ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ಪ್ರಕರಣ ಪತ್ತೆ

|
Google Oneindia Kannada News

ಬೆಂಗಳೂರು, ಜೂನ್ 23: ರಾಜ್ಯದಲ್ಲಿ ಡೆಲ್ಟಾ ಪ್ಲಸ್ ಕೊರೊನಾ ರೂಪಾಂತರದ ಎರಡು ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಬುಧವಾರ ತಿಳಿಸಿದ್ದಾರೆ.

ಮೈಸೂರಿನಲ್ಲಿ ಡೆಲ್ಟಾ ಪ್ಲಸ್ ರೂಪಾಂತರದ ಮೊದಲ ಪ್ರಕರಣ ಪತ್ತೆಯಾಗಿರುವುದಾಗಿ ಸುಧಾಕರ್ ತಿಳಿಸಿದ್ದರು. "ಡೆಲ್ಟಾ ಪ್ಲಸ್ ವೈರಸ್ ಮೊದಲ ಪ್ರಕರಣ ಮೈಸೂರಿನಲ್ಲಿ ಪತ್ತೆಯಾಗಿದೆ. ಸೋಂಕಿತ ವ್ಯಕ್ತಿಯ ಸಂಪರ್ಕಿತರಿಗೆ ಹರಡಿಲ್ಲ. ಇದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ" ಎಂದು ಹೇಳಿದ್ದರು. ಇದೀಗ ಮತ್ತೊಂದು ಪ್ರಕರಣ ಬೆಂಗಳೂರು ನಗರದಲ್ಲಿ ದಾಖಲಾಗಿದೆ ಎಂದಿದ್ದಾರೆ.

ಡೆಲ್ಟಾ ಪ್ಲಸ್; ಕರ್ನಾಟಕಕ್ಕೆ ನೆರೆ ರಾಜ್ಯಗಳಿಂದಲೇ ಅಪಾಯಡೆಲ್ಟಾ ಪ್ಲಸ್; ಕರ್ನಾಟಕಕ್ಕೆ ನೆರೆ ರಾಜ್ಯಗಳಿಂದಲೇ ಅಪಾಯ

"ಮಂಗಳವಾರ ಮೈಸೂರಿನಲ್ಲಿ ಒಂದು ಪ್ರಕರಣ ಪತ್ತೆಯಾಗಿತ್ತು. ಬುಧವಾರ ಬೆಂಗಳೂರಿನಲ್ಲಿ ಮತ್ತೊಂದು ಪ್ರಕರಣ ಕಂಡುಬಂದಿದೆ. ಬೆಂಗಳೂರಿನಲ್ಲಿ ರೋಗಿಯನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡಲಾಗುತ್ತಿದೆ" ಎಂದು ಮಾಹಿತಿ ನೀಡಿದ್ದಾರೆ.

One Delta Plus Variant Found In Bengaluru After Mysuru Informs Minister K Sudhakar

ಅಲ್ಲದೇ ತಮಿಳುನಾಡಿನಿಂದ ಇಲ್ಲಿನ ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರಕ್ಕೆ ಕಳುಹಿಸಿದ ಒಂದು ಮಾದರಿಯಲ್ಲಿಯೂ ಡೆಲ್ಟಾ ಪ್ಲಸ್ ರೂಪಾಂತರ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

"ರಾಜ್ಯ ಸರ್ಕಾರ ಈ ಹೊಸ ರೂಪಾಂತರ ಪ್ರಕರಣಗಳ ಬಗ್ಗೆ ನಿಗಾ ವಹಿಸಿದ್ದು, ಆರು ಜೆನೋಮ್ ಪರೀಕ್ಷಾ ಲ್ಯಾಬ್‌ಗಳನ್ನು ತೆರೆಯಲು ನಿರ್ಧರಿಸಲಾಗಿದೆ" ಎಂದಿದ್ದಾರೆ.

Recommended Video

ಎಚ್ಚರಿಕೆ! ಭಾರತದಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ವೈರಸ್:ರಾಜ್ಯದಲ್ಲಿ 2 ಕೇಸ್ ಪತ್ತೆ | Oneindia Kannada

ಈಚೆಗಷ್ಟೇ ರಾಜ್ಯದಲ್ಲಿ ಅನ್‌ಲಾಕ್ ಆಗಿದ್ದು, ಈ ರೂಪಾಂತರ ಪ್ರಕರಣ ಏರಿರುವುದು ಒಂದೆಡೆ ಆತಂಕ ತಂದಿದೆ. ಆದರೆ ಆತಂಕದ ಹೊರತಾಗಿ ಈ ರೂಪಾಂತರ ಸೋಂಕಿನ ಕುರಿತು ವಿಶ್ಲೇಷಣೆ, ಅಧ್ಯಯನ ನಡೆಸಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುವುದು ಅವಶ್ಯಕವಾಗಿದೆ.

English summary
Two cases of Delta Plus variant of Covid-19 have been detected in karnataka, informs health minister K Sudhakar on wednesday
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X