ಬೆಂಗಳೂರು: ಕಿಮ್ಸ್ ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆ ಸ್ಥಗಿತ
ಬೆಂಗಳೂರು, ಜು.16: ಕಿಮ್ಸ್ ಆಸ್ಪತ್ರೆಯಲ್ಲಿ ಕಾನೂನು ಬಾಹಿರವಾಗಿ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ, ಈ ಸಿಬ್ಬಂದಿಯನ್ನು ಕೂಡಲೇ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಕಿಮ್ಸ್ ಆಸ್ಪತ್ರೆ ಹೊರರೋಗಿಗಳ ವಿಭಾಗವನ್ನು ಸೋಮವಾರ(ಜುಲೈ16) ಬಂದ್ ಮಾಡಲು ನಿರ್ಧರಿಸಿದ್ದಾರೆ.
ಕಾನೂನು ಬಾಹಿರವಾಗಿ ನೇಮಕಗೊಂಡಿರುವ ಅನಗತ್ಯ ಸಿಬ್ಬಂದಿಗಳನ್ನು ಕಿಮ್ಸ್ ಮಂಡಳಿ ಕೈಬಿಟ್ಟಿಲ್ಲ ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವೈದ್ಯರು ಈ ಒಪಿಡಿ ಬಂದ್ ಕ್ರಮಕ್ಕೆ ಮುಂದಾಗಿದ್ದಾರೆ. ರಾಜ್ಯ ಒಕ್ಕಲಿಗರ ಸಂಘದ ಎಲ್ಲ 18 ಸಂಸ್ಥೆಗಳ ಸಿಬ್ಬಂದಿ ಕರೆ ನೀಡಿದ್ದಾರೆ.
ಕಿಮ್ಸ್ ನೌಕರರ ಪ್ರತಿಭಟನೆಗೆ ಮಣಿದಿದ್ದ ರಾಜ್ಯ ಒಕ್ಕಲಿಗರ ಸಂಘ, 280ಕ್ಕಿಂತ ಹೆಚ್ಚುವರಿ ಬೋಧಕೇತರ ಸಿಬ್ಬಂದಿ ಬೇಡಿಕೆ ಇರುವಲ್ಲಿ ವರ್ಗಾವಣೆ ಮಾಡುವುದಾಗಿ ಲಿಖಿತ ಭರವಸೆ ನೀಡಿತ್ತು. ಆದರೆ ಕೊಟ್ಟ ಮಾತಿಗೆ ತಪ್ಪಿದೆ, ಹೆಚ್ಚುವರಿ ಸಿಬ್ಬಂದಿ ಕೆಲಸಕ್ಕೆ ಬರುತ್ತಲೇ ಇದ್ದಾರೆ.

ಕಿಮ್ಸ್ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜು, ದಂತ ವೈದ್ಯ ಕಾಲೇಜು ಹೊರ ರೋಗಿಗಳ ಸೇವೆ ಬಂದ್‌ಗೆ ಕರೆ ನೀಡಲಾಗಿದೆ. ಶಾಲಾ-ಕಾಲೇಜುಗಳ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ.
ಜು.14ರವರೆಗೆ ಬೇಡಿಕೆ ಈಡೇರಿಸದಿದ್ದರೆ 16ರಿಂದ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು ಈ ಕುರಿತು ಪತ್ರವನ್ನೂ ಬರೆಯಲಾಗಿತ್ತು. ಆದರೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಒಕ್ಕಲಿಗರ ಸಂಘದ ಎಂಪ್ಲಾಯೀಸ್ ಅಸೋಸಿಯೇಷನ್‌ನ ಸದಸ್ಯರು ತಿಳಿಸಿದ್ದಾರೆ.












Click it and Unblock the Notifications