ನಾಳೆ ಸಿದ್ದರಾಮಯ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು, ಆ. 12: ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈಗ ಸಂಪೂರ್ಣ ಗುಣಮುಖರಾಗಿದ್ದಾರೆ.
Recommended Video
KG Halli , DG Halli ಪರಿಸ್ಥಿತಿ ಈಗ ಹೇಗಿದೆ | Oneindia Kannada
ನಿನ್ನೆ ಎರಡನೇ ಬಾರಿ ನಡೆಸಿದ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆಯಲ್ಲಿ ಕೋವಿಡ್ ನೆಗೆಟಿವ್ ಬಂದಿದೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ಅವರಿಗೆ ತಿಳಿಸಿದ್ದಾರೆ.
ಕಳೆದ ಮಂಗಳವಾರ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆರಂಭದ ಎರಡು ದಿನ ಮಾತ್ರ ಜ್ವರ ಕಾಣಿಸಿಕೊಂಡಿಸಿತ್ತು. ಉಳಿದಂತೆ ಸೋಂಕಿನ ಲಕ್ಷಣ ಇರಲಿಲ್ಲ. ಹೀಗಾಗಿ ಸಿದ್ದರಾಮಯ್ಯ ಅವರು ನಾಳೆ ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರು ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಮತ್ತೆ ನಾಲ್ಕು ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿ ಇರಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿ, ಗುಣಮುಖರಾಗಿದ್ದಾರೆ.












Click it and Unblock the Notifications