ರಾಜ್ಯದಲ್ಲಿಂದು ಪತ್ತೆಯಾಗಿದ್ದು ಒಂದೇ ಒಂದು ಕೊವಿಡ್ ಕೇಸ್

ಬೆಂಗಳೂರು, ಏಪ್ರಿಲ್ 26: ಕರ್ನಾಟಕದಲ್ಲಿ ಇಂದು ಕೇವಲ ಒಂದು ಕೊರೊನಾ ವೈರಸ್‌ ಪ್ರಕರಣ ದೃಢಪಟ್ಟಿದೆ. ನಿನ್ನೆ ಸಂಜೆಯಿಂದ ಇಂದು ಮಧ್ಯಾಹ್ನದವರೆಗೂ ರಾಜ್ಯದಲ್ಲಿ ಒಬ್ಬರಿಗೆ ಮಾತ್ರ ಸೋಂಕು ದೃಢಪಟ್ಟಿದೆ.

ಈ ಮೂಲಕ ರಾಜ್ಯದಲ್ಲಿ ಒಟ್ಟು ಕೊರೊನಾ ಪೀಡಿತರ ಸಂಖ್ಯೆ 501ಕ್ಕೆ ಏರಿಕೆ ಕಂಡಿದೆ. ಈ ಕುರಿತು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

501ನೇ ಸೋಂಕಿತ ವ್ಯಕ್ತಿ 47 ವರ್ಷ ಮಹಿಳೆಯಾಗಿದ್ದು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಇವರು 432ನೇ ಸೋಂಕಿತನ ಸಂಪರ್ಕದಲ್ಲಿದ್ದರು. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.

One New Covid19 Case Reported In Karnataka Today

ಇಲ್ಲಿಯವರೆಗೂ ರಾಜ್ಯದಲ್ಲಿ ಒಟ್ಟು 18 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 177 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಅಂದ್ಹಾಗೆ, ಈ ವರದಿ ನಿನ್ನೆ ಸಂಜೆ 5 ಗಂಟೆಯಿಂದ ಇಂದು ಮಧ್ಯಾಹ್ನ 12 ಗಂಟೆವರೆಗಿನ ಮಾಹಿತಿ ಒಳಗೊಂಡಿದೆ. ಸಂಜೆ ಮತ್ತೊಮ್ಮೆ ಮಾಧ್ಯಮ ಪ್ರಕಟಣೆ ಬಿಡುಗಡೆಯಾಗಲಿದ್ದು, ಆಗ ಮತ್ತಷ್ಟು ಹೊಸ ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+