ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಲಾಕ್ ಡೌನ್ ಆರಂಭ; ರಸ್ತೆ, ಫ್ಲೈ ಓವರ್ ಬಂದ್

|
Google Oneindia Kannada News

ಬೆಂಗಳೂರು, ಜುಲೈ 14 : ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಘೋಷಣೆ ಮಾಡಿರುವ ಲಾಕ್ ಡೌನ್ ಆರಂಭವಾಗಿದೆ. ಒಂದು ವಾರಗಳ ಕಾಲ ಎರಡೂ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿರಲಿದ್ದು, ಈಗಾಗಲೇ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ.

Recommended Video

PU Results : Udupi ವಿದ್ಯಾರ್ಥಿಗಳಿಗೆ ಅಭಿನಂದನೆಗಳು | Oneindia Kannada

ಮಂಗಳವಾರ ರಾತ್ರಿ 8ಗಂಟೆಯಿಂದ ಲಾಕ್ ಡೌನ್ ಆರಂಭವಾಗಿದೆ. ಕರ್ನಾಟಕ ಸರ್ಕಾರದ ಆದೇಶದಂತೆ ಜುಲೈ 22ರ ಸಂಜೆ 5 ಗಂಟೆ ತನಕ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿರಲಿದೆ.

ಬೆಂಗಳೂರು ಲಾಕ್ ಡೌನ್; ಮಾರ್ಗಸೂಚಿ ಪ್ರಕಟ ಬೆಂಗಳೂರು ಲಾಕ್ ಡೌನ್; ಮಾರ್ಗಸೂಚಿ ಪ್ರಕಟ

ಬೆಂಗಳೂರು ನಗರದಲ್ಲಿ ಮಂಗಳವಾರ 1,267 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 20,969. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು 14 ಪ್ರಕರಣ ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 399ಕ್ಕೆ ಏರಿಕೆಯಾಗಿದೆ.

ಬೆಂಗಳೂರು ಲಾಕ್ ಡೌನ್; ಕಾರ್ಖಾನೆಗಳಿಗೆ ಮಾರ್ಗಸೂಚಿ ಬೆಂಗಳೂರು ಲಾಕ್ ಡೌನ್; ಕಾರ್ಖಾನೆಗಳಿಗೆ ಮಾರ್ಗಸೂಚಿ

ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಯಲ್ಲಿದ್ದರೂ ಅಗತ್ಯ ವಸ್ತುಗಳ ಖರೀದಿಗೆ ವಿನಾಯಿತಿ ನೀಡಲಾಗಿದೆ. ಹೋಟೆಲ್‌ಗಳಲ್ಲಿ ಪಾರ್ಸೆಲ್ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ನಗರದ ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಪೊಲೀಸರು ಬಂದ್ ಮಾಡಿದ್ದಾರೆ. ಫ್ಲೈ ಓವರ್‌ಗಳನ್ನು ಬಂದ್ ಮಾಡಲಾಗಿದೆ.

ಬೆಂಗಳೂರು ಲಾಕ್ ಡೌನ್; ಯಡಿಯೂರಪ್ಪ ಮಹತ್ವದ ಟ್ವೀಟ್ ಬೆಂಗಳೂರು ಲಾಕ್ ಡೌನ್; ಯಡಿಯೂರಪ್ಪ ಮಹತ್ವದ ಟ್ವೀಟ್

ಬೆಂಗಳೂರು ನಗರದಲ್ಲಿ 144 ಸೆಕ್ಷನ್ ಜಾರಿ

ಬೆಂಗಳೂರು ನಗರದಲ್ಲಿ 144 ಸೆಕ್ಷನ್ ಜಾರಿ

"ಬೆಂಗಳೂರು ನಗರದಲ್ಲಿ ಮಂಗಳವಾರ ರಾತ್ರಿ 8ಗಂಟೆಗೆ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೆ ಬಂದಿದೆ. ಅನವಶ್ಯಕವಾಗಿ ಜನರು ಮನೆಯಿಂದ ಹೊರಗೆ ಬರುವಂತಿಲ್ಲ" ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರರಾವ್ ಹೇಳಿದ್ದಾರೆ.

ಖರೀದಿಗೆ ಅವಕಾಶ

ಖರೀದಿಗೆ ಅವಕಾಶ

ಬೆಂಗಳೂರು ನಗರದ ರಸ್ತೆ, ಫ್ಲೈ ಓವರ್‌ಗಳನ್ನು ಬ್ಯಾರಿಕೇಡ್ ಹಾಕಿ ಮುಚ್ಚಲಾಗಿದೆ. ಪ್ರತಿದಿನ ಬೆಳಗ್ಗೆ 5ಗಂಟೆಯಿಂದ ಮಧ್ಯಾಹ್ನ 12 ಗಂಟೆಯ ತನಕ ದಿನಸಿ, ತರಕಾರಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಅಗತ್ಯ ವಸ್ತುಗಳು ಸಿಗಲಿದ್ದು, ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಸರ್ಕಾರ ಭರವಸೆ ಹೇಳಿದೆ.

ವಿಮಾನ, ರೈಲು ಪ್ರಯಾಣಿಕರು

ವಿಮಾನ, ರೈಲು ಪ್ರಯಾಣಿಕರು

ಯಾರೂ ಬೆಂಗಳೂರಿನಿಂದ ಹೊರಗೆ ಹೋಗುವಂತಿಲ್ಲ. ಬೆಂಗಳೂರಿಗೆ ಹೊರ ರಾಜ್ಯದಿಂದ ಬರಲು ಸೇವಾ ಸಿಂಧು ಮೂಲಕ ನೋಂದಣಿ ಮಾಡಿಸಬೇಕು. ವಿಮಾನ ಮತ್ತು ರೈಲು ಪ್ರಯಾಣಿಕರು ಟಿಕೆಟ್‌ಗಳನ್ನು ಚೆಕ್‌ ಪೋಸ್ಟ್‌ಗಳಲ್ಲಿ ತೋರಿಸಿ ಸಂಚಾರ ನಡೆಸಬಹುದು.

ಅನಗತ್ಯವಾಗಿ ಸಂಚಾರ ನಡೆಸಬೇಡಿ

ಅನಗತ್ಯವಾಗಿ ಸಂಚಾರ ನಡೆಸಬೇಡಿ

ಲಾಕ್ ಡೌನ್ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ ಅನಗತ್ಯವಾಗಿ ಸಂಚಾರ ನಡೆಸಬೇಡಿ ಎಂದು ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ. ಅನಗತ್ಯ ಸಂಚಾರ ನಡೆಸಿದರೆ ಲಾಠಿ ಬೀಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

English summary
Karnataka government announced one week long lock down in Bengaluru Urban & Rural district. Lockdown began from 8 pm of July 14, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X