ಬೆಂಗಳೂರು; ಒಂದು ಫೋನ್ ಕರೆ, ಮನೆಯಲ್ಲೇ ಕೋವಿಡ್ ಪರೀಕ್ಷೆ

ಬೆಂಗಳೂರು, ಸೆಪ್ಟೆಂಬರ್ 06: ಬೆಂಗಳೂರು ನಗರದಲ್ಲಿ ಮನೆಯಿಂದಲೇ ನೀವು ಕೋವಿಡ್ ಪರೀಕ್ಷೆಗೆ ಗಂಟಲು ದ್ರವದ ಮಾದರಿಯನ್ನು ನೀಡಬಹುದಾಗಿದೆ. ಇದಕ್ಕಾಗಿ ನೀವು ಒಂದು ಫೋನ್ ಕರೆ ಮಾಡಿದರೆ ಸಾಕು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಬೊಮ್ಮನಹಳ್ಳಿ ವಲಯದಲ್ಲಿ 16 ವಾರ್ಡ್‌ಗಳಲ್ಲಿ ಜನರಿಗೆ ಈ ಸೌಲಭ್ಯವನ್ನು ಒದಗಿಸಲಾಗಿದೆ. ಕೋವಿಡ್ ಸೋಂಕಿನ ಲಕ್ಷಣ ಇರುವವರು, ಸೋಂಕಿತರ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಬಹುದು.

ಒಟ್ಟು 16 ವಾರ್ಡ್‌ಗಳ ವ್ಯಾಪ್ತಿಯಲ್ಲಿ 2 ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ದಿನದ 24 ಗಂಟೆಯೂ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದಾರೆ. ಅಜೀಂ ಪ್ರೇಂಜಿ ಫೌಂಡೇಷನ್ ಕೋವಿಡ್ ಪರೀಕ್ಷೆಗೆ ಅಗತ್ಯವಿರುವ ಉಪಕರಣವನ್ನು ಕೊಡುಗೆಯಾಗಿ ನೀಡಿದೆ.

One Phone Call Swab Collection From Home For COVID Test

ಆರೋಗ್ಯ ಇಲಾಖೆ ಸಿಬ್ಬಂದಿಗಳು 9 ರಿಂದ 3, 3 ರಿಂದ 9 ಮತ್ತು ರಾತ್ರಿ 9 ರಿಂದ ಬೆಳಗ್ಗೆ 9 ಹೀಗೆ ಮೂರು ಶಿಫ್ಟ್‌ಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ತುರ್ತು ಅಗತ್ಯವಿದ್ದರೆ ಕೇವಲ 5 ಗಂಟೆಗಳಲ್ಲಿ ಕೋವಿಡ್ ಪರೀಕ್ಷೆ ವರದಿಯನ್ನು ನೀಡಲಾಗುತ್ತದೆ.

ಕೋವಿಡ್ ಪರೀಕ್ಷೆ ಅಗತ್ಯ ಇರುವವರು 8884666670 ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಸಿಬ್ಬಂದಿಗಳು ಮನೆಗೆ ಆಗಮಿಸಿ ಗಂಟಲು ದ್ರವದ ಮಾದರಿಯನ್ನು ಸಂಗ್ರಹ ಮಾಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+