ವಾಹನಗಳಿಗೆ ಪ್ಯಾನಿಕ್ ಬಟನ್ ಅಳವಡಿಕೆಗೆ ಗಡುವು: ವಿಎಲ್​ಟಿ ದರವೆಷ್ಟು? ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?

ಬೆಂಗಳೂರು, ನವೆಂಬರ್‌ 28: ಸರ್ಕಾರ ಹಾಗೂ ಪೊಲೀಸ್ ಇಲಾಖೆ ಯಾವುದೇ ರೀತಿ ಕ್ರಮ ಕೈಗೊಂಡರೂ ಸಹ ಸಾರ್ವಜನಿಕ ಸೇವಾ ವಾಹನಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದಂತಹ ಘಟನೆಗಳು ನಡೆಯುತ್ತಲೇ ಇರುತ್ತದೆ. ಹೀಗಾಗಿ ಸರ್ಕಾರ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ.

ಟ್ಯಾಕ್ಸಿ, ಕ್ಯಾಬ್‌ ಸೇರಿದಂತೆ ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್ ಲೋಕೇಷನ್ ಟ್ರ್ಯಾಕಿಂಗ್‌ ಡಿವೈಸ್ (ವಿಎಲ್​ಟಿ) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಸುವುದು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಮಹಿಳೆಯರು, ಮಕ್ಕಳು ಹಾಗೂ ಪ್ರಯಾಣಿಕರ ಸುರಕ್ಷತೆಗಾಗಿ ಸಾರ್ವಜನಿಕ ಸೇವಾ ವಾಹನಗಳಿಗೆ ವಿಎಲ್​ಟಿ ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಕಡ್ಡಾಯವಾಗಿದೆ.

One Year Deadline For Installation Of Emergency Panic Button In Vehicles In Karnataka

ಸಾರ್ವಜನಿಕ ಸೇವೆ ಇರುವ ಖಾಸಗಿ ವಾಹನಗಳಿಗೆ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಸುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಡಿವೈಸ್ ಅಳವಡಿಕೆಗೆ ಕೊನೆ ದಿನಾಮಕ ಕೂಡ ನಿಗದಿ ಮಾಡಿದೆ. ಡಿಸೆಂಬರ್‌ 1ರಿಂದ ಈ ಆದೇಶ ಜಾರಿಗೆ ಬರಲಿದ್ದು, 2024ರ ನವೆಂಬರ್‌ 30ರವರೆಗೆ ಅಂದರೆ ಒಂದು ವರ್ಷಗಳ ಅವಧಿಯ ಅವಕಾಶವನ್ನು ಸರ್ಕಾರ ನೀಡಿದೆ. ಈ ಕೆಲಸ ಶೀಘ್ರವಾಗಿ ಆಗಬೇಕಿರುವುದರಿಂದ ಆರ್​ಟಿಒಗಳಲ್ಲಿ ಈ ಯೋಜನೆಗೆ ಒಳಪಡುವ ವಾಹನಗಳಿಗೆ ಮಾತ್ರ ಎಫ್.ಸಿ ನವೀಕರಣಕ್ಕೆ ಸೂಚನೆ ನೀಡಲಾಗಿದೆ.

ಯಾವ್ಯಾವ ರೀತಿಯ ವಾಹನಗಳಿಗೆ ವಿಎಲ್​ಟಿ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ..? ದರವೆಷ್ಟು..?

ಎಲ್ಲ ರೀತಿಯ ಸಾರ್ವಜನಿಕ ಸೇವಾ ವಾಹನಗಳು ಅಂದರೆ ಯೆಲ್ಲೋ ಬೋರ್ಡ್​ನ ಟ್ಯಾಕ್ಸಿಗಳು, ಕ್ಯಾಬ್​ಗಳು, ಖಾಸಗಿ ಬಸ್​ಗಳು, ನ್ಯಾಷನಲ್ ಪರ್ವಿುಟ್ ಹೊಂದಿರುವ ಗೂಡ್ಸ್ ವಾಹನಗಳಿಗೆ ಈ ಆದೇಶ ಅನ್ವಯವಾಗಲಿದ್ದು, ಇನ್ನು ಒಂದು ವರ್ಷದ ಅವಧಿಯೊಳಗೆ ಈ ವಾಹನಗಳ ಮಾಲೀಕರು ಪ್ಯಾನಿಕ್ ಬಟನ್ ಹಾಗೂ ವಿಎಲ್​ಟಿ ಅಳವಡಿಸಬೇಕಿದೆ. ಇನ್ನು ವಾಹನಗಳಿಗೆ ವಿಎಲ್​ಟಿ ಸೇರಿದಂತೆ ಪ್ಯಾನಿಕ್ ಬಟನ್ ಅಳವಡಿಕೆಗೆ 7,599 ರೂಪಾಯಿ ಖರ್ಚಾಗಲಿದೆ. ಜಿಎಸ್‌ಟಿ ಹೊರತುಪಡಿಸಿ ಈ ಬೆಲೆಯನ್ನು ನಿಗದಿ ಮಾಡಲಾಗಿದೆ.

One Year Deadline For Installation Of Emergency Panic Button In Vehicles In Karnataka

ವಿಎಲ್​ಟಿ ಹಾಗೂ ಪ್ಯಾನಿಕ್ ಬಟನ್ ಕೆಲಸ ಹೇಗೆ..?

ವಿಎಲ್​ಟಿ ಹಾಗೂ ಪ್ಯಾನಿಕ್ ಬಟನ್ ಅಳವಡಿಕೆಯ ನಂತರ ಮಾನಿಟರಿಂಗ್ ನಕ್ಷೆಯಲ್ಲಿ ವಾಹನದ ಲೊಕೇಷನ್‌ ಟ್ರ್ಯಾಕಿಂಗ್‌ ಆರಂಭವಾಗುತ್ತದೆ. ಇದು ನಿರ್ಬಂಧಿತ ಪ್ರದೇಶ, ಸಂಚಾರ ನಿಯಮಗಳ ಉಲ್ಲಂಘನೆ ಹಾಗೂ ಅತಿ ವೇಗದ ಎಚ್ಚರಿಕೆ ಕೂಡ ಕೊಡಲಿದೆ. ಇಂತಹ ವಾಹನಗಳಲ್ಲಿ ಪ್ರಯಾಣಿಸುವಾಗ ಆರೋಗ್ಯದಲ್ಲಿ ಏರುಪೇರು, ಲೈಂಗಿಕ ದೌರ್ಜನ್ಯ ಸೇರಿದಂತೆ ಯಾವುದೇ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ಯಾನಿಕ್ ಬಟನ್ ಒತ್ತಿದರೆ ಕಮಾಂಡ್ ಸೆಂಟರ್​ಗೆ ಎಚ್ಚರಿಕೆ ಸಂದೇಶ ರವಾನೆಯಾಗುತ್ತದೆ. ಇದರಿಂದ ಕಮಾಂಡ್ ಸೆಂಟರ್ ವಾಹನದ ಲೊಕೇಷನ್‌ ಸಮೇತವಾಗಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಿದ್ದು ಇದರಿಂದ ಸಂಭವಿಸಬಹುದಾದ ಅನಾಹುತ ತಡೆಯಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+