ಣಿನ ಪ್ರೀತಿ ಹೇಗೆ ಸಾಗುತ್ತದೆಯೋ ಹಾಗೆಯೇ ಇಬ್ಬರು ಹೆಣ್ಣು ಮಕ್ಕಳ ಪ್ರೇಮವನ್ನೂ ನಾಟಕದಲ್ಲಿ ಹೆಣೆಯಲಾಗಿದೆ.
ಇದು ಅಸಹಜವಲ್ಲ ಎನ್ನುವುದನ್ನು ಪ್ರೇಕ್ಷಕರ ಮನಮುಟ್ಟುವಂತೆ ಸಾರುವುದೇ ನಾಟಕದ ಉದ್ದೇಶ. ಗಂಡು ಹೆಣ್ಣಿನ ಪ್ರೇಮಕ್ಕೆ ಎದುರಾಗುವ ಎಲ್ಲ ಅಡೆತಡೆಗಳು ಸಲಿಂಗಿಗಳ ಪ್ರೀತಿಗೂ ಎದುರಾಗುತ್ತವೆ, ಆದರೆ ಸಲಿಂಗ ಕಾಮಿಗಳನ್ನು ಈ ಸಮಾಜ ನೋಡುವ ಬಗೆ ಮತ್ತು ಅವರ ಪ್ರೀತಿಗೆ ಸಮಾಜ ಕೊಡುವ ಅನೈತಿಕತೆಯ ಪಟ್ಟ, ಅದರಿಂದಾಗಿ ಈ ಪ್ರೇಮಿಗಳ ಬದುಕಿನಲ್ಲಾಗುವ ಪರಿಣಾಮಗಳ ಬಗೆಗೆ ನಾಟಕ ಬೆಳಕು ಚೆಲ್ಲುತ್ತದೆ.

ಆದರೆ, ಈ ಎರಡೂ ಸಿದ್ಧ ಮಾದರಿಯ ಸಾಧ್ಯತೆಗಳಾಚೆ ಸಲಿಂಗ ವಿವಾಹ ಹಾಗೂ ಸಲಿಂಗ ಪ್ರೀತಿ ಅತಿ ಸಹಜವಾದುದು ಎನ್ನುವುದನ್ನು ಗಟ್ಟಿಯಾದ ನಿಲುವಿನೊಂದಿಗೆ ಪ್ರತಿಪಾದಿಸಲು ಬೆಂಗಳೂರು ಥಿಯೇಟರ್ ಕಲೆಕ್ಟಿವ್' ಈ ಪ್ರಯೋಗದ ಮೂಲಕ ಪ್ರಯತ್ನ ಪಡುತ್ತಿದೆ.

ಈ ನಾಟಕ ರಚನೆಯಾದದ್ದು 1980ರ ದಶಕದಲ್ಲಿ. ಅಂದಿನ ದಿನಗಳಿಗೂ, ಇಂದಿನ ಪರಿಸ್ಥಿತಿಗೂ ಸಲಿಂಗಿಗಳ ಕುರಿತು ನಮ್ಮ ಸಮಾಜ ಹೊಂದಿರುವ ಮನಸ್ಥಿತಿಯಲ್ಲಿ ಬಹುದೊಡ್ಡ ಬದಲಾವಣೆಗಳಾಗಿಲ್ಲ. ಲೈಂಗಿಕ ಅಲ್ಪಸಂಖ್ಯಾತರ ಕುರಿತು ಜನರು ಹೊಂದಿರುವ ಪೂರ್ವಾಗ್ರಹಗಳು ಜನರಲ್ಲಿ ಗಟ್ಟಿಯಾಗಿ ಬೇರೂರಿವೆ. ಸಲಿಂಗ ವಿವಾಹವಾಗುವವರು ಅಸಾಮಾನ್ಯರು, ಅಸಹಜರು ಎನ್ನುವ ಧೋರಣೆಯನ್ನು ತೊಲಗಿಸುವ ನಿಟ್ಟಿನಲ್ಲಿ ರಂಗತಂಡ ಕಾರ್ಯಪ್ರವೃತ್ತವಾಗಿದೆ.

'ಲೈಂಗಿಕ ಅಲ್ಪಸಂಖ್ಯಾತರನ್ನು ಕಲೆಗಳಲ್ಲಿ ಹಾಸ್ಯಕ್ಕೆ ಬಳಸಿಕೊಳ್ಳುವುದು ಅಥವಾ ಅವರ ಸಮಸ್ಯೆಗಳನ್ನು ವೈಭವೀಕರಿಸುವುದು, ಅಲ್ಲದೆ ವೀಕ್ಷಕರಿಂದ ಕಣ್ಣೀರು ಹಾಕಿಸಿ, ಸಮಾಜದಲ್ಲಿ ಸಲಿಂಗಿಗಳು ಸಹಜವಾಗಿ ಬದುಕಲು ಸಾಕಷ್ಟು ಶ್ರಮಪಡಬೇಕಾಗುತ್ತದೆ ಎಂಬುದನ್ನು ತಿಳಿಸುವುದು ಸರಿಯಲ್ಲ. ಇದರಿಂದ ಸಲಿಂಗಿಗಳನ್ನು ನೋಡುವ ಸಮಾಜದ ದೃಷ್ಟಿಕೋನದಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ. ಹಾಗಾಗಿ ಈ ನಾಟಕದ ನಿರೂಪಣೆಯನ್ನು ಸಹಜವಾಗಿ ಕಟ್ಟಲಾಗಿದೆ.
ಇದು ಸಮಸ್ಯೆಯ ವೈಭವೀಕರಣವಲ್ಲ. ನವಿರಾದ ಪ್ರೀತಿಯ ಕಥೆ - ಒಂದು ಪ್ರೀತಿಯ ಕಥೆ
ನಾಟಕ : ಒಂದು ಪ್ರೀತಿಯ ಕಥೆ..!
ಮರಾಠಿ ಮೂಲ : ವಿಜಯ್ ತೆಂಡೂಲ್ಕರ್ ರ 'ಮಿತ್ರಾಚಿ ಗೋಶ್ಟ್'
ನಿರ್ದೇಶನ : ವೆಂಕಟೇಶ್ ಪ್ರಸಾದ್
ಸಹ ನಿರ್ದೇಶನ : ಉಜ್ವಲ ರಾವ್
ಜನವರಿ 25 ಮತ್ತು 26 | ರಂಗ ಶಂಕರ | ಸಂಜೆ 7:30 | 150/-
ಟಿಕೆಟ್‍ಗಳು ರಂಗ ಶಂಕರದಲ್ಲಿ ದೊರೆಯುತ್ತವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications