ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿ: ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಜೂನ್ 15: ಕೊರೊನಾ ಸೋಂಕಿನಿಂದ ಮೃತಪಟ್ಟಿರುವವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಮೃತರ ಕುಟುಂಬಕ್ಕೆ 1 ಲಕ್ಷ ಕೊಡುವ ನಿರ್ಧಾರ ಮಾಡಿರುವುದು ಸರಿಯಲ್ಲ 5 ಲಕ್ಷ ರೂ. ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಹಾಗೆಯೇ ಕೊರೊನಾ ಸೋಂಕನ್ನು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಿ ಅದರ ನಿಯಮದಂತೆ ಪರಿಹಾರ ಒದಗಿಸಬೇಕು ಎಂದು ಹೇಳಿದ್ದಾರೆ.

ಮೋದಿ ಜನರಿಗೆ ನರಕ ತೋರಿಸುತ್ತಿದ್ದಾರೆ; ಕಿಡಿಕಾರಿದ ಸಿದ್ದರಾಮಯ್ಯಮೋದಿ ಜನರಿಗೆ ನರಕ ತೋರಿಸುತ್ತಿದ್ದಾರೆ; ಕಿಡಿಕಾರಿದ ಸಿದ್ದರಾಮಯ್ಯ

ಕೊರೊನಾಗೆ ಬಲಿಯಾದವರ ಕುಟುಂಬಕ್ಕೆ ಒಂದು ಲಕ್ಷ ರೂ ಪರಿಹಾರ ನೀಡಲಾಗುವುದು. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತೆ ಎಂದು ಸಿಎಂ ಯಡಿಯೂರಪ್ಪ ಪ್ರಕಟಿಸಿದ್ದಾರೆ.

ಅದರೊಂದಿಗೆ ಇದು ಬಿಪಿಎಲ್ ಪಡಿತರದಾರರಿಗೆ ಮಾತ್ರ ಅನ್ವಯವಾಗಲಿದೆ. ಬಿಪಿಎಲ್ ಪಡಿತರದಾರ ಕುಟುಂಬದ ವಯಸ್ಕರು ಮೃತಪಟ್ಟಿದ್ದರೆ ಒಬ್ಬರಿಗೆ ಪರಿಹಾರ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಲು ಸಾಧ್ಯವಿದೆ. ಕೇಂದ್ರಕ್ಕೆ ಮನವರಿಕೆ ಮಾಡಿ ಈ ಅವಕಾಶ ಬಳಸಿಕೊಳ್ಳಬೇಕು ಎಂದು ವಿಪಕ್ಷ ನಾಯಕರೂ ಆಗಿರುವ ಅವರು ಆಗ್ರಹಿಸಿದ್ದಾರೆ. ಕೋವಿಡ್ ಸೊಂಕಿನಿಂದ ದುಡಿಯುವ ವ್ಯಕ್ತಿಗಳು ಮೃತ ಪಟ್ಟು ಅನೇಕ ಕುಟುಂಬಗಳು ಕಷ್ಟ ಪಡ್ತಾ ಇದ್ದಾರೆ.

ಇದನ್ನು ಅರಿತು ದುಡಿಯುವ ವ್ಯಕ್ತಿ ಮೃತ ಪಟ್ಟರೇ ಒಂದು ಕುಟುಂಬಕ್ಕೆ ಒಬ್ಬರಂತೆ ಒಂದು ಲಕ್ಷ ರೂ ನೀಡಲಾಗುತ್ತದೆ. ಬಿಪಿಎಲ್ ಕುಟುಂಬಗಳ ವಯಸ್ಕರು ಮೃತ ಪಟ್ಟಿದ್ರೆ ಒಂದು ಕುಟುಂಬಕ್ಕೆ ಒಬ್ಬರಂತೆ 1 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇದಕ್ಕಾಗಿ ಸುಮಾರು 250-300 ಕೋಟಿ ರೂ. ಖರ್ಚಾಗುತ್ತದೆ.

Opposition Leader Siddaramaiah Urges Govt To Increase The Relief Fund To COVID 19 Death Family

ದೇಶದಲ್ಲೇ ಮೊದಲ ಬಾರಿಗೆ ಇಂತಹ ಹಣಕಾಸು ನೆರವನ್ನು ನಾವು ನೀಡುತ್ತಿದ್ದೇವೆ. ಹಣಕಾಸಿನ‌ ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇನೆ. ಈಗ ಬಿಪಿಎಲ್ ಕುಟುಂಬಕ್ಕೆ ಪರಿಹಾರ ಕೊಡುತ್ತಿದ್ದೇವೆ ಅಂದರೆ ಇದರ ಅರ್ಥ ಹಣಕಾಸಿನ ಪರಿಸ್ಥಿತಿ ಇರೋದರಲ್ಲಿಯೇ ಉತ್ತಮವಾಗಿದೆ ಎಂಬುದು ತಿಳಿದುಬರುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಅದಕ್ಕೂ ಮುನ್ನ ತೆರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಭೆ ನಡೆಸಿದ್ದರು. ''ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಪ್ರತಿಕೂಲ ಪರಿಸ್ಥಿತಿ ಇದ್ದರೂ ತೆರಿಗೆ ಸಂಗ್ರಹ ತೃಪ್ತಿದಾಯಕವಾಗಿದ್ದು, ಕೋವಿಡ್ ನಿಯಂತ್ರಣ ನಿರ್ಬಂಧಗಳನ್ನು ಹಿಂಪಡೆದ ನಂತರ ತೆರಿಗೆ ಸಂಗ್ರಹ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ'' ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆರ್ಥಿಕ ಇಲಾಖೆ, ವಾಣಿಜ್ಯ ತೆರಿಗೆ ಇಲಾಖೆ ಮತ್ತು ಅಬಕಾರಿ ಇಲಾಖೆಯ ತೆರಿಗೆ ಸಂಗ್ರಹ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಈ ವೇಳೆ ಅಧಿಕಾರಿಗಳು ವಾಣಿಜ್ಯ ತೆರಿಗೆ ಇಲಾಖೆಯಲ್ಲಿ 2021-21ನೇ ಸಾಲಿನಲ್ಲಿ 82,443 ಕೋಟಿ ರೂ. ತೆರಿಗೆ ಸಂಗ್ರಹದ ಗುರಿ ನೀಡಲಾಗಿದ್ದು, 82,462 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ.

Recommended Video

ಕೊರೊನಾ ಲಸಿಕೆಯಿಂದ ವ್ಯಕ್ತಿಯ ಸಾವಾಗಿದೆ ಅನ್ನೋದನ್ನ ಒಪ್ಪಿಕೊಂಡ ಕೇಂದ್ರ ಸರ್ಕಾರ | Oneindia Kannada

ಇದರಲ್ಲಿ 65,659 ಕೋಟಿ ರೂ ಜಿಎಸ್‌ಟಿ ಮೂಲಕ, ಪೆಟ್ರೋಲ್/ಡೀಸೆಲ್ ಮೇಲಿನ ತೆರಿಗೆಮೂಲಕ 15,861 ಕೋಟಿ ರೂ, ಹಾಗೂ ವೃತ್ತಿ ತೆರಿಗೆ ಮೂಲಕ 942 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಪ್ರಸ್ತುತ ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ಒಟ್ಟು 11,409 ಕೋಟಿ ರೂ. ತೆರಿಗೆ ಸಂಗ್ರಹವಾಗಿದ್ದು, ವಾರ್ಷಿಕ ಗುರಿಯ ಶೇ. 14.92 ರಷ್ಟು ಸಾಧನೆಯಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.

English summary
Former Chief minister Siddaramaiah Urged CM Yediyurappa to consider this as a national disaster and announce compensation of Rs.5,00,000 as per disaster relief norms.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X