ಕರ್ನಾಟಕದಲ್ಲಿ ಆನ್‌ಲೈನ್ ಗೇಮಿಂಗ್ ನಿಷೇಧ: ಸರ್ಕಾರದ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ ಕಂಪನಿಗಳು

ಬೆಂಗಳೂರು, ಅಕ್ಟೋಬರ್ 22: ಕರ್ನಾಟದಲ್ಲಿ ಆನ್‌ಲೈನ್ ಗೇಮಿಂಗ್ ಬ್ಯಾನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹಲವು ಗೇಮಿಂಗ್ ಕಂಪನಿಗಳು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿವೆ.

ಕ್ರಿಮಿನಲ್‌ ಕೇಸ್ ಭೀತಿ ಎದುರಿಸುತ್ತಿದ್ದ ಆನ್‌ಲೈನ್ ಗೇಮಿಂಗ್ ಕಂಪನಿಗಳಿಂದ ರಿಟ್ ಅರ್ಜಿಗೆ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ಕೋರಿವೆ. ಈ ಬಗ್ಗೆ ಹೈಕೋರ್ಟ್‌ಗೆ ಎಜಿ ಪ್ರಭುಲಿಂಗ ನಾವಡಗಿ ಮನವಿ ಸಲ್ಲಿಸಿದ್ದು, ಮಧ್ಯಂತರ ಆದೇಶ ಸಂಬಂಧ ಅ.27ಕ್ಕೆ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮುಂದೂಡಿದೆ.

ರಾಜ್ಯದಲ್ಲಿ ಎಲ್ಲಾ ಬಗೆಯ ಆನ್‌ಲೈನ್ ಗೇಮಿಂಗ್ ಗ್ಯಾಂಬ್ಲಿಂಗ್ ನಿಷೇಧಿಸುವ ರಾಜ್ಯ ಸರ್ಕಾರ ಆದೇಶವನ್ನು ಇದೀಗ ಕಂಪೆನಿಗಳು ಹೈಕೋರ್ಟ್‌ನಲ್ಲಿ ಪ್ರಶ್ನಿಸಿವೆ. ಆಲ್‌ ಇಂಡಿಯಾ ಗೇಮಿಂಗ್ ಫೆಡರೇಷನ್, ಗ್ಯಾಲಕ್ಟಸ್ ಪೊನ್ ವೇರ್ ಟೆಕ್ನಾಲಜೀಸ್ ಸೇರಿದಂತೆ ಹಲವು ಕಂಪೆನಿಗಳು ಅರ್ಜಿ ಸಲ್ಲಿಸಿದ್ದು, ರಾಜ್ಯ ಸರ್ಕಾರದ ನಿರ್ಧಾರ ಸಂವಿಧಾನ ಬಾಹಿರ ಎಂದು ವಾದಿಸಿವೆ.

Online Gaming Prohibition In Karnataka: Companies Writ Petition Against Govt In High Court

ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಆದೇಶ ಹೊರಡಿಸಿದ್ದು, ಇದರಿಂದ ತುಂಬಾ ನಷ್ಟವಾಗಿದೆ. ಅನಗತ್ಯವಾಗಿ ಪೊಲೀಸ್ ಕೇಸ್ ಎದುರಿಸುವಂತಾಗಿದೆ.‌ ತನಿಖೆಯ ನೆಪದಲ್ಲಿ ಪೊಲೀಸರಿಂದ ತೊಂದರೆಯಾಗಬಾರದು.‌ ಹೀಗಾಗಿ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಬೇಕೆಂದೂ ಮನವಿ ಮಾಡಲಾಗಿದೆ.

ರಾಜ್ಯ ಸರ್ಕಾರಕ್ಕೆ ಆನ್‌ಲೈನ್ ಗೇಮಿಂಗ್ ಮತ್ತು ಆನ್‌ಲೈನ್ ಗ್ಯಾಂಬ್ಲಿಂಗ್ ಅನ್ನು ನಿಷೇಧಿಸುವ ಅಧಿಕಾರ ಇಲ್ಲ. ಹೀಗಾಗಿ ಸರ್ಕಾರದ ಆದೇಶ ರದ್ದುಪಡಿಸುವಂತೆ ಕಂಪನಿಗಳ ಪರ ಹಿರಿಯ ವಕೀಲ ಅರವಿಂದ್ ದಾತಾರ್, ಸಜನ್ ಪೂವಯ್ಯ, ಡಿಎಲ್‌ಎನ್ ರಾವ್ ಸೇರಿ ಹಲವರು ವಾದ ಮಂಡಿಸಿದ್ದಾರೆ.

ಇದಕ್ಕೆ ರಾಜ್ಯ ಸರ್ಕಾರದ ಪರ ಅಟಾರ್ನಿ ಜನರಲ್ ಪ್ರಭುಲಿಂಗ ನಾವಡಗಿ ಆಕ್ಷೇಪ ಎತ್ತಿದ್ದು, ರಿಟ್ ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ವಿವರವಾದ ವಿಚಾರಣೆ ಅಗತ್ಯವಿರುವುದರಿಂದ ಹೈಕೋರ್ಟ್ ವಿಚಾರಣೆಯನ್ನು ಅ.27ಕ್ಕೆ ಮುಂದೂಡಿದೆ.

ಕಂಪೆನಿಗಳು ರಾಜ್ಯ ಸರ್ಕಾರದ ಆನ್‌ಲೈನ್ ಗೇಮಿಂಗ್ ನಿರ್ಬಂಧ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆಯೂ ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಗಳ ಬಗ್ಗೆಯೂ ಹೈಕೋರ್ಟ್ ಅ.27 ರಂದು ತೀರ್ಮಾನಿಸಲಿದೆ.

ರಾಜ್ಯದಲ್ಲಿ ಆನ್‌ಲೈನ್ ಗೇಮಿಂಗ್ ನಿಷೇಧಿಸಿದ ಸರ್ಕಾರ
ಆನ್‌ಲೈನ್ ಜೂಜುಕೋರರಿಗೆ ಕರ್ನಾಟಕ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ರಾಜ್ಯದಲ್ಲಿ ಆನ್‌ಲೈನ್ ಗ್ಯಾಂಬ್ಲಿಂಗ್ ಅನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಈ ಕುರಿತು ಕಳೆದ ವಿಧಾನಸಭೆ ಅಧಿವೇಶನದಲ್ಲಿ ಕಾಯ್ದೆ ರೂಪಿಸಿದೆ.

ಡ್ರೀಮ್ ಇಲೆವೆನ್, ಪೇ ಟೀಂ ಫಸ್ಟ್, ಗೇಮ್​ಜಿ ಆ್ಯಪ್ ಸೇರಿದಂತೆ ಹಲವು ಫ್ಯಾಂಟಸಿ ಗೇಮ್ ಅ್ಯಪ್​ಗಳನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಆನ್‌ಲೈನ್ ಗೇಮ್‌, ಆನ್‌ಲೈನ್ ಜೂಜು, ಆನ್‌ಲೈನ್‌ ಬೆಟ್ಟಿಂಗ್‌ಗೆ ನಿಷೇಧ ಹೇರಿತ್ತು. ಇದೀಗ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತಂದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶುಕ್ರವಾರದಿಂದ ಆನ್‌ಲೈನ್ ಜೂಜು ನಿಷೇಧದ ಆದೇಶ ಅಧಿಕೃತವಾಗಿ ಹೊರಬಿದ್ದಿದೆ.

Recommended Video

      ಛೇ!!ಟೀಮ್ ಇಂಡಿಯಾ ಸೋತಿದ್ದಕ್ಕೆ ಪಾಕಿಸ್ತಾನ ಇಷ್ಟು ಕೆಳಮಟ್ಟಕ್ಕೆ ಇಳಿಬಾರ್ದಿತ್ತು | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+