ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಂಜಿ ರಸ್ತೆಯಲ್ಲಿ ವೈಟ್‌ ಟಾಪಿಂಗ್: ಭಾರಿ ಟ್ರಾಫಿಕ್ ಜಾಮ್ ಆತಂಕ

|
Google Oneindia Kannada News

ಬೆಂಗಳೂರು, ಜುಲೈ 4: ಎಂಜಿ ರಸ್ತೆಯಲ್ಲಿ ವೈಟ್ ಟಾಪಿಂಗ್ ರಸ್ತೆ ನಿರ್ಮಾಣ ಮಾಡುವ ಕುರಿತು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಒಂದೊಮ್ಮೆ ಸರ್ಕಾರ ಇದಕ್ಕೆ ಸಮ್ಮತಿ ನೀಡಿದರೆ ಟ್ರಾಫಿಕ್ ದಟ್ಟಣೆ ವಿಪರೀತವಾಗುವ ಸಾಧ್ಯತೆ ಇದೆ.

ಕಬ್ಬನ್ -ಎಂಜಿ ರಸ್ತೆ ನಡುವಿನ ಕಾಮರಾಜ ರಸ್ತೆ 4 ವರ್ಷ ಬಂದ್ಕಬ್ಬನ್ -ಎಂಜಿ ರಸ್ತೆ ನಡುವಿನ ಕಾಮರಾಜ ರಸ್ತೆ 4 ವರ್ಷ ಬಂದ್

ಎಂಜಿ ರಸ್ತೆ ಸೇರಿದಂತೆ ಹಲವು ರಸ್ತೆಗಳಲ್ಲಿ ವೈಟ್‌ಟಾಪಿಂಗ್ ಕಾಮಗಾರಿ ಕೈಗೊಳ್ಳಲು ಯೋಜನೆ ರೂಪಿಸಲಾಗಿದೆ. ಮೂರನೇ ಹಂತದ ವೈಟ್‌ ಟಾಪಿಂಗ್ ಯೋಜನೆಯಲ್ಲಿ ಈ ಕಾಮಗಾರಿ ನಡೆಯಲಿದೆ.

Only God can save us MG Road get white topping soon

ಮೂರನೇ ಹಂತದಲ್ಲಿ 120 ಕಿ.ಮೀ ಉದ್ದದ ರಸ್ತೆಗಳಿಗೆ ವೈಟ್ ಟಾಪಿಂಗ್ ಮಾಡಲು ಪಾಲಿಕೆ ಉದ್ದೇಶಿಸಿದೆ. ಇದಕ್ಕೆ ಒಂದು ಸಾವಿರ ಕೋಟಿ ರೂ ವೆಚ್ಚಮಾಡಲಾಗುತ್ತಿದೆ. ಎಂಜಿ ರಸ್ತೆ, ಕನ್ನಿಂಗ್‌ ಹ್ಯಾಂ ರಸ್ತೆ, ಕಬ್ಬನ್ ರಸ್ತೆ ಸೇರಿದಂತೆ ಹಲವು ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ.

ಸಂಘ-ಸಂಸ್ಥೆಗಳು, ಸಾರ್ವಜನಿಕರು ಮತ್ತು ತಜ್ಞರು ಅವೈಜ್ಞಾನಿಕ ವೈಟ್ ಟಾಪಿಂಗ್ ಕಾಮಗಾರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಮೊದಲ ಹಂತದಲ್ಲಿ 93.4 ಕಿ.ಮೀ, ಎರಡನೇ ಹಂತದಲ್ಲಿ 63 ಕಿ.ಮೀ ಮೂರನೇ ಹಂತದಲ್ಲಿ 120 ಕಿ.ಮೀ ಉದ್ದದ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ.

ಕಾಮಗಾರಿ ಮುಗಿದ ಬಳಿಕ ವೈಟ್ ಟಾಪಿಂಗ್ ರಸ್ತೆಯನ್ನು ಅಗೆಯುವುದು, ತೇಪೆ ಹಾಕುವುದು ಕಷ್ಟವಾಗಲಿದೆ. ವೈಟ್ ಟಾಪಿಂಗ್ ಕಾಮಗಾರಿ ಕೈಗೊಳ್ಳುವ ರಸ್ತೆಗಳಲ್ಲಿ ಒಳಚರಂಡಿ, ಕುಡಿಯುವ ನೀರಿನ ಪೈಪು, ಕೊಳವೆ ಅಡವಳಿಕೆ, ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಬೇಕು.

English summary
Only God can save us MG Road get white topping soon, MG Road is among the 95 roads that BBMP wants to concretise in third place.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X