ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿನ್ನೆ PUC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್

|
Google Oneindia Kannada News

ಬೆಂಗಳೂರು, ಜೂನ್ 19: ನಿನ್ನೆ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಇಂದು ಕೊರೊನಾ ವೈರಸ್ ತಗುಲಿರುವುದು ದೃಢವಾಗಿದೆ.

Recommended Video

ಭಾರತೀಯ ಯೋಧರ ಸಾವಿಗೆ ಕಂಬನಿ ಮಿಡಿದ ಅಮೆರಿಕ | Donald Trump | Narendra Modi | Oneindia Kannada

ಬೆಂಗಳೂರಿನ ಜಯನಗರದ ನಾಲ್ಕನೇ ಬ್ಲಾಕ್ ನ ಪರೀಕ್ಷಾ ಕೇಂದ್ರಕ್ಕೆ ಬಂದು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್ ಆಗಿರುವುದು ಇಂದಿನ ವರದಿಯಲ್ಲಿ ಕಂಡು ಬಂದಿದೆ.

ರಾಜ್ಯದ 27 ಸಾವಿರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರುರಾಜ್ಯದ 27 ಸಾವಿರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು

ಈ ವಿದ್ಯಾರ್ಥಿನಿ ಅದಾಗಲೇ ಹೋಮ್ ಕ್ವಾರಂಟೈನ್‌ನಲ್ಲಿದ್ದರು. ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾರಣ ಕೈಗೆ ಸೀಲ್ ಹಾಕಿ ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಆದರೆ, ತನ್ನ ಕೈಗೆ ಹಾಕಿದ್ದ ಸೀಲ್ ಅಳಿಸಿಕೊಂಡು ಅಧಿಕಾರಿಗಳ ಕಣ್ತಪ್ಪಿಸಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ಪರೀಕ್ಷೆ ಬರೆದು ಹೋಗಿದ್ದಾರೆ.

One More 2nd PUC Student Tests Positive For COVID-19 In Bengaluru

ಆಕೆಯ ಮಾದರಿ ಸಹ ಈ ಮೊದಲೇ ಸಂಗ್ರಹವಾಗಿತ್ತು. ಇಂದು ಆಕೆಯ ವರದಿ ಬಂದಿದ್ದು, ಸೋಂಕು ತಗುಲಿರುವುದು ದೃಢವಾಗಿದೆ. ಇದೀಗ, ನಿನ್ನೆ ಪರೀಕ್ಷೆ ಬರೆದ ಉಳಿದ ವಿದ್ಯಾರ್ಥಿಗಳ ಬಗ್ಗೆ ಆತಂಕ ಹೆಚ್ಚಾಗಿದೆ.

ಈ ವಿದ್ಯಾರ್ಥಿನಿ ಪರೀಕ್ಷೆ ಬರೆದ ಕೋಣೆಯಲ್ಲಿ ಸುಮಾರು 14 ಜನ ಬೇರೆ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈಗ ಪ್ರತಿಯೊಬ್ಬರನ್ನೂ ಪತ್ತೆ ಮಾಡುವ ಕೆಲಸದಲ್ಲಿ ಅಧಿಕಾರಿಗಳು ಮಗ್ನರಾಗಿದ್ದಾರೆ.

English summary
2nd PUC Student tests Positive For COVID-19 In Bengaluru. she wrote Second pu exam at jayanagar college yesterday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X