ಬೆಂಗಳೂರಿನಲ್ಲಿ ಪೊಲೀಸರಿಗೆ ಮಾನಸಿಕ ಒತ್ತಡ ನಿರ್ವಹಣೆ ತರಬೇತಿ

ಬೆಂಗಳೂರು, ಏಪ್ರಿಲ್ 25: ಬೆಂಗಳೂರಿನಲ್ಲಿ ಪೊಲೀಸ್ ಸಿಬ್ಬಂದಿಗೆ ಮಾನಸಿಕ ಒತ್ತಡ ನಿರ್ವಹಿಸುವುದು ಹೇಗೆ ಎಂಬುದರ ಕುರಿತು ಆನ್‌ಲೈನ್ ತರಬೇಡತಿ ನೀಡಲಾಯಿತು.

ಕೊವಿಡ್ 19 ರೋಗ ಇಡೀ ದೇಶಕ್ಕೆ ಹರಡಿದಾಗಿನಿಂದಲೂ ಪೊಲೀಸರು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಜನ ಸಂದಣಿ ಕಡಿಮೆ ಮಾಡುವುದು, ಜನರ ಪುಂಡಾಟಗಳಿಗೆ ಬ್ರೇಕ್ ಹಾಕುವ ಚಿಂತೆಯಲ್ಲೇ ಇರುತ್ತಾರೆ. ಹಾಗಾಗಿ ಅವರ ಮಾನಸಿಕ ಒತ್ತಡವನ್ನು ಕಡಿಮೆ ಮಾಡುವ ತರಬೇತಿ ನಡೆಯಿತು.

ಕೊವಿಡ್-19 ಸಮರದಲ್ಲಿ ಮುಂಚೂಣಿಯಲ್ಲಿ ನಿಂತಿರುವ ಪೊಲೀಸ್ ಸಿಬ್ಬಂದಿಗಳು ಅತಿ ಹೆಚ್ಚಿನ ಒತ್ತಡ ಎದುರಿಸುತ್ತಿದ್ದಾರೆ. ಈ ಕೆಲಸಗಳಲ್ಲಿ ನಿರತರಾಗಿರುವವರಿಗೆ ಒತ್ತಡ ನಿರ್ವಹಣೆ ತರಬೇತಿ ನೀಡಲಾಗಿದೆ.

ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮಾನ್ಸ್) ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ಸ್ಟ್ರೆಸ್ ಥೆರೆಪಿಯನ್ನು ಆಯೋಜಿಸಿದ್ದರು.

Online Stress Management Session For Police In Bengaluru

ಈ ಸಂಕಷ್ಟದ ಸಮಯದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ಒತ್ತಡ, ಆತಂಕ ನಿರ್ವಹಣೆ ಮಾಡುವುದಕ್ಕೆ ಇದು ಸಹಕಾರಿಯಾಗಿದೆ ಎಂದು ಪೊಲೀಸ್ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಟ್ವೀಟ್ ಮಾಡಿದ್ದಾರೆ.

ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮಾನ್ಸ್) ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ಸ್ಟ್ರೆಸ್ ಥೆರೆಪಿಯನ್ನು ಆಯೋಜಿಸಿದ್ದರು, ಈ ಸಂಕಷ್ಟದ ಸಮಯದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ಒತ್ತಡ, ಆತಂಕ ನಿರ್ವಹಣೆ ಮಾಡುವುದಕ್ಕೆ ಇದು ಸಹಕಾರಿಯಾಗಿದೆ ಎಂದು ಪೊಲೀಸ್ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಟ್ವೀಟ್ ಮಾಡಿದ್ದಾರೆ.

ಏ.25 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಲಾಗಿದ್ದ ಈ ತರಬೇತಿಯಲ್ಲಿ ಬೆಂಗಳೂರು ನಗರ ಪೊಲೀಸರು ಭಾಗಿಯಾಗಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಟ್ವೀಟ್ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+