ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುನ್ನೆಚ್ಚರಿಕೆಯೊಂದಿಗೆ ರೆಸ್ಟೋರೆಂಟ್ ತೆರೆಯಿರಿ- ಮುಖ್ಯಮಂತ್ರಿ ಸೂಚನೆ

|
Google Oneindia Kannada News

ಬೆಂಗಳೂರು, ಜೂನ್ 6: ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ರಾಜ್ಯದಲ್ಲಿ ಹೋಟೆಲ್ ಗಳು, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಆದರೆ ನಿಗದಿ ಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.

Recommended Video

Sanitizer company claiming to destroy corona fined by high court| Devtol Sanitizer |Oneindia Kannada

ಕೊವಿಡ್ ನಿಯಂತ್ರಿಸುವ ಉದ್ದೇಶದಿಂದ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದಾಗಿ ಹೋಟೆಲ್ ಗಳ ಸಂಘದ ಪ್ರತಿನಿಧಿಗಳು ಮತ್ತು ಸಾರಿಗೆ ಕಂಪೆನಿಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದರು.

'ಬದಲಾಗು ನೀನು, ಬದಲಾಯಿಸು ನೀನು' ಹಾಡು ಲೋಕಾರ್ಪಣೆ ಮಾಡಿದ ಸಿಎಂ'ಬದಲಾಗು ನೀನು, ಬದಲಾಯಿಸು ನೀನು' ಹಾಡು ಲೋಕಾರ್ಪಣೆ ಮಾಡಿದ ಸಿಎಂ

ಇನ್ನು ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಾಗೂ ಕೆಲವು ತೊಡಕುಗಳ ನಿವಾರಣೆ ಕುರಿತು ಪ್ರವಾಸೋದ್ಯಮ ಹಾಗೂ ಸಾರಿಗೆ ಇಲಾಖೆ ಮತ್ತು ವಿವಿಧ ಭಾಗೀದಾರರ ಜೊತೆಗೆಸಿಎಂ ಚರ್ಚೆ ನಡೆಸಿದರು.

Open restaurants with Correct precautions said CM Yediyurappa

ಈ ಸಭೆಯಲ್ಲಿ ಬಸ್ ಮಾಲೀಕರ ಸಂಘ ಹೋಟೆಲ್ ಮಾಲೀಕರ‌ ಸಂಘ ಹಾಗು ಟ್ಯಾಕ್ಸಿ ಮಾಲಿಕರ‌ ಸಂಘಗಳ ನಿಯೋಗವು ಸರ್ಕಾರದ ಮುಂದೆ‌ ಕೆಲ ಬೇಡಿಕೆಗಳನ್ನು‌ ಮುಂದಿಟ್ಟಿದ್ದಾರೆ. ಅವರ ಬೇಡಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಆಶ್ವಾಸನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪ್ರವಾಸೋದ್ಯಮ ಇಲಾಖೆಯು ಹೋಟೆಲ್ ಗಳು, ಆತಿಥ್ಯ ಘಟಕಗಳು ಮತ್ತು ಪ್ರವಾಸಿ ತಾಣಗಳನ್ನು ತೆರೆಯುವ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕೈಪಿಡಿಯನ್ನು ಬಿಡುಗಡೆ ಮಾಡಿದರು.

ಹೋಟೆಲ್, ರೆಸ್ಟೋರೆಂಟ್ ತೆರೆಯಲು ಮಾರ್ಗಸೂಚಿ ಪ್ರಕಟಿಸಿದ ಕೇಂದ್ರಹೋಟೆಲ್, ರೆಸ್ಟೋರೆಂಟ್ ತೆರೆಯಲು ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ

ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರುತಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

English summary
From june 8th restaurants will open all over nation. so, karnataka CM Yediyurappa has suggest restaurants owners to ''take Correct precautions''.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X