• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರು ಲಾಕ್ ಡೌನ್; ಯಡಿಯೂರಪ್ಪ ಮಹತ್ವದ ಟ್ವೀಟ್

|

ಬೆಂಗಳೂರು, ಜುಲೈ 13 : ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಮಾಡುವುದಾಗಿ ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ. ಮಂಗಳವಾರದಿಂದ ಲಾಕ್ ಡೌನ್ ಜಾರಿಗೆ ಬರಲಿದೆ. ಜನರು ಆತಂಕಗೊಂಡು ನಗರ ಬಿಟ್ಟು ಊರಿನತ್ತ ತೆರಳುತ್ತಿದ್ದಾರೆ.

   Rameshwaram - A Spiritual Journey To The Divine Site Of Tamil Nadu | Oneindia Kannada

   ಉಡ್ತಾ 'ಪಂಜಾಬ್‌'ನಿಂದ ಉಡ್ತಾ 'ಬೆಂಗಳೂರ್' ತನಕ!

   ಕರ್ನಾಟಕ ಸರ್ಕಾರ ಶನಿವಾರ ಬೆಂಗಳೂರು ನಗರದಲ್ಲಿ ಜುಲೈ 14ರ ಮಂಗಳವಾರ ರಾತ್ರಿ 8 ಗಂಟೆಯಿಂದ ಜುಲೈ 23ರ ತನಕ ಒಂದು ವಾರದ ಲಾಕ್ ಡೌನ್ ಮಾಡುವುದಾಗಿ ಘೋಷಣೆ ಮಾಡಿದೆ. ಸೋಮವಾರ ಯಡಿಯೂರಪ್ಪ ಟ್ವೀಟ್ ಮೂಲಕ ಮತ್ತೊಂದು ಸ್ಪಷ್ಟನೆಯನ್ನು ನೀಡಿದ್ದಾರೆ.

   ಚಿತ್ರಗಳು; ಬೆಂಗಳೂರಲ್ಲಿ ಲಾಕ್ ಡೌನ್, ನಗರ ಬಿಟ್ಟು ಹೊರಟ ಜನ

   ಬೆಂಗಳೂರು ನಗರದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದೆ. ಭಾನುವಾರ ನಗರದಲ್ಲಿ 1525 ಹೊಸ ಪ್ರಕರಣ ದಾಖಲಾಗಿದ್ದು, ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 18,387ಕ್ಕೆ ಏರಿಕೆಯಾಗಿದೆ. ಈ ಹಿನ್ನಲೆಯಲ್ಲಿ ಒಂದು ವಾರದ ಲಾಕ್ ಡೌನ್ ಜಾರಿಗೊಳಿಸಲಾಗುತ್ತಿದೆ.

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಜನರು ಬೆಂಗಳೂರು ಬಿಟ್ಟು ಹೊರಟಿದ್ದೇಕೆ; ಸೀಕ್ರೆಟ್ ಬಿಚ್ಚಿಟ್ಟ ಡಿಕೆಶಿ!

   ಸೋಮವಾರ ಯಡಿಯೂರಪ್ಪ ಅವರು ಕೋವಿಡ್ ಟಾಸ್ಕ್ ಫೋರ್ಸ್ ಸಭೆ ನಡೆಸಿದರು. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ವಿಧಿಸಲಾಗಿರುವ 1 ವಾರದ ಲಾಕ್ ಡೌನ್ ಅನ್ನು ವಿಸ್ತರಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಜನರು ಆತಂಕಪಡದೆ, ವದಂತಿಗಳಿಗೆ ಕಿವಿಗೊಡದೆ, ಸರ್ಕಾರದೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

   ಮೋದಿ ಕನಸಿಗೆ ಕೊಳ್ಳಿ ಇಟ್ಟ ಕೆಎಸ್ಎಸ್ಐಡಿಸಿ, ಏನಿದು ಭಾರಿ ಆರೋಪ?

   ಬೆಂಗಳೂರು ನಗರದಲ್ಲಿನ ಲಾಕ್ ಡೌನ್ ಒಂದು ವಾರದ ಬಳಿಕ ಮುಂದುವರೆಯಲಿದೆ ಎಂಬ ಆತಂಕದಲ್ಲಿ ಜನರು ಊರುಗಳತ್ತ ಹೊರಟಿದ್ದಾರೆ. ಆದ್ದರಿಂದ, ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆಯನ್ನು ಕೊಟ್ಟಿದ್ದಾರೆ.

   English summary
   In a tweet Karnataka chief minister B. S. Yediyurappa said that lock down in Bengaluru city wil not be extended beyond a week.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X