ಒಬ್ಬ ಪ್ರಯಾಣಿಕ, ಒಂದು ಸ್ಮಾರ್ಟ್ ಕಾರ್ಡ್- ಶೀಘ್ರವೇ ಈ ಸೌಲಭ್ಯ ಜಾರಿ, ಏನಿದು?
ಬೆಂಗಳೂರು, ಡಿಸೆಂಬರ್, 01: ವಿವಿಧ ಕ್ಷೇತ್ರಗಳಲ್ಲಿ ಸ್ಮಾರ್ಟ್ ಕಾರ್ಡ್‌ಗಳನ್ನು ಜಾರಿಗೆ ತಂದಿರುವುದನ್ನು ನಾವು ಕೇಳಿದ್ದೇವೆ. ಹಾಗೆಯೇ ಇದೀಗ ಮೆಟ್ರೋ ರೈಲು, ಕ್ಯಾಬ್, ಬಸ್ ಸೇರಿದಂತೆ ವಿವಿಧ ಮಾದರಿಯ ಸಂಚಾರ ವ್ಯವಸ್ಥೆಗಳಿಗೆ ದೇಶಾದ್ಯಂತ ಒಬ್ಬ ಪ್ರಯಾಣಿಕರಿಗೆ ಒಂದು ಸ್ಮಾರ್ಟ್ ಕಾರ್ಡ್ ನೀಡುವ ಸೌಲಭ್ಯ ಕೇಂದ್ರದಿಂದ ಶೀಘ್ರವೇ ಜಾರಿಯಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ(BMRCL)ದ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ತಿಳಿಸಿದರು.
ಬೆಂಗಳೂರು ಟೆಕ್ ಶೃಂಗಸಭೆಯ ಎರಡನೇ ದಿನವಾದ ಗುರುವಾರ 'ಭವಿಷ್ಯದ ಸಂಚಾರಕ್ಕಾಗಿ ಸಮನ್ವಯ, ಸ್ವಾಯತ್ತ, ಹಂಚಿಕೆಯ ಮತ್ತು ಎಲೆಕ್ಟ್ರಿಕ್ ವ್ಯವಸ್ಥೆ' ಕುರಿತ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, ಮುಂದಿನ 6 ತಿಂಗಳಲ್ಲಿ ವಿವಿಧ ಮಹಾನಗರಗಳಲ್ಲಿ ಇದು ಜಾರಿಗೊಳ್ಳುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದರು.

ಶೀಘ್ರವೇ ಅನ್ನಭಾಗ್ಯದ ಸ್ಮಾರ್ಟ್ ಕಾರ್ಡ್
ಅನ್ನಭಾಗ್ಯ ಯೋಜನೆ ಜಾರಿಯಾಗಿನಿಂದ ರೇಷನ್ ಕಾರ್ಡ್‌ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಲವಾರು ಬದಲಾವಣೆಗಳನ್ನು ತರುತ್ತಲೇ ಇದೆ. ಇದೀಗ ಪಡಿತರದಾರರಿಗೆ ಚೀಟಿ ಜೊತೆಗೆ ಶೀಘ್ರವೇ ಅನ್ನಭಾಗ್ಯದ ಸ್ಮಾರ್ಟ್ ಕಾರ್ಡ್ ಕೊಡಲಾಗುವುದು. ಬಿಪಿಎಲ್ ಹಾಗೂ ಎಪಿಎಲ್ ಚೀಟಿದಾರರಿಗೆ ಇದನ್ನು ವಿತರಣೆ ಮಾಡಲಾಗುವುದು ಎಂದು ಕೋಲಾರದಲ್ಲಿ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಇತ್ತೀಚೆಗಷ್ಟೇ ಮಾಹಿತಿ ನೀಡಿದ್ದರು.
ಈ ಸ್ಮಾರ್ಟ್ ಕಾರ್ಡ್ ಬಹು ಉಪಯೋಗಿ ಕಾರ್ಡ್ ಆಗಲಿದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಇನ್ನು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯಡಿ 1.13 ಕೋಟಿ ಕಾರ್ಡ್‌ದಾರರಿಗೆ ಅಂದರೆ ಸುಮಾರು ₹4 ಕೋಟಿ ಜನರಿಗೆ ಹಣ ಸಂದಾಯ ಮಾಡಿದ್ದೇವೆ. 2.66 ಲಕ್ಷ ಕಾರ್ಡ್‌ದಾರರು ಪೋಸ್ಟಲ್ ಇಲಾಖೆಯಲ್ಲಿ ಖಾತೆ ತೆರೆದಿದ್ದು, ಅವರಿಗೂ ಹಣ ಸಂದಾಯ ಆಗುತ್ತಿದೆ ಎಂದರು.
ಶೇಕಡಾ 90ರಷ್ಟು ಅಧಿಕ ಕಾರ್ಡ್‌ದಾರರಿಗೆ ಈಗಾಗಲೇ ಹಣ ತಲುಪಿದೆ. ಇನ್ನೂ 7 ಲಕ್ಷ ಕಾರ್ಡ್‌ದಾರರು ಬ್ಯಾಂಕ್ ಖಾತೆ ತೆರೆಯದಿರುವುದು ಸೇರಿದಂತೆ ವಿವಿಧ ಸಮಸ್ಯೆಯಿದೆ. ಅಂತಹವರಿಗೆ ಹಣ ಸಂದಾಯ ಆಗಿಲ್ಲ. ಅವರಿಗೂ ಹಣ ಸಂದಾಯ ಮಾಡಲು ಇಲಾಖೆ ಅಧಿಕಾರಿಗಳೇ ಖುದ್ದಾಗಿ ಕಾರ್ಡ್‌ಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಈ ಮೂಲಕ ಶೇಕಡಾ 100 ಸಾಧನೆ ಮಾಡಲಿದ್ದೇವೆ ಎಂದು ಭರವಸೆ ನೀಡಿದರು.












Click it and Unblock the Notifications