ನಮ್ಮ ಬೆಂಗಳೂರು ಪ್ರಶಸ್ತಿ 2019ಕ್ಕೆ ಅರ್ಜಿ ಆಹ್ವಾನ
ಬೆಂಗಳೂರು, ಜನವರಿ 31 : ಪ್ರತಿಫಲಕ್ಕೆ ಆಸೆಪಡದೆ ಸರಿಯಾದ ಮಾರ್ಗದಲ್ಲಿ ಸಾಗುತ್ತ ತಮ್ಮ ಕರ್ತವ್ಯ ನಿಭಾಯಿಸುತ್ತಿರುವ ಎಲೆಮರೆಯ ಕಾಯಿಗಳಂಥ ವ್ಯಕ್ತಿಗಳನ್ನು ಗುರುತಿಸಿ ಅಂಥವರಿಗೆ ಪ್ರತಿಷ್ಠಿತ 'ನಮ್ಮ ಬೆಂಗಳೂರು ಪ್ರಶಸ್ತಿ' ನೀಡಲು ಅರ್ಹ ಬೆಂಗಳೂರಿಗರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಶುಕ್ರವಾರ ಫೆಬ್ರವರಿ 1ರಂದು ನಗರದ ಗೋಲ್ಡ್ ಫಿಂಚ್ ಹೋಟೆಲ್‌ನಲ್ಲಿ ನಮ್ಮ ಬೆಂಗಳೂರು ಅವಾರ್ಡ್ಸ್ ಟ್ರಸ್ಟ್ ಸುದ್ದಿಗೋಷ್ಠಿ ಕರೆದಿದ್ದು ನಮ್ಮ ಬೆಂಗಳೂರು ಪ್ರಶಸ್ತಿಯ 10ನೇ ಆವೃತ್ತಿಯ ಬಗ್ಗೆ ಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಿದೆ.
ಈ ಬಾರಿ ಆನ್‌ಲೈನ್ ಮೂಲಕ ಮಾತ್ರವೇ ಪ್ರಶಸ್ತಿಗೆ ನೊಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ನಮ್ಮ ಬೆಂಗಳೂರು ಅವಾರ್ಡ್ಸ್ ಟ್ರಸ್ಟ್ ಹೇಳಿದೆ. ಪ್ರತಿಫಲಾಪೇಕ್ಷೆಯಿಲ್ಲದೆ ಬೆಂಗಳೂರಿನ ಏಳ್ಗೆಗಾಗಿ ತುಡಿಯುವ ನಿಜವಾದ ಹೀರೋಗಳನ್ನು ಗುರುತಿಸಿ ಅವರಿಗೆ 'ಧನ್ಯವಾದ' ಅರ್ಪಿಸುವ ಪ್ರಯತ್ನ ಇದಾಗಿದೆ.

ವರ್ಷದ ವ್ಯಕ್ತಿ, ರೈಸಿಂಗ್ ಸ್ಟಾರ್ ಆಫ್ ಬೆಂಗಳೂರು, ಮಾಧ್ಯಮದ ಸಾಧಕ, ಸೋಷಿಯಲ್ ಎಂಟರ್ಪ್ರನರ್ ಆಫ್ ದಿ ಇಯರ್, ವರ್ಷದ ಸರ್ಕಾರಿ ನೌಕರ, 'ನಮ್ಮ ಬೆಂಗಳೂರಿಗ' ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತಿದ್ದು, ಈಗಾಗಲೇ ಆನ್‌ಲೈನ್ ನೋಂದಾವಣಿ ಆರಂಭವಾಗಿದೆ. ಫೆಬ್ರವರಿ 28ರ ವರೆಗೆ ನೋಂದಾವಣಿ ಮಾಡಿಕೊಳ್ಳಬಹುದಾಗಿದೆ.
ಕಳೆದ ಒಂಬತ್ತು ಆವೃತ್ತಿಗಳಲ್ಲಿ 'ನಮ್ಮ ಬೆಂಗಳೂರು ಪ್ರಶಸ್ತಿ'ಗೆ 2.58 ಲಕ್ಷ ಜನ ನೋಂದಾವಣಿ ಮಾಡಿಕೊಂಡಿದ್ದರು. 261 ಮಂದಿ ಅಂತಿಮ ಸುತ್ತಿಗೆ ಆಯ್ಕೆ ಆಗಿದ್ದರು. ಹಾಗೂ 87 ಪ್ರಶಸ್ತಿಗಳನ್ನು ಈವರೆಗೆ ನೀಡಲಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದು ಎಂದು 'ನಮ್ಮ ಬೆಂಗಳೂರು ಪ್ರಶಸ್ತಿ'ಯನ್ನು ಪರಿಗಣಿಸಲಾಗುತ್ತದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications